Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಿತ್ತೂರ ರಾಣಿ ಚೆನ್ನಮ್ಮ ಶೌರ್ಯದ ಪ್ರತೀಕ :ಎಡಿಸಿ ಗೆಣ್ಣೂರ
(ರಾಜ್ಯ ) ಜಿಲ್ಲೆ

ಕಿತ್ತೂರ ರಾಣಿ ಚೆನ್ನಮ್ಮ ಶೌರ್ಯದ ಪ್ರತೀಕ :ಎಡಿಸಿ ಗೆಣ್ಣೂರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ | ಭಾವಚಿತ್ರ ಮೆರವಣಿಗೆ | ವಿಶೇಷ ಉಪನ್ಯಾಸ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವೀರ ರಾಣಿ ಕಿತ್ತೂರು ಚೆನ್ನಮ್ಮ ಇತಿಹಾಸದ ಪುಟಗಳಲ್ಲಿ ಶೌರ್ಯದ ಪ್ರತೀಕವಾಗಿ ಗುರುತಿಸಲ್ಪಟ್ಟ ವೀರ ಮಹಿಳಾ ಹೋರಾಟಗಾರ್ತಿ. ಬ್ರಿಟೀಷರ ವಿರುದ್ಧ ಸಮರಸಾರಿ ಇಡೀ ದೇಶವೇ ಸ್ವಾತಂತ್ರ ಸಂಗ್ರಾಮಕ್ಕೆ ದುಮ್ಮಿಕ್ಕುವಂತೆ ಪ್ರೇರಣೆ ನೀಡಿದ ರಾಣಿ ಚೆನ್ನಮ್ಮಳ ಇತಿಹಾಸ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ನಡೆದ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾಯ್ದೆಯ ವಿರುದ್ಧ ಹೋರಾಟ ಮಾಡಿ, ಸಹಾಯಕ ಸೈನ್ಯ ಪದ್ಧತಿಯನ್ನು ತಿರಸ್ಕರಿಸಿದ ಚೆನ್ನಮ್ಮಳ ದೈರ್ಯ, ಸಾಹಸಗಾಥೆಗಳನ್ನು ಇಂದಿನ ಹೆಣ್ಣುಮಕ್ಕಳು ಅರಿಯಬೇಕು. ಇತಿಹಾಸ ಅರಿತವರು ಇತಿಹಾಸ ನಿರ್ಮಿಸುತ್ತಾರೆ ಎಂಬಂತೆ ಇಂದಿನ ಪೀಳಿಗೆಗೆ ಚೆನ್ನಮ್ಮಳ ಇತಿಹಾಸದ ಪರಿಚಯ ಮಾಡಿಸುವುದು ಅತ್ಯವಶ್ಯಕವಾಗಿದೆ. ಚೆನ್ನಮ್ಮ ಒಳ್ಳೆಯ ಆಡಳಿತದ ಜೊತೆಗೆ, ಸಂಸ್ಥಾನದ ಅಭಿವೃದ್ಧಿ ಜೊತೆಗೆ ಜನರ ಕಷ್ಟಕಾರ್ಪಣ್ಯಗಳನ್ನು ದೂರಮಾಡಲು ಶ್ರಮಿಸಿದರು. ಅನೇಕ ಜನಪದ ಲಾವಣಿಗಳಲ್ಲಿ ಕಿತ್ತೂರ ರಾಣಿ ಚೆನ್ನಮ್ಮಳ ಸಾಹಸಗಾಥೆ, ಜೀವನ ಚರಿತ್ರೆ ಇಂದಿಗೂ ಜನಮಾನಸದಲ್ಲಿ ನೆಲೆನಿಂತಿವೆ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ಬಾಲ್ಯದಲ್ಲಿಯೇ ಬಿಲ್ಲುಬಾಣ, ಕುದುರೆ ಸವಾರಿ, ಕತ್ತಿವರಸೆಯಂತಹ ಯುದ್ಧಕಲೆ ಕಲಿತ ಚೆನ್ನಮ್ಮ ತಾಯ್ನಾಡಿನ ರಕ್ಷಣೆಗೆ ಬ್ರಿಟಿಷರು ನೀಡಿದ ಸಂಕಷ್ಟದ ಸರಮಾಲೆಗಳನ್ನು ದಿಟ್ಟತನದಿಂದ ಎದುರಿಸಿ ಹೋರಾಟ ಮಾಡಿದ ಧೀರ ಮಹಿಳೆ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ಹೇಳಿದರು.
ಅಂಜುಮನ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಉಜ್ವಲ ಸರನಾಡಗೌಡ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಮುಖಂಡ ಬಿ.ಎಂ. ಪಾಟೀಲ ಉಪಸ್ಥಿತರಿದ್ದರು.
ಶ್ರೀಮತಿ ಅಶ್ವಿನಿ ಹಿರೇಮಠ ತಂಡದಿಂದ ಸುಗಮ ಸಂಗೀತ ನಡೆಯಿತು. ಎಚ್.ಎ. ಮಮದಾಪೂರ ನಿರೂಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸಮಾಜದ ಮುಖಂಡರಾದ ಗೀತಾಂಜಲಿ ಪಾಟೀಲ, ಡಾ.ಸುರೇಶ ಬಿರಾದಾರ, ಡಾ.ಮಿನಾಕ್ಷಿ ಪಾಟೀಲ, ವಿದ್ಯಾವತಿ ತುಂಗಳ, ವಿದ್ಯಾವತಿ ಅಂಕಲಗಿ, ಈರಣ್ಣ ಹಿಪ್ಪರಗಿ, ಎಸ್.ಐ. ಬಿರಾದಾರ, ಆರ್.ಡಿ. ಸಾರವಾಡ, ಎಸ್.ವಿ. ಪಾಟೀಲ, ಆರ್.ಡಿ. ದೇಸಾಯಿ, ಎಮ್.ಎಸ್. ಹಾಲಹಳ್ಳಿ, ಗುರುಶಾಂತ ನಿಡೋಳ್ಳಿ, ನಿಂಗಪ್ಪ ಸಂಗಾಪೂರ, ಮಹಾದೇವಿ, ಲಲಿತಾ ಬಿರಾದಾರ, ಶೋಭಾ ಬಿರಾದಾರ, ಗಂಗೂ ಬಿರಾದಾರ, ಜ್ಯೋತಿ ಪಾಗದ, ಬಸಮ್ಮ ಗುಜರಿ, ಎಂ.ಎಂ.ಪಾಟೀಲ, ಸೋಮನಗೌಡ ಕಲ್ಲೂರ, ಬೀಮರಾಯ ಜಿಗಜಿಣಗೆ, ದೇವೆಂದ್ರ ಮೆರೆಕಾರ ಉಪಸ್ಥಿತರಿದ್ದರು.

ಮೆರವಣಿಗೆಗೆ ಡಿಸಿ ಟಿ.ಭೂಬಾಲನ್ ಚಾಲನೆ

ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಚಾಲನೆ ನೀಡಿದರು.
ವಿವಿಧ ವಾದ್ಯಮೇಳ ಕಲಾತಂಡಗಳ ಜೊತೆಗೆ ಮೆರವಣಿಗೆ ನಗರದ ಲಾಲ್ ಬಹದ್ದೂರು ಶಾಸ್ತ್ರಿ ಮಾರುಕಟ್ಟೆ ರಸ್ತೆಯ ಮಾರ್ಗವಾಗಿ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮೂಲಕ ರಂಗಮಂದಿರ ತಲುಪಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.