ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಆರೋಗ್ಯ ಸೇವೆ, ಆರ್ಥಿಕ ಭದ್ರತೆ, ಸಾಮಾಜಿಕ ಪ್ರತ್ಯೇಕತೆ ಮತ್ತು ಹಿರಿಯರ ನಿಂದನೆ ಹೀಗೆ ವೃದ್ಧರಿಗೆ ಸಂಬಂಧಿತ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಹಲವು ಕಾನೂನುಗಳು ಜಾರಿಯಲ್ಲಿದ್ದು ಅವುಗಳ ಸದ್ಬಳಕೆಯಾಗಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚೆಗೆ ಹಿರಿಯ ನಾಗರಿಕರನ್ನು ಅವರ ವಾರಸುದಾರರು ಕಡೆಗಣಿಸುವ ಬಗ್ಗೆ ವರದಿಗಳಾಗಿವೆ. ಯಾರೇ ಹಿರಿಯ ನಾಗರಿಕರಿಗೆ ತೊಂದರೆಯಾದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಗೆ ಸಂಪರ್ಕಿಸಿ ದೂರು ನೀಡಿ ಪರಿಹಾರ ಕಂಡುಕೊಳ್ಳಬಹುದು ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ, ಕಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ ಮಾತನಾಡಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ.ಸತೀಶ ತಿವಾರಿ ಹಿರಿಯ ನಾಗರಿಕರ ದಿನಾಚರಣೆಯ ಕುರಿತು, ಮನೋರೋಗ ತಜ್ಞ ಡಾ.ಮಂಜುನಾಥ ಮಸಳಿ ಮಾನಸಿಕ ರೋಗಿಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ತಾ.ಪಂ ಇಓ ನಿಂಗಪ್ಪ ಮಸಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯಾ ತೇರದಾಳ, ನಿವೃತ್ತ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ರಾಜಶೇಖರ ಮ್ಯಾಗೇರಿ, ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ, ಹಿರಿಯ ನ್ಯಾಯವಾದಿಗಳಾದ ಜೆ.ಎ.ಚಿನಿವಾರ, ಎಸ್.ಆರ್.ಸಜ್ಜನ, ನ್ಯಾಯವಾದಿಗಳಾದ ಎಚ್.ಟಿ.ಪೂಜಾರಿ, ಚೇತನ ಶಿವಶಿಂಪಿ, ಪಿ.ಬಿ.ಜಾಧವ, ರವಿ ನಾಲತವಾಡ, ನ್ಯಾಯಾಲಯದ ಸಿಬ್ಬಂದಿಗಳಾದ ಅರವಿಂದ ಕುಂಬಾರ, ಮಹಾಂತೇಶ ಹಚರೆಡ್ಡಿ, ರಶೀದ ಮನಗೂಳಿ, ಇಸಾಕ ಒಂಟಿ, ನಾಗೇಶ ಮದಿಹಳ್ಳಿ ಸೇರಿದಂತೆ ಪಕ್ಷಗಾರರು ಇದ್ದರು.

