ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಂಡಿ ತಾಲೂಕಿನ ಯಂಕಂಚಿ ೧೧೦ ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಕ್ಯೂರಿಟಿ ಕಂಪೌಂಡ್ ವಾಲ್ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ೩೩/೧೧ಕೆವ್ಹಿ ಗೊಲಗೇರಿಯಿಂದ ಸರಬರಾಜಾಗುವ ಎಲ್ಲಾ ೧೧ ಕೆವ್ಹಿ ಮಾರ್ಗಗಳಿಗೆ ಅ.೨೪ರಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧ ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
