ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ 200 ನೇ ವರ್ಷದ ಜಯಂತಿಯ ಅಂಗವಾಗಿ ಬುಧವಾರ ದೆಹಲಿಯ ಸಂಸತ್ ಸಂಕೀರ್ಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಲೋಕಸಭೆಯ ಸಭಾಪತಿ ಓಂ ಬಿರ್ಲಾ, ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಶಾಸಕ ಬಸನಗೌಡ ಪಾಟೀಲ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರೊಂದಿಗೆ ಸೇರಿ ಕಿತ್ತೂರು ರಾಣಿ ಚೆನ್ನಮ್ಮಳ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು .
ಈ ಸಂದರ್ಭದಲ್ಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಹಾಗೂ ದೆಹಲಿ ಕರ್ನಾಟಕ ಸಂಘದ ಪ್ರಮುಖರು ಹಾಗೂ ಅಭಿಮಾನಿ ಸಮೂಹ ಉಪಸ್ಥಿತರಿದ್ದರು.