Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ಯೂಆರ್ಕೋಡ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ :ಸಿಇಓ ರಿಷಿ ಆನಂದ
(ರಾಜ್ಯ ) ಜಿಲ್ಲೆ

ಕ್ಯೂಆರ್ಕೋಡ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ :ಸಿಇಓ ರಿಷಿ ಆನಂದ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲೆಯಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ | ನರೇಗಾ ಯೋಜನೆಯಡಿ ವೈಯಕ್ತಿಕ-ಸಮುದಾಯ ಕಾಮಗಾರಿಗೆ ಅರ್ಜಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ೨೦೨೫-೨೬ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ವಿಜಯಪುರ ಜಿಲ್ಲೆಯ ೧೩ ತಾಲೂಕುಗಳ ೨೧೧ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಗ್ರಾಮ ಪಂಚಾಯತಿ ಜನಪ್ರತಿನಿಧಿಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ, ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಬಿ.ಎಫ್.ಟಿ ಗ್ರಾಮ ಕಾಯಕ ಮಿತ್ರರು ಒಟ್ಟುಗೂಡಿ “ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ಅಭಿಯಾನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ.
ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ೨೦೨೫-೨೬ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನದ ಮೂಲಕ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಸಾರ್ವಜನಿಕರಿಗೆ ನರೇಗಾ ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವೈಯಕ್ತಿಕ/ಸಮುದಾಯ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಲು ರೈತರು ಹಾಗೂ ನರೇಗಾ ಕೂಲಿಕಾರ್ಮಿಕರು ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವ ಜೊತೆಗೆ ತಮ್ಮ ಬಳಿ ಇರುವ ಸ್ಮಾರ್ಟ್ ಫೋನ್ ಮೂಲಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ತಮಗೆ ಬೇಕಿರುವ ವೈಯಕ್ತಿಕ /ಸಮುದಾಯ ಕಾಮಗಾರಿಗಳಿಗೆ ಆನ್ ಲೈನ್ ನಲ್ಲಿಯೇ “ಕ್ಯೂ ಆರ್” ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಅಥವಾ https://mgnrega.karnataka.gov.in/ ಲಿಂಕ್ ಮೂಲಕ ವೈಯಕ್ತಿಕ/ ಸಮುದಾಯ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
“ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ಅಭಿಯಾನದಡಿ ಜಿಲ್ಲೆಯ ೨೧೧ ಗ್ರಾಮ ಪಂಚಾಯತಿಗಳ ರೈತರು ಹಾಗೂ ನರೇಗಾ ಕೂಲಿಕಾರರು ಗ್ರಾಮ ಪಂಚಾಯತಿ ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಅರಣ್ಯ ಇಲಾಖೆಗಳಲ್ಲಿ ಕಾಮಗಾರಿಗಳ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಕ್ಟೋಬರ್ ೨ ರಿಂದ ನವ್ಹೆಂಬರ್ ೧೦ರ ವರೆಗೆ ವಿಶೇಷ ಗ್ರಾಮ ಸಭೆ ನಡೆಸಿ, ಪ್ರತಿ ಗ್ರಾಮ ಪಂಚಾಯತಿಯಲ್ಲಿ ಬೇಡಿಕೆ ಪೆಟ್ಟಿಗೆ, ಮನೆ-ಮನೆ ಭೇಟಿ, ವೈಯಕ್ತಿಕ ಕಾಮಗಾರಿಗಳ ಮಾಹಿತಿಯುಳ್ಳ ಕರಪತ್ರಗಳನ್ನು ಹಂಚಿಕೆ ಮಾಡಿ ಬೇಡಿಕೆ ಸಂಗ್ರಹಿಸಲಾಗುತ್ತಿದೆ. ಈ ಎಲ್ಲ ಬೇಡಿಕೆಗಳ ಅರ್ಜಿಗಳನ್ನು ಒಳಗೊಂಡು ವಾರ್ಡ್ ಸಭೆ ನಂತರ ಗ್ರಾಮ ಸಭೆ ನಡೆಸಲಾಗುತ್ತಿದ್ದು, ಪ್ರತಿ ಗ್ರಾಮ ಪಂಚಾಯತಿಯಲ್ಲಿ ನಡೆಯುವ ಗ್ರಾಮ ಸಭೆಗಳಿಗೆ ಸ್ವ-ಸಹಾಯ ಸಂಘಗಳ ಸದಸ್ಯರು, ರೈತರು, ಸಾರ್ವಜನಿಕರು ಹಾಗೂ ನರೇಗಾ ಕೂಲಿಕಾರ್ಮಿಕರೆಲ್ಲರೂ ಭಾಗವಹಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.