ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳ ಮಾಹಿತಿ, ದೌರ್ಜನ್ಯ ಪ್ರಕರಣಗಳ ಕುರಿತು ಅರಿವು ಹಾಗೂ ಅಸ್ಪಶೃತೆ ನಿವಾರಣೆ ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅ.೨೮ರಂದು ಬೆಳಿಗ್ಗೆ ೧೦-೩೦ರಿಂದ ೩-೩೦ರವರೆಗೆ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಗ್ರಾಮೀಣ-ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಹಾಗೂ ಉಪ ವಿಭಾಗ ಮಟ್ಟದ ಜಾಗೃತಿ ಸಮಿತಿ ಸದಸ್ಯರುಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜಿಲ್ಲಾ-ತಾಲೂಕಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
