ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.

ವಾಣಿಜ್ಯ ವಿಭಾಗದ ಆದರ್ಶ ಕುಲಕರ್ಣಿ ಶೇ. 98.20(589/600) ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ವಿಧಿ ಪೋರವಾಲ ಶೇ. 98(588/600) ಜಿಲ್ಲೆಗೆ ದ್ವಿತೀಯ ಮತ್ತು ಮಯೂರ ಚೆಡ್ಡಾ ಶೇ. 97.66(586/600) ಅಂಕ ಪಡೆದು ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾನೆ.
ವಿಜ್ಞಾನ ವಿಭಾಗದ ವಿದ್ಯಾರ್ಥಿ ಅನೀಶ ಕುಲಕರ್ಣಿ ಶೇ. 98.20(589) ಜಿಲ್ಲೆಗೆ ದ್ವಿತೀಯ, ಕೀರ್ತಿ ಪಟ್ಟಣಶೆಟ್ಟಿ ಶೇ. 95.80(575/600) ಮತ್ತು ದಿವ್ಯಾ ರುಣವಾಲ ಶೇ. 94.80(569/600) ಅಂಕ ಪಡೆದು ಗಮನ ಸೆಳೆದಿದ್ದಾರೆ.
ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ ಪರೀಕ್ಷೆಗೆ ಹಾಜರಾದ ಒಟ್ಟು 74 ವಿದ್ಯಾರ್ಥಿಗಳು ಉನ್ನತ ಶ್ರೇಣಿ(ಡಿಸ್ಟಿಂಕ್ಷನ್) ಹಾಗೂ 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಿಜ್ಞಾನ ವಿಭಾಗದ ಒಟ್ಟು 53 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಉನ್ನತ ಶ್ರೇಣಿ(ಡಿಸ್ಟಿಂಕ್ಷನ್) ಮತ್ತು 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ನಿರ್ದೇಶಕರಾದ ಸುನೀಲಗೌಡ ಪಾಟೀಲ, ಬಸನಗೌಡ ಪಾಟೀಲ, ಆಡಳಿತ ಮಂಡಳಿಯ ನಿರ್ದೇಶಕರು, ಸದಸ್ಯರು, ಕಾಲೇಜಿನ ಪ್ರಾಚಾರ್ಯರು, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
