Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೀಪಾವಳಿ: ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯ :ಡಿಸಿ
(ರಾಜ್ಯ ) ಜಿಲ್ಲೆ

ದೀಪಾವಳಿ: ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯ :ಡಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಕೆಲವೊಂದು ಕಡೆ ತಾತ್ಕಾಲಿಕ ಹಾಗೂ ಖಾಯಂ ವ್ಯಾಪಾರಸ್ಥರು ಪಟಾಕಿ ಮಾರಾಟ ಮಾಡಲು ಜಿಲ್ಲಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಪಟಾಕಿ ಮಾರಾಟಗಾರರು ಸೋಮವಾರದೊಳಗೆ ಜಿಲ್ಲಾಡಳಿತಕ್ಕೆ ದಾಖಲಾತಿಗಳನ್ನು ಸಲ್ಲಿಸಿ ಪರವಾನಿಗೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಜಿಲ್ಲೆಯ ವಿವಿಧ ಪಟಾಕಿ ವ್ಯಾಪಾರಸ್ಥರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ತಾಲೂಕಾ ಮಟ್ಟದಲ್ಲಿ ತಹಶೀಲ್ದಾರ ಅವರು ಜಂಟಿ ಸಮೀಕ್ಷಾ ನಡೆದ ಪರವನಿಗೆಗೆ ಶಿಫಾರಸು ಮಾಡಬೇಕು. ವ್ಯಾಪಾರಸ್ಥರು ಪಟಾಕಿಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ಹಾಕಲು ಪ್ರತ್ಯೇಕ ಜಾಗ ಗುರುತಿಸಬೇಕು. ಎಲ್ಲಾ ವ್ಯಾಪಾರಸ್ಥರು ಸುರಕ್ಷಿತ ವಿಧಾನಗಳನ್ನು ಅಳವಡಿಸಿಕೊಂಡಿರುವುದನ್ನು ಖಾತ್ರಿಪಡಿಸಿಕೊಂಡು ಪರವಾನಿಗೆಗೆ ಸಂಬಂಧಿಸಿದ ಅಧಿಕಾರಿಗಳು ಶಿಫಾರಸ್ಸು ಮಾಡಬೇಕು. ಜನನಿಬಿಡ ಪ್ರದೇಶದಲ್ಲಿ ಪಟಾಕಿ ಮಾರಾಟವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಬಗ್ಗೆ ನಾಳೆಯೇ ಎಲ್ಲಾ ತಾಲೂಕಿನಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ಸಮಿತಿ ರಚಿಸಿಕೊಂಡು ಪಟಾಕಿ ವ್ಯಾಪಾರಸ್ಥರ ಸಭೆ ನಡೆಸಿ ಬೆಂಕಿ-ಅವಘಡಗಳು ಸಂಭವಿಸದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಅಗತ್ಯ ಸೂಚನೆಗಳನ್ನು ನೀಡುವಂತೆ ಅವರು ಸೂಚನೆ ನೀಡಿದರು.
ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಪರವಾನಿಗೆ ನೀಡಲಾಗುವುದು. ಅಂಗಡಿಗಳಲ್ಲಿ ಅಗತ್ಯಕ್ಕಿಂತ ಜಾಸ್ತಿ ಪ್ರಮಾಣದಲ್ಲಿ ಪಟಾಕಿಗಳ ಸಂಗ್ರಹಣೆ ಮಾಡಕೂಡದು. ಬೆಂಕಿ ಅವಘಡ ಸಂಭವಿಸದಂತೆ, ಮರಳು, ನೀರು, ಅಗ್ನಿ ನಿರೋಧಕ ಮುಂಜಾಗೃತ ಕ್ರಮಗಳನ್ನು ಅಳವಡಿಸಿಕೊಂಡಿರುವ ಕುರಿತು ಕೂಲಂಕೂಷವಾಗಿ ಪರಿಶೀಲನೆ ನಡೆಸಿದ ನಂತರವೇ ಸಂಬAಧಿಸಿದ ತಹಶೀಲ್ದಾರರು ಪರವಾನಿಗೆಗೆ ಶಿಫಾರಸ್ಸು ಮಾಡಬೇಕು ಎಂದು ಹೇಳಿದರು.
ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯಿತಿ, ನಗರ ಪ್ರದೇಶಗಳಲ್ಲಿ ಪಟಾಕಿ ಅಂಗಡಿಗಳಿಗೆ ಗುರುತಿಸಿದ ಪ್ರದೇಶಗಳಲ್ಲಿ ಅಂಗಡಿಗಳ ನಡುವೆ ಸಾಕಷ್ಟು ಅಂತರ ಇರುವಂತೆ ನೋಡಿಕೊಳ್ಳಬೇಕು. ಸಂತೆ, ಶಾಲೆ, ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಪಟಾಕಿ ಅಂಗಡಿ ಹಾಕದಂತೆ ನೋಡಿಕೊಳ್ಳಬೇಕು. ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯ ಪ್ರಕಾರ ಹಸಿರು ಪಟಾಕಿ ಸಿಡಿಸಲು ಅವಕಾಶ ಇದ್ದು, ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ವಿಜಯಪುರ ಉಪವಿಭಾಗಾಧಿಕಾರಿ, ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಅಭೀದ್ ಗದ್ಯಾಳ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.