Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ-ಸುರಕ್ಷಾ ಪರಿಕರ ಒದಗಿಸಿ
(ರಾಜ್ಯ ) ಜಿಲ್ಲೆ

ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ-ಸುರಕ್ಷಾ ಪರಿಕರ ಒದಗಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ಕುರಿತು ತೀವ್ರ ಕಾಳಜಿ ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಬೇಕು. ನಿಗದಿತ ಕನಿಷ್ಠ ವೇತನ ಪಾವತಿ, ಜೀವ ವಿಮೆ ಸೌಲಭ್ಯ, ಉಪಹಾರ, ಸುರಕ್ಷತಾ ಪರಿಕರಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಮ್ಯಾನ್ಯುವೆಲ್ ಸ್ಕಾö್ಯವೆಂರ‍್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ ೨೦೧೩ರ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪೌರಕಾರ್ಮಿಕರು, ಸ್ವಚ್ಛತಾ ಕೆಲಸಗಾರರಿಗೆ ಅತ್ಯುತ್ತಮ ಗುಣಮಟ್ಟದ ಪರಿಕರ ಹಾಗೂ ಸಮವಸ್ತç ಒದಗಿಸಬೇಕು. ಪೌರಕಾರ್ಮಿಕರಿಗೆ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸುವಂತೆ ಸುರಕ್ಷಾ ಕಿಟ್-ಪರಿಕರ ಬಗ್ಗೆ ತರಬೇತಿ ಹಮ್ಮಿಕೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಖಾಯಂ ನೇರಪಾವತಿ-ಗುತ್ತಿಗೆ ಆಧಾರದ ಇರುವವರಿಗೆ ಕಡ್ಡಾಯವಾಗಿ ಇಎಸ್‌ಐ, ಪಿಎಫ್ ವಿಮೆ ಸೌಲಭ್ಯ ದೊರಕಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ನಗರ ಸ್ವಚ್ಛತೆ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಪ್ರಥಮಾದ್ಯತೆಯ ಮೇಲೆ ಮೂಲಸೌಲಭ್ಯ ಒದಗಿಸುವಂತೆ ತಿಳಿಸಿದ ಅವರು, ನವೆಂಬರ್ ೧ ರೊಳಗೆ ಗೃಹಭಾಗ್ಯ ಯೋಜನೆಯ ಮನೆಗಳನ್ನು ಪೌರಕಾರ್ಮಿಕರಿಗೆ ಹಸ್ತಾಂತರ ಮಾಡುವಂತೆ ಮಹಾನಗರ ಪಾಲಿಕೆಗೆ ಅವರು ಸೂಚನೆ ನೀಡಿದರು.
ಹೊಸದಾಗಿ ಪೌರಕಾರ್ಮಿಕರಿಗಾಗಿ ನಿರ್ಮಿಸಿದ ವಸತಿ ಸಮುಚ್ಛಗಳಿಗೆ ಸೂಕ್ತ ಬಸ್ ಸೌಲಭ್ಯ ಕಲ್ಪಿಸಬೇಕು. ಪೌರಕಾರ್ಮಿಕರ ಮಕ್ಕಳಿಗೆ ಜಿಲ್ಲೆಯಲ್ಲಿರುವ ವಸತಿ ಶಾಲೆಗಳಲ್ಲಿ ಪ್ರವೇಶಾವಕಾಸ ಕಲ್ಪಿಸಲು ಕ್ರಮ ವಹಿಸಬೇಕು. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಯಂ ಆಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಕುರಿತು ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯ ಮಹಾನಗರ ಪಾಲಿಕೆ ಸೇರಿದಂತೆ ೧೫ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಯಾವುದೇ ಮ್ಯಾನುವೆಲ್ ಸ್ಕಾö್ಯವೆಂಜರ್‌ಗಳು ಇರುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು ೫೮೮ ಖಾಯಂ ಪೌರಕಾರ್ಮಿಕರರಿದ್ದು, ಈ ಪೈಕಿ ೨೪೦ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಬಿಎಲ್‌ಸಿ-೧೨೪, ಎಎಚ್‌ಪಿ-೧೧೬ ಸೇರಿದಂತೆ ಒಟ್ಟು ೨೪೦ ಮನೆಗಳು ಅನುಮೋದನೆಗೊಂಡು ೧೩೧ ಮನೆಗಳು ಮುಕ್ತಾಯಗೊಂಡಿವೆ. ಬಾಕಿ ಉಳಿದ ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ೫೬ ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರ ನೀಡಲಾಗಿದೆ. ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ನಿಯಮಿತವಾಗಿ ವೇತನ ಹಾಗೂ ಇಎಸ್‌ಐ ಮತ್ತು ಇಪಿಎಫ್‌ಗಳನ್ನು ಪಾವತಿಸಲಾಗಿದೆ. ಎಂದು ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ ಸೌದಾಗರ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರಾಠೋಡ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ, ಮಹಾನಗರ ಪಾಲಿಕೆ ಪರಿಸರ ಅಭಿಯಂತರ ಸಜ್ಜನ, ಪುರಸಭೆ ಮತ್ತು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.