Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬುದ್ಧ ಎಂದರೆ ಅರಿವಿನ, ಜ್ಞಾನದ ಬೆಳಕು :ಎಡಿಸಿ ಗೆಣ್ಣೂರ
(ರಾಜ್ಯ ) ಜಿಲ್ಲೆ

ಬುದ್ಧ ಎಂದರೆ ಅರಿವಿನ, ಜ್ಞಾನದ ಬೆಳಕು :ಎಡಿಸಿ ಗೆಣ್ಣೂರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೬೮ನೆಯ ಧಮ್ಮಚಕ್ರ ಪರಿವರ್ತನ ದಿನಾಚರಣೆ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬುದ್ಧ ಎಂದರೆ ದೇವರಲ್ಲ, ಬುದ್ಧ ಎಂದರೆ ಅರಿವಿನ, ಜ್ಞಾನದ ಬೆಳಕು. ಮೂಢ ನಂಬಿಕೆಗಳಿಂದ ಹೊರಬಂದು ಅರಿವಿನ ಭಾರತ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹೇಳಿದರು.
ಬುದ್ಧವಿಹಾರ ನಿರ್ಮಾಣ ಸಮಿತಿಯ ಆಶ್ರಯದಲ್ಲಿ ಇಂದು ನಗರದ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೮ನೆಯ ಧಮ್ಮಚಕ್ರ ಪರಿವರ್ತನ ದಿನಾಚರಣೆ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
೨೫೦೦ ವರ್ಷಗಳ ಹಿಂದೆ ಜೂಜಾಟ, ಸುರಾಪಾನ, ಪ್ರಾಣಿಬಲಿ ಮುಂತಾದ ಅನಿಷ್ಟಗಳ ಮೂಲಕ ಸಮಾಜವು ನೈತಿಕವಾಗಿ ಅಧಃಪತನಗೊಂಡಿದ್ದ ಮತ್ತು ದೇವರನ್ನು ಒಲಿಸಿಕೊಳ್ಳಲು ಮೌಢ್ಯವೆಂಬ ಅಂಧಃಕಾರದಲ್ಲಿ ಮುಳುಗಿದ್ದ ಸಮಯದಲ್ಲಿ ಬುದ್ಧನೆಂಬ ಹೊಸ ಬೆಳಕೊಂದು ಮೂಡಿಬಂತು. ಭಗವಾನ ಬುದ್ಧರು ದೇವರು, ಆತ್ಮ, ಪುನರ್ಜನ್ಮಗಳನ್ನು ನಿರಾಕರಿಸಿದರು. ಕರ್ಮಸಿದ್ಧಾಂತವನ್ನು ಒಪ್ಪಿಕೊಳ್ಳಲಿಲ್ಲ. ಬುದ್ಧನ ಧಮ್ಮದಲ್ಲಿ ದೇವರಿಗೆ ಸ್ಥಾನವಿಲ್ಲ, ನೈತಿಕತೆಗೆ ಸ್ಥಾನವಿದೆ ಎಂದು ಹೇಳಿದರು.
ಸಾನಿಧ್ಯ ವಹಿಸಿದ್ದ ಭಂತೆ ಡಾ.ಶಾಕು ಬೋಧಿಧಮ್ಮ ಮಾತನಾಡಿ, ಶತಮಾನಗಳಿಂದ ಶೋಷಣೆಗೊಳಗಾಗಿರುವ ದಲಿತ ಮತ್ತು ಶೋಷಿತ ಸಮುದಾಯಗಳು ಭಾರತದ ನಿಜವಾದ ಚರಿತ್ರೆಯನ್ನು ಓದಬೇಕು. ಶೋಷಣೆಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದ ನಮ್ಮ ಮಹಾಪುರುಷರ ಚರಿತ್ರೆಯನ್ನು ತಿಳಿದುಕೊಳ್ಳಬೇಕು. ಇತಿಹಾಸದ ಅರಿವಿಲ್ಲದ ಈ ಸಮುದಾಯಗಳು ಬುದ್ಧ, ಬಸವ, ಫುಲೆ, ಶಾಹು, ಅಂಬೇಡ್ಕರ್ ಕಂಡ ಸಮಸಮಾಜದ ಕನಸನ್ನು ಸಾಕಾರಗೊಳಿಸಬೇಕು. ಬುದ್ಧಭಾರತವನ್ನು ಕಟ್ಟಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಬುದ್ಧವಿಹಾರ ನಿರ್ಮಾಣ ಸಮಿತಿಯ ಅಧ್ಯಕ್ಷ ರಾಜಶೇಖರ ಯಡಹಳ್ಳಿ ಮಾತನಾಡಿ, ಬುದ್ಧವಿಹಾರದಲ್ಲಿ ಧಾರ್ಮಿಕ ಚಟುವಟಿಕೆಗಳು ಮಾತ್ರವಲ್ಲದೆ ಬಡಮಕ್ಕಳ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಅವುಗಳನ್ನು ಶೀಘ್ರದಲ್ಲೇ ಕಾರ್ಯರೂಪಕ್ಕೆ ತರಲು ಯೋಜಿಸಲಾಗಿದೆ. ಬುದ್ಧವಿಹಾರವು ಯಾರದೂ ಸ್ವಂತ ಆಸ್ತಿಯಲ್ಲ. ಇದು ಸಮಾಜದ ಆಸ್ತಿಯಾಗಿದ್ದು, ವಿಹಾರದ ಎಲ್ಲ ಚಟುವಟಿಕೆಗಳಿಗೆ ಪ್ರತಿಯೊಬ್ಬರ ಸಹಕಾರವೂ ಅಗತ್ಯ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬುದ್ಧವಿಹಾರ ನಿರ್ಮಾಣ ಸಮಿತಿಯ ಉಪಾಧ್ಯಕ್ಷ ಶಶಿಕಾಂತ ಹೊನವಾಡಕರ, ಬುದ್ಧವಿಹಾರ ನಿರ್ಮಾಣಕ್ಕೆ ಶ್ರಮಿಸಿದ ಹಿರಿಯರ ಶ್ರಮವನ್ನು ಸ್ಮರಿಸಿದರಲ್ಲದೆ, ಮುಂದಿನ ಯೋಜನೆಗಳನ್ನು ವಿವರಿಸಿದರು.
ಮೂರು ತಿಂಗಳುಗಳ ಕಾಲ ಬುದ್ಧವಿಹಾರದಲ್ಲಿದ್ದು ವರ್ಷಾವಾಸ ನಡೆಸಿಕೊಟ್ಟ ತೆಲಂಗಾಣದ ಭಂತೆ ಬೋಧಕೀರ್ತಿ ಅವರಿಗೆ ನಿರ್ಮಾಣ ಸಮಿತಿಯ ನಾಗರಾಜ ಲಂಬು, ರಾಜೇಶ ತೊರವಿ, ದಶವಂತ ಗುನ್ನಾಪುರ, ಆನಂದ ಔದಿ, ಮನೋಜ ಕೋಟ್ಯಾಳಕರ, ಅಪ್ಪು ನಾಗಠಾಣ ಚೀವರದಾನ ಮಾಡಿದರು.
ಅಡಿವೆಪ್ಪ ಸಾಲಗಲ್ಲ ಸ್ವಾಗತಿಸಿದರು. ಸಾಬು ಚಲವಾದಿ ವಂದಿಸಿದರು. ಪ್ರತಾಪ ಚಿಕ್ಕಲಕಿ ನಿರೂಪಿಸಿದರು.
ಭಂತೆ ಬೋಧಿ ಆನಂದ, ಭಂತೆ ಬೋಧಿಚಕ್ಷು, ಭಂತೆ ಬೋಧಿದರ್ಪಣ, ಪ್ರಭುಗೌಡ ಪಾಟೀಲ, ಆರ್.ಡಿ. ಸೂಳಿಕೇರಿ, ವಿ.ಎ. ಪಾಟೀಲ, ಸುಧಾಕರ ಕನಮಡಿ, ಭೀಮಶಿ ಹಿಪ್ಪರಗಿ, ಅನಿಲ ಹೊಸಮನಿ, ಎಂ.ಬಿ. ಹಳ್ಳದಮನಿ, ರಮೇಶ ಹಳ್ಳಿ, ಕೆ.ಎಂ. ಶಿವಶರಣ, ಬಿ.ಎಸ್. ಬ್ಯಾಳಿ, ಚಿದಾನಂದ ಹೊನವಾಡಕರ, ಸಿ.ಆರ್. ತೊರವಿ, ಎಸ್.ಎಲ್. ಇಂಗಳೇಶ್ವರ, ಮಡಿವಾಳ ಯಾಳವಾರ, ಸಂಜು ಕಂಬಾಗಿ, ಚೆನ್ನು ಕಟ್ಟಿಮನಿ, ಸೋಮು ರಣದೇವಿ, ಮತಿನಕುಮಾರ ದೇವಧರ, ಸಂತೋಷ ಕಾಂಬಳೆ, ಲೋಹಿತ ಪಾರಣ್ಣವರ, ಉಮೇಶ ಹೆಂಡೆಗಾರ, ಮಣಿಕಂಠ ಸಾಗರ, ಸುಭಾಸ ಜುಮನಾಳ, ನಾಗರಾಜ ಲಿಂಗದಳ್ಳಿ, ದಯಾನಂದ ಹಾಲ್ಯಾಳ, ಶ್ರೀಧರ ಹಾಲ್ಯಾಳ, ಗಣೇಶ ಘಟಕಾಂಬಳೆ, ಸುರೇಶ ಬಬಲೇಶ್ವರ ಸೇರಿದಂತೆ ದಲಿತ ಸಂಘಟನೆಗಳ ಮುಖಂಡರು, ನೂರಾರು ಉಪಾಸಕ-ಉಪಾಸಕಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸನ್ಮಾನ

ಇದೇ ಸಂದರ್ಭದಲ್ಲಿ ಬುದ್ಧವಿಹಾರ ನಿರ್ಮಾಣ ಮತ್ತು ಅಭಿವೃದ್ಧಿಗೆ ಶ್ರಮಿಸಿದ ಪೀರಪ್ಪ ನಡುವಿನಮನಿ ದಂಪತಿಗಳು, ಚಿದಾನಂದ ನಿಂಬಾಳ, ಅಯ್ಯಪ್ಪ ಸಿಂಧೂರ, ಕೃಷ್ಣಪ್ಪ ಬಡಳ್ಳಿ, ಮಲ್ಲಪ್ಪ ಸವನಳ್ಳಿ, ಜಿ.ಬಿ. ಹೆಗಡ್ಯಾಳ ಅವರ ಕುಟುಂಬಸ್ಥರಿಗೆ ಬುದ್ಧವಿಹಾರ ನಿರ್ಮಾಣ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

ಧಮ್ಮಧ್ವಜಾರೋಹಣ

ಇದಕ್ಕೂ ಮುನ್ನ ಮನಗೂಳಿ ರಸ್ತೆಯ ಡಾ. ಅಂಬೇಡ್ಕರ್ ಭವನದಿಂದ ಬುದ್ಧವಿಹಾರದ ವರೆಗೆ ನಡೆದ ಭಗವಾನ ಬುದ್ಧ ಮತ್ತು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ರತಿಮೆಗಳ ಭವ್ಯ ರಥಯಾತ್ರೆಗೆ ಮಾಜಿ ಶಾಸಕರಾದ ಪ್ರೊ. ರಾಜು ಆಲಗೂರ, ಮಹಾನಗರ ಪಾಲಿಕೆ ಸದಸ್ಯರಾದ ಆರತಿ ಶಹಾಪುರ, ಪರಶುರಾಮ ಹೊಸಮನಿ ಅವರು ಚಾಲನೆ ನೀಡಿದರು. ಉಪಾಸಕಿಯರಿಂದ ಧಮ್ಮಧ್ವಜಾರೋಹಣ ನೆರವೇರಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.