Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಡಿಸಿ ಟಿ.ಭೂಬಾಲನ್ ಸೂಚನೆ
(ರಾಜ್ಯ ) ಜಿಲ್ಲೆ

ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಡಿಸಿ ಟಿ.ಭೂಬಾಲನ್ ಸೂಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅ.೨೬ಹಾಗೂ೨೭ರಂದು ಗ್ರಾಮ ಆಡಳಿತ ಅಧಿಕಾರಿ ಸ್ಪರ್ಧಾತ್ಮಕ ಪರೀ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಅಕ್ಟೋಬರ್ ೨೬ ಹಾಗೂ ೨೭ ರಂದು ನಡೆಯುವ ಗ್ರಾಮ ಆಡಳಿತ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಗುರುವಾರ ನಗರದ ಪಿಡಿಜೆ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅ.೨೬ ರಂದು ಜಿಲ್ಲೆಯ ೦೯ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಅ.೨೭ರಂದು ೮೦ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಗೆ ನಿಯೋಜಿತ ಮಾರ್ಗಾಧಿಕಾರಿಗಳು, ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಓಎಂಆರ್ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಪಡೆದುಕೊಂಡು ನಿಗದಿತ ಸಮಯದಲ್ಲಿ ಹಸ್ತಾಂತರ ಮಾಡಬೇಕು. ಪರೀಕ್ಷೆ ಮುಗಿದ ನಂತರ ಜಿಲ್ಲಾ ಖಜಾನೆಗೆ ಮರಳಿ ತಲುಪಿಸುವುದು ಸೇರಿದಂತೆ ಪರೀಕ್ಷಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಂಡು ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅವರು ಸೂಚನೆ ನೀಡಿದರು.
ಅ.೨೬ ರಂದು ನಡೆಯುವ ಕಡ್ಡಾಯ ಕನ್ನಡ ಪರೀಕ್ಷೆಗೆ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕರಂತೆ ೯ ವೀಕ್ಷಕರನ್ನು ನೇಮಿಸಲಾಗಿದೆ. ಈ ಪರೀಕ್ಷೆಗೆ ೪೬೦೮ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ ಹಾಗೂ ಅ.೨೭ರಂದು ನಡೆಯುವ ಪತ್ರಿಕೆ-೦೧ ಹಾಗೂ ಪತ್ರಿಕೆ-೦೨ಕ್ಕೆ ೩೨೭೪೪ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವರಂತೆ ಒಟ್ಟು ೮೦ ವೀಕ್ಷಕರನ್ನು ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಉಪ ಮುಖ್ಯ ಅಧೀಕ್ಷಕರು, ಓರ್ವ ಪ್ರಶ್ನೆ ಪತ್ರಿಕೆ ಪಾಲಕರು ಮತ್ತು ಓರ್ವ ವಿಶೇಷ ಸ್ಥಾನಿಕ ಜಾಗೃತ ದಳ ಸದಸ್ಯರನ್ನು ನೇಮಕ ಮಾಡಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಇಲೆಕ್ಟಾçನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋ ಫೋನ್‌ಗಳು, ಬ್ಲೂಟೂತ್ ಸಾಧನ, ಕೈ ಗಡಿಯಾರ ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ದಿನದಂದು ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಬೇಕು. ಪರೀಕ್ಷಾ ಕೇಂದ್ರಗಳ ಉಪ ಮುಖ್ಯ ಅಧೀಕ್ಷಕರುಗಳು ತಮ್ಮ ಕೇಂದ್ರಕ್ಕೆ ನಿಗದಿಗೊಳಿಸಿದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಆಸನದ ವ್ಯವಸ್ಥೆ, ಪರೀಕ್ಷಾ ಕೊಠಡಿಯಲ್ಲಿ ಸರಿಯಾದ ಗಾಳಿ-ಬೆಳಕಿನ ವ್ಯವಸ್ಥೆ ಇರುವಂತೆ ನೊಡಿಕೊಳ್ಳಬೇಕು ಎಂದು ಅವರು ಹೇಳಿದರು.
ಪರೀಕ್ಷೆಗೆ ನಿಯೋಜಿತ ವೀಕ್ಷಕರು ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರರಿಬೇಕು. ಪರೀಕ್ಷೆ ಮುಗಿದ ನಂತರ ಪರೀಕ್ಷೆ ನಡೆದ ಬಗ್ಗೆ ನಿಗದಿತ ನಮೂನೆಯಲ್ಲಿ ವರದಿಯನ್ನು ಪರೀಕ್ಷಾ ಕೇಂದ್ರದ ಲಾಗಿನ್ ಮೂಲಕ ಅಪಲೋಡ್ ಮಾಡಿ ಅದರ ಪ್ರತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರಿಗೆ ಕಳುಹಿಸುವುದು ಸೇರಿದಂತೆ ವಹಿಸಿದ ಜವಾಬ್ದಾರಿಗಳನ್ನು ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪ ವಿಭಾಗಾಧಿಕಾರಿ ಆಬೀದ ಗದ್ಯಾಳ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಖಜಾನೆ ಇಲಾಖೆ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.