Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರು ಆರ್ಥಿಕವಾಗಿ ಸಬಲರಾಗಲು ಸಮಗ್ರ ಕೃಷಿ ಅಳವಡಿಸಿಕೊಳ್ಳಬೇಕು
(ರಾಜ್ಯ ) ಜಿಲ್ಲೆ

ರೈತರು ಆರ್ಥಿಕವಾಗಿ ಸಬಲರಾಗಲು ಸಮಗ್ರ ಕೃಷಿ ಅಳವಡಿಸಿಕೊಳ್ಳಬೇಕು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಧಾರವಾಡ ಕೃಷಿ ವಿವಿ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರೈತರು ಆರ್ಥಿಕವಾಗಿ ಸದೃಢವಾಗಬೇಕಾದರೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಜೊತೆಗೆ ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಸಲಹೆ ನೀಡಿದರು.
ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಶ್ರೀ.ಪವಾಡ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ವಿಜಯಪುರದ ಕೃಷಿ ಕಾಲೇಜಿನ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ “ಕೃಷಿ ಸಂಪದ” ಕೃಷಿ ತಂತ್ರಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಈ ಕೃಷಿ ತಂತ್ರಜ್ಞಾನ ಮತ್ತು ವಸ್ತುಪ್ರದರ್ಶನದ ಪ್ರಯೋಜನಗಳನ್ನು ಪಡೆದುಕೊಂಡು ತಮ್ಮ ಕೃಷಿ ಉತ್ಪಾದನೆ ಹೆಚ್ಚಿಸಿಕೊಳ್ಳಬೇಕು ಎಂದರು.
ಕೃಷಿ ಉತ್ಪಾದನೆ ಹೆಚ್ಚಿಸಬೇಕಾದರೆ ಮಣ್ಣು ಮತ್ತು ನೀರಿನ ನಿರ್ವಹಣೆ ಬಹಳ ಮುಖ್ಯ. ರೈತರು ನಿಯಮಿತವಾಗಿ ತಮ್ಮ ತಮ್ಮ ಭೂಮಿಯಲ್ಲಿನ ಮಣ್ಣು ಪರೀಕ್ಷೆ ಮಾಡಿಸಿ ಶಿಫಾರಸು ಮಾಡಿದಂತೆಯೇ ಗೊಬ್ಬರ ಬಳಸಬೇಕು. ಇದರಿಂದ ರೈತರು ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ರೈತರು ತೋಟಗಾರಿಕೆ ಬೆಳೆಗಳ ಬಗೆಗೂ ಗಮನಕೊಡಬೇಕು. ಇದರ ಜತೆಗೆ ಕೃಷಿ ಉಪಕಸಬುಗಳಾದ ಕುರಿ, ಕೋಳಿ, ಆಡು ಸಾಕಾಣಿಕೆ, ಜೇನುಕೃಷಿ ಬಗ್ಗೆ ಮಾಹಿತಿ ಪಡೆದುಕೊಂಡು ಇವೆಲ್ಲವನ್ನೂ ರೈತರು ಅಳವಡಿಸಿಕೊಳ್ಳಬೇಕು ಎಂದೂ ಕುಲಪತಿ ಪ್ರೊ.ಪಾಟೀಲ್ ಸಲಹೆ ಕೊಟ್ಟರು.
ಮುಖ್ಯ ಅತಿಥಿಗಳಾಗಿದ್ದ ಧಾರವಾಡ ಕೃಷಿ ವಿಶ್ವವಿದ್ಯಾಲಯ ಶಿಕ್ಷಣ ನಿರ್ದೇಶಕ ಡಾ.ವಿ.ಆರ್.ಕಿರೆಸೂರ್ ಅವರು ಮಾತನಾಡಿ, ಡಿಪ್ಲೋಮಾ ಕೃಷಿ ಮತ್ತು ಕೃಷಿ ಪದವಿಯ ಬಗ್ಗೆ ಸವಿಸ್ತಾರವಾಗಿ ವಿವರಿಸಿ ಗ್ರಾಮೀಣ ಪ್ರದೇಶಗಳ ರೈತರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕೋರ್ಸ್ಗಳಿಗೆ ಪ್ರವೇಶ ಪಡೆದುಕೊಳ್ಳಬೇಕು ಎಂದರು.
ಬಸರಕೋಡ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್.ಬಿ.ಮೇಟಿ, ಶ್ರೀ ಪವಾಡ ಬಸವೇಶ್ವರ ಸಂಸ್ಥೆಯ ಅಧ್ಯಕ್ಷ ಕೆ.ವಾಯ್.ಬಿರಾದಾರ ಮಾತನಾಡಿದರು. ರಾಜಶೇಖರ ಬಿರಾದಾರ ಅನುಭವ ಹಂಚಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಜಯಪುರ ಕೃಷಿ ಮಹಾವಿದ್ಯಾಲಯ ವಿದ್ಯಾಧಿಕಾರಿ ಡಾ ಭೀಮಪ್ಪ. ಎ ಮಾತನಾಡಿ ರೈತರನ್ನು ಆಧುನಿಕ ಕೃಷಿಯತ್ತ ಮುಖ ಮಾಡುವಂತೆ ಪ್ರೇರೇಪಿಸುವುದೇ ಕೃಷಿ ತಂತ್ರಜ್ಞಾನ ಮತ್ತು ವಸ್ತುಪ್ರದರ್ಶನದ ಮೂಲ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಹ ಸಂಶೋಧನಾ ನಿರ್ದೇಶಕ ಡಾ.ಆರ್.ಬಿ.ಬೆಳ್ಳಿ, ಧಾರವಾಡ ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಸಿ.ಆರ್.ಪಾಟೀಲ, ಕೀಟಶಾಸ್ತ್ರ ತಜ್ಞ ಡಾ.ಎ.ಪಿ.ಬಿರಾದಾರ, ಕೆವಿಕೆ ಮುಖ್ಯಸ್ಥ ಮತ್ತು ರೋಗಶಾಸ್ತ್ರ ತಜ್ಞ ಡಾ.ಎಸ್.ಎಮ್.ವಸ್ತ್ರದ, ತೋಟಗಾರಿಕೆ ತಜ್ಞರಾದ ಕುಶಾಲ, ಡಿ.ಕೆ.ಹರೀಶ, ಮಣ್ಣು ಶಾಸ್ತ್ರ ತಜ್ಞ ಸಿದ್ದರಾಮ ಪಾಟೀಲ, ಬೇಸಾಯ ಶಾಸ್ತ್ರ ತಜ್ಞ ಬಿ.ಟಿ.ನಾಡಗೌಡ, ಬಸರಕೋಡ, ಡವಳಗಿ, ರೂಡಗಿ, ಸಿದ್ದಾಪುರ ಗ್ರಾಮದ ರೈತರು ಮತ್ತು ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಕೃಷಿ ಕಾರ್ಯನುಭವ ಶಿಬಿರದ ಸಂಯೋಜಕ ಡಾ.ಆರ್.ಬಿ.ಜೋಳ್ಳಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೃಷಿ ವಿದ್ಯಾರ್ಥಿ ರಿಹಾನ್ ಮಲಿಕ ಹಳ್ಳೂರ ಕಾರ್ಯಕ್ರಮ ನಿರೂಪಿಸಿದರು, ಸಂಗಮೇಶ ಮಾವಿನಗಿಡದ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.