ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಜಿಲ್ಲಾ ಸಮಿತಿ, ವಿಜಯಪುರ ವತಿಯಿಂದ ರಾಜ್ಯದ ಸಮಾಜ ಕಲ್ಯಾಣ ಸಚಿವರಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಸಂಚಾಲಕರಾದ ಸಂಜು ವೈ.ಕಂಬಾಗಿ ಮಾತನಾಡಿ, ಇತ್ತೀಚಿಗೆ ರಾಜ್ಯದಲ್ಲಿ ದಿನಂಪ್ರತಿ ದಲಿತರ ಮೇಲೆ ದೌರ್ಜನ್ಯಗಳು ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರಿಂದ ದಲಿತರಿಗೆ ನ್ಯಾಯ ಸಿಗುತ್ತಿಲ್ಲ. ಕೇವಲ ಶೋಷಣೆಯಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ೧೯೮೯ರ ಪ್ರಕಾರ ದಲಿತರ ಮೇಲೆ ಆದ ದೌರ್ಜನ್ಯದ ಕುರಿತು ದೌರ್ಜನ್ಯ ಪ್ರಕರಣವನ್ನು ದಾಖಲಿಸಿದರೆ ಅದರ ವಿರುದ್ದವಾಗಿ ಕೌಂಟರ್ ಕೇಸುಗಳನ್ನು ದಾಖಲಾಗುತ್ತಿವೆ. ಆದ್ದರಿಂದ ಇಂತಹ ಕೌಂಟರ್ ಕೇಸುಗಳ ವಿರುದ್ದ ರಾಜ್ಯದಲ್ಲಿ ತ್ವರಿತ ನ್ಯಾಯಕ್ಕಾಗಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವ ಮೂಲಕ ದಲಿತರಿಗೆ ನ್ಯಾಯ ದೊರಕಿಸಿಕೊಡುವಂತೆ ದಿನಾಂಕ : ೨೫-೧೦-೨೦೨೪ ರಂದು ನಡೆಯುವ ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಮಾಡುವಂತೆ ಆಗ್ರಹಪಡಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಒಕ್ಕೂಟದ ಸಂಚಾಲಕಿಯಾದ ಸವಿತಾ ವಗ್ಗರ, ಜಿಲ್ಲಾ ಸಂಘಟನಾ ಸಂಚಾಲಕರಾಧ ಚೇತನ ತೊರವಿ, ಯಲ್ಲಪ್ಪ ಕಾಂಬಳೆ, ಭೀಮಣ್ಣ ಹಂಚಿನಾಳ, ಭಾಸ್ಕರ ಬೋರಗಿ, ಸುಖದೇವ ಕಟ್ಟಿಮನಿ, ಇನ್ನಿತರರು ಉಪಸ್ಥಿತರಿದ್ದರು.

