ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ವತಿಯಿಂದ ೨೦೨೪-೨೫ ನೇ ಸಾಲಿನಲ್ಲಿ ರಾಜ್ಯ ಸಭಾ ಸಂಸದರಾದ ಶ್ರೀಮತಿ ಸುಧಾ ಮೂರ್ತಿ ಇವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಾಗರಿಕ ಸೌಲಭ್ಯ ವಸತಿ ನಿಲಯದ ಭೂಮಿ ಪೂಜೆ ಕಾರ್ಯಕ್ರಮವು ಅಕ್ಟೋಬರ್ ೨೭ ರಂದು ಬೆಳಿಗ್ಗೆ ೯.೩೦ ಕ್ಕೆ ಜರುಗಲಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ. ಬಿ. ಪಾಟೀಲ ಅವರು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ, ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಸಭಾ ಸಂಸದೆ ಡಾ. ಸುಧಾಮೂರ್ತಿ ಘನ ಉಪಸ್ಥಿತಿ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ತಿನ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರಿ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಹಾನಗರ ಪಾಲಿಕೆಯ ಮೇಯರ್ ಮಹೇಜಬಿನ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಮುಶ್ರೀಫ್ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೋಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
