Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಸಿ-ಎಸ್ಟಿ ಪತ್ರಕರ್ತರಿಗೆ ಮಿಡಿಯಾ ಕಿಟ್ :ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಎಸ್ಸಿ-ಎಸ್ಟಿ ಪತ್ರಕರ್ತರಿಗೆ ಮಿಡಿಯಾ ಕಿಟ್ :ಅರ್ಜಿ ಆಹ್ವಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ೨೦೨೪-೨೫ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡು (Accriditation Card) , ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡು ಹೊಂದಿರುವ ಬಗ್ಗೆ ದೃಢೀಕೃತ ಜೆರಾಕ್ಸ್ ಪ್ರತಿ, ಜಾತಿ ದೃಢೀಕರಣಕ್ಕಾಗಿ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಹಾಗೂ ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದೊಳಗಾಗಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ, ಮಂಡಳಿಗಳಿಂದ ಹಾಗೂ ಸರ್ಕಾರದ ಯಾವುದೇ ಇಲಾಖೆಗಳಿಂದ ಈ ಯೋಜನೆಯಡಿ ಮಾಧ್ಯಮ ಕಿಟ್ಗಳನ್ನು ಪಡೆದಿರುವುದಿಲ್ಲ ಎಂದು ರೂ. ೧೦೦ ರ ಬಾಂಡ್ ನಲ್ಲಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು.
ಮಾಧ್ಯಮ ಕಿಟ್ ಒದಗಿಸಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆಯನ್ನು ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ದಿನಾಂಕ: ೧೦-೧೧-೨೦೨೪ ರ ಸಂಜೆ ೫:೦೦ ಗಂಟೆಯೊಳಗೆ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು. ಲಕೋಟೆಯ ಮೇಲ್ಬಾಗದಲ್ಲಿ “ಪ.ಜಾ ಹಾಗೂ ಪ.ಪಂ.ಮಾಧ್ಯಮ ಮಾನ್ಯತೆ ಪತ್ರಕರ್ತರಿಗೆ ಮೀಡಿಯಾ ಕಿಟ್ ಗಾಗಿ ಅರ್ಜಿ” ಎಂದು ನಮೂದಿಸಿರಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ

ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ

ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೯,೦೭,೫೮೩ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ನಿಷ್ಕ್ರೀಯವಾಗಿರುವ ಕಾಂಗ್ರೆಸ್ ಸರ್ಕಾರ
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಶಿಷ್ಟವಾಗಿ ಜರುಗಿದ ಪಂಡರಪುರ ಸೈಕಲ್ ವಾರಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮೋಹನ್ ಬಾಗವತ್ ರನ್ನು ಬರಮಾಡಿಕೊಂಡ ಉಮೇಶ ಕಾರಜೋಳ
    In (ರಾಜ್ಯ ) ಜಿಲ್ಲೆ
  • ಲಲಿತಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ :ಡಾ.ರಂಜಿತಾ
    In (ರಾಜ್ಯ ) ಜಿಲ್ಲೆ
  • ಜೋಡಿ ಕೆರೆ ಅಭಿವೃದ್ಧಿಗೆ ವೇಗ: ಗುಣಮಟ್ಟದಲ್ಲಿ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಡಾ.ಶಾಂತಕುಮಾರ ಗೆ ಡಾ.ಕಯ್ಯಾರ ಪ್ರಶಸ್ತಿ ಗರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.