ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಹಾಗೂ ನಗರದ ಜಿಲ್ಲಾ ಪಂಚಾಯತ್ ಹತ್ತಿರವಿರುವ ಈಜುಕೊಳಕ್ಕೆ (ಸ್ವೀಮ್ಮಿಂಗ್ ಫೂಲ್) ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಅಭ್ಯಾಸಕ್ಕೆ ಆಗಮಿಸುವ ಕ್ರೀಡಾಪಟುಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಮಳೆ ನೀರು ಕ್ರೀಡಾಂಗಣದಲ್ಲಿ ನಿಲ್ಲದಂತೆ ನೋಡಿಕೊಂಡು ಸ್ವಚ್ಚತೆಗೆ ಆದ್ಯತೆ ನೀಡಬೇಕು. ಕ್ರೀಡಾಂಗಣ ದೊಡ್ಡದಾಗಿರುವುದರಿಂದ ಹೆಚ್ಚಿನ ಸ್ವಚ್ಚತಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಕ್ರಮವಹಿಸಬೇಕು. ಕ್ರೀಡಾಂಗಣದ ಆವರಣದಲ್ಲಿರುವ ಅಂಗಡಿಗಳ ಬಾಡಿಗೆ ದರ ಪರಿಷ್ಕರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ರಂಗಮಂದಿರದ ನವೀಕರಣಕ್ಕಾಗಿ ಕಾಮಗಾರಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ರಂಗಮಂದಿರವನ್ನು ಆಕರ್ಷಣೀಯವಾಗಿಸುವ ನಿಟ್ಟಿನಲ್ಲಿ ಪೇಟಿಂಗ್, ಗೋಡೆ ಚಿತ್ರ ಬರೆಯಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ ಅವರು, ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಲ್ಳುವಂತೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಹತ್ತಿರವಿರುವ ಈಜುಕೊಳ್ಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಈ ವೇಳೆ ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತರ ಸಿ. ಬಿ. ಚಿಕ್ಕಲಗಿ, ನಿರ್ಮಿತಿ ಕೇಂದ್ರದ ಗೋಪಿನಾಥ ಮಲಜಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಉಪಸ್ಥಿತರಿದ್ದರು.

