Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯೋತ್ಸವ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ :ಸೋಮನಕಟ್ಟಿ
(ರಾಜ್ಯ ) ಜಿಲ್ಲೆ

ರಾಜ್ಯೋತ್ಸವ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ :ಸೋಮನಕಟ್ಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ನ.೧ ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವ ಜೊತೆಗೆ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಗಣ್ಯರು ಭಾಗವಹಿಸುವ ಮೂಲಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಮೂಲಕ ಕನ್ನಡ ರಾಜ್ಯೋತ್ಸವ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜರುಗಿದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತಂತೆ ಕರೆಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನವೆಂಬರ್ ೧ ರಂದು ಬೆಳಗ್ಗೆ ೮ ಗಂಟೆಗೆ ತಮ್ಮ ಶಾಲಾ-ಕಾಲೇಜುಗಳಲ್ಲಿ, ವಿವಿಧ ಇಲಾಖೆಯ ಕಚೇರಿಗಳಲ್ಲಿ ನಾಡದೇವಿ ಭುವನೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕನ್ನಡ ನಾಡು-ನುಡಿಗೆ ನಮನ ಸಲ್ಲಿಸಿದ ನಂತರ ೮.೩೦ ಗಂಟೆಗೆ ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭವಾಗುವ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿಗಳು, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಜನತೆ ಭಾಗವಹಿಸುವ ಮೂಲಕ ಮೆರವಣಿಗೆಯನ್ನು ಯಶಸ್ವಿಗೊಳಿಸಬೇಕು. ಮೆರವಣಿಗೆ ಮುಕ್ತಾಯದ ನಂತರ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಕನ್ನಡ ರಾಜ್ಯೋತ್ಸವದ ವೇದಿಕೆ ಕಾರ್ಯಕ್ರಮ ಜರುಗುವುದು ಎಂದರು.
ಮೆರವಣಿಗೆಗೆ ಬೇಕಾದ ಎಲ್ಲ ತಯಾರಿಯನ್ನು ಕ್ಷೇತ್ರಶಿಕ್ಷಣಾಧಿಕಾರಿಗಳು ಮಾಡಏಕು. ಮೆರವಣಿಗೆಗೆ ಬೇಕಾದ ವಾಹನದ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯವರು ವ್ಯವಸ್ಥೆ ಮಾಡಿಕೊಡಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಉಪಹಾರದ ವ್ಯವಸ್ಥೆಯನ್ನು ಬಿಸಿಯೂಟದ ಅಧಿಕಾರಿಗಳು ವಹಿಸಿಕೊಳ್ಳಬೇಕು. ಕನ್ನಡ ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಆಚರಿಸುವ ಮೂಲಕ ಯಶಸ್ವಿಗೊಳಿಸಬೇಕೆಂದರು.
ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ಕನ್ನಡ ಸಂಸ್ಕ್ರತಿ, ಪರಂಪರೆ ಉಳುವಿಗೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಕನ್ನಡ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ದಿನ. ಈ ಕನ್ನಡ ಹಬ್ಬವನ್ನು ಶ್ರದ್ಧಾ-ಭಕ್ತಿಯಿಂದ ಸ್ವಯಂಪ್ರೇರಿತವಾಗಿ ಎಲ್ಲರೂ ಸೇರಿ ಆಚರಿಸುವಂತಾಗಬೇಕು. ನವೆಂಬರ್ ೧ ರಂದು ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಮೇಲೆ, ವ್ಯಾಪಾರ ಮಳಿಗೆಗಳ ಮೇಲೆ ಕನ್ನಡ ಧ್ವಜವನ್ನು ಕಟ್ಟುವ ಮೂಲಕ ಕನ್ನಡಾಭಿಮಾನವನ್ನು ಮೆರೆಯುವಂತಾಗಬೇಕೆಂದರು.
ಡಿಎಸ್ಎಸ್ ಮುಖಂಡ ಅರವಿಂದ ಸಾಲವಾಡಗಿ, ಕನ್ನಡಪರ ಸಂಘಟನೆಯ ಮುಖಂಡ ಮಹಾಂತೇಶ ಚಕ್ರವರ್ತಿ ಇತರರು ಮಾತನಾಡಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜು ಹಿರೇಮನಿ, ಉಪನೋಂದಾಣಾಧಿಕಾರಿ ದೇವಪ್ಪ, ಲೋಕೋಪಯೋಗಿ ಇಲಾಖೆಯ ಎಇಇ ಜೆ.ಬಿ.ಕಿರಸೂರ, ಕೃಷಿ ಇಲಾಖೆಯ ಅಧಿಕಾರಿ ಎಂ.ಎಚ್.ಯರಝರಿ, ದೈಹಿಕ ಶಿಕ್ಷಣಾಧಿಕಾರಿ ಎಸ್.ಎಸ್.ಅವಟಿ, ಪಶು ಇಲಾಖೆಯ ಡಾ.ಶಂಖ, ಪಿಎಸ್ಐ ಐ.ಎಂ.ದುಂಡಸಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಾನಂದ ಡೋಣೂರ, ಮುಖಂಡರಾದ ಮಹಾಂತೇಶ ಸಾಸಬಾಳ, ಮನ್ನಾನ ಶಾಬಾದಿ, ಸುನೀಲ ರಾಠೋಡ, ಸುನೀಲ ಚಿಕ್ಕೊಂಡ, ಎ.ಐ.ಮಠಪತಿ, ತಮ್ಮಣ್ಣ ಕಾನಾಗಡ್ಡಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.