ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ೨೦೨೪-೨೫ ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ ೧೦೦ ಸಂಖ್ಯಾಬಲದ ಒಟ್ಟು ೬೨ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-೨ ಆದೇಶ ಹೊರಡಿಸಿದ್ದಾರೆ.ಈ ವಸತಿ ನಿಲಯದ ಮಂಜೂರಾತಿಗೆ ಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲರು ಪ್ರಸ್ತಾವನೆ ಸಲ್ಲಿಸಿದ ಮೇರೆಗೆ ಬಸವನಬಾಗೇವಾಡಿ ತಾಲೂಕಿಗೆ ಒಂದು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮಂಜೂರಾಗಿದೆ ಎಂದು ಶಾಸಕ, ಸಚಿವ ಶಿವಾನಂದ ಪಾಟೀಲ ಆಪ್ತಸಹಾಯಕ ಐ.ಟಿ.ಕೊಪ್ಪಳ ತಿಳಿಸಿದ್ದಾರೆ.
