ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ನರೇಗಾ ಯೋಜನೆಯ ೨೦೨೫-೨೬ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುತ್ತಿದ್ದು, ಗ್ರಾಮಸ್ಥರು ತಮಗೆ ಬೇಕಾದ ವೈಯಕ್ತಿಕ ಬೇಡಿಕೆ ಸಲ್ಲಿಸಬಹುದು ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ ಹೇಳಿದರು.
ತಾಲ್ಲೂಕಿನ ಕೊಂಡಗೂಳಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಜರುಗಿದ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿದರು. ಅಕ್ಟೋಬರ್ ೨ರಿಂದ ೩೧ರವರೆಗೆ ತಾಲ್ಲೂಕಿನ ೧೪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ ಎಂದರು
ಐಇಸಿ ಸಂಯೋಜಕ ಸಿದ್ದು ಕಾಂಬಳೆ ಮಾತನಾಡಿ, ನರೇಗಾ ಯೋಜನೆ ಅಡಿಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು, ಒಂದು ವರ್ಷದಲ್ಲಿ ೧೦೦ ದಿನಗಳ ಕೆಲಸ ನೀಡಲಾಗುವುದು ಒಂದು ದಿನಕ್ಕೆ ೩೪೯ ರೂಪಾಯಿ ಕೂಲಿ ನೀಡಲಾಗುತ್ತಿದೆ. ಇವುಗಳ ಲಾಭ ಪಡೆದು ಕೊಳ್ಳಬೇಕು ಎಂದರು.
ಗ್ರಾಮ ಕಾಯಕಮಿತ್ರ ನಜೀರಾಬೇಗಂ ಆಹೇರಿ, ಶ್ರೀಶೈಲ್ ಕವಿ, ಹುಸೇನಸಾಬ್ ಸೊಲ್ಲಾಪುರ, ಈರಪ್ಪ ಕುರಮಲ್ಲಪ್ಪಗೋಳ, ಸೋಮಶೇಖರ್ ಆನೆಗುಂದಿ, ಶಿವಾನಂದ ಬಸವಪಟ್ಟಣ, ಬಸವರಾಜ ಕುಲಕರ್ಣಿ, ಶಾಂತ ಕೆರುಟಗಿ, ಲಲಿತಾ ಹಿರೇಮಠ, ಕವಿತಾ ಕೆಂಭಾವಿ, ಚೈತ್ರ ನಾವಿ ಹಾಗೂ ಗ್ರಾಮಸ್ಥರು ಇದ್ದರು.

