ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಗರದ ಬಹುತೇಕ ರಸ್ತೆ ಹಾಗೂ ಫುಟ್ ಪಾತ್ ಗಳ ಮೇಲೆ ಅಕ್ರಮವಾಗಿ ನಿರ್ಮಿಸಿದ್ದ ಗೂಡಂಗಡಿಗಳ ತೆರವು ಕಾರ್ಯಾಚರಣೆ ಶನಿವಾರ ಪುರಸಭೆ ಮುಖ್ಯಾಧಿಕಾರಿ ರಾಜಶೇಖರ ಅವರ ನೇತೃತ್ವದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ರಾಜಶೇಖರ ಮಾತನಾಡಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತೆರವು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ವ್ಯಾಪಾರಸ್ಥರು ರಸ್ತೆ ಹಾಗೂ ಪುಟ್ ಪಾತ್ ಗಳನ್ನು ಆಕ್ರಮಿಸಿಕೊಂಡಿರುವ ಕಾರಣ ವಾಹನಗಳ ನಿಲುಗಡೆಗೆ ಹಾಗೂ ಪಾದಾಚಾರಿಗಳ ಸಂಚಾರಕ್ಕೆ ಅನಾನುಕೂಲವಾಗುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಗೂಡಂಗಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನಕೂಲ ಕಲ್ಪಿಸುವ ದೃಷ್ಟಿಯಿಂದ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಈ ವೇಳೆ ಪುರಸಭೆ ಸಿಬ್ಬಂದಿ ಸಿದ್ದು ಅಂಗಡಿ, ಅಜರ್ ನಾಟಿಕಾರ್, ನಬಿರಸೂಲ್ ಉಸ್ತಾದ್, ಇಂದುಮತಿ ಮಣೂರ, ದಯಾನಂದ ಇವಣಿ ಸೇರಿದಂತೆ ಇನ್ನಿತರ ಸಿಬ್ಬಂದಿ ಇದ್ದರು.

