ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ, ಪಿಜಿ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಸರ್ಟಿಫೀಕೇಟ್ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಇದೇ ಅಕ್ಟೋಬರ್ ೨೮ರಂದು ಬೆಳಿಗ್ಗೆ ೧೦.೩೦ರಿಂದ ಕೌನ್ಸೆಲಿಂಗ್ ಆರಂಭವಾಗಲಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.
ಮಹಿಳಾ ವಿವಿಯ ವಿವಿಧ ಕೋರ್ಸ್ಗಳಿಗೆ ಈಗಾಗಲೇ ಯುಯುಸಿಎಂಎಸ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿನಿಯರು ದಿನಾಂಕ ೨೮ರಂದು ಅಗತ್ಯ ಮೂಲ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಿದ್ದು ಪ್ರವೇಶ ಪಡೆದುಕೊಳ್ಳಬಹುದಾಗಿದೆ. ದಿನಾಂಕ ೨೯ ರಂದು ಸೂಪರ್ ನ್ಯೂಮರಿ ಕೋಟಾದ ಅಡಿಯಲ್ಲಿ ಪ್ರವೇಶ ಪಡೆದುಕೊಳ್ಳಬಹುದಾಗಿದ್ದು ದಿನಾಂಕ ೩೦ರಂದು ಸೆಲ್ಪ್ ಸಪೋರ್ಟಿಂಗ್ ಯೋಜನೆ ಅನ್ವಯ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಂಕರಗೌಡ ಸೋಮನಾಳ, ಕುಲಸಚಿವರು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರÀ- ೫೮೬೧೦೮. ದೂರವಾಣಿ ಸಂಖ್ಯೆ: ೦೮೩೫೨-೨೯೭೦೬೨, ೭೭೯೫೧೨೨೯೬೦, ೭೨೦೪೮೮೯೮೫೫ ಮತ್ತು ೯೯೦೧೮೨೭೬೯೬; ತಿebsiಣe: ತಿತಿತಿ.ಞsತಿu.ಚಿಛಿ.iಟಿ ಸಂಪರ್ಕಿಸಬಹುದಾಗಿದೆ.

