Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಎಲ್ಡಿಇ ಸಂಸ್ಥೆ ಜನಸೇವೆ ರಾಷ್ಟ್ರವ್ಯಾಪಿ ವಿಸ್ತರಿಸುವ ಸದುದ್ದೇಶ
(ರಾಜ್ಯ ) ಜಿಲ್ಲೆ

ಬಿಎಲ್ಡಿಇ ಸಂಸ್ಥೆ ಜನಸೇವೆ ರಾಷ್ಟ್ರವ್ಯಾಪಿ ವಿಸ್ತರಿಸುವ ಸದುದ್ದೇಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭಾರತೀಯ ಲಿಂಗಾಯತ ಡೆವಲೆಪಮೆಂಟ್ ಎಜುಕೇಶನ್ ಅಸೋಸಿಯೇಷನ್ ಎಂದು ಮರುನಾಮಕರಣ | ಅಧ್ಯಕ್ಷ ಎಂ.ಬಿ.ಪಾಟೀಲ ಸ್ಪಷ್ಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಂಸ್ಥೆಯ ಜನಸೇವೆಯನ್ನು ರಾಷ್ಟ್ರವ್ಯಾಪಿ ವಿಸ್ತರಿಸುವ ಸದುದ್ದೇಶದಿಂದ ಬಿಜಾಪುರ ಲಿಂಗಾಯತ ಡಿಸ್ಟ್ರೀಕ್ಡ್ ಎಜುಕೇಶನ್ ಅಸೋಸಿಯೇಷನ್ ಹೆಸರನ್ನು ಭಾರತೀಯ ಲಿಂಗಾಯತ ಡೆವಲೆಪಮೆಂಟ್ ಎಜುಕೇಶನ್ ಅಸೋಸಿಯೇಷನ್ ಎಂದು ಬದಲಾಯಿಸಲು ಇಂದು ರವಿವಾರ ನಡೆದ ಬಿ.ಎಲ್.ಡಿ.ಇ ಸಂಸ್ಥೆಯ ಸರ್ವ ಸದಸ್ಯರ ವಿಶೇಷ ಸಭೆಯಲ್ಲಿ ಒಕ್ಕೊರಲಿನಿಂದ ಅನುಮೋದನೆ ನೀಡಲಾಗಿದೆ.
ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಮಾತನಾಡಿದ ಎಂ. ಬಿ. ಪಾಟೀಲ ಅವರು, 1910ರಲ್ಕಿ ವಿಜಯಪುರದಲ್ಲಿ ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್ ಎಜುಕೆಶನಲ್ ಅಸೋಸಿಯೇಷನ್ ಪ್ರಾರಂಭವಾಗಿತ್ತು. ಈಗ ವಿಜಯಪುರ ಜಿಲ್ಲೆ ವಿಭಜನೆಯಾಗಿದೆ. ಸಂಸ್ಥೆಯ ವತಿಯಿಂದ ಬೆಂಗಳೂರಿನ ಹೃದಯ ಭಾಗದಲ್ಲಿ ರೂ. 300 ಕೋ. ವೆಚ್ಚದಲ್ಲಿ ಜಮೀನು ಖರೀದಿಸಲಾಗಿದೆ. ಮುಂಬರುವ ದಿನಗಲ್ಲಿ ಅಲ್ಲಿ ನಾನಾ ಕಾಲೇಜುಗಳನ್ನು ಪ್ರಾರಂಭಿಸುವ ಉದ್ದೇಶವಿದೆ. ಈ ಮೂಲಕ ಸಂಸ್ಥೆಯ ಕಾರ್ಯ ವ್ಯಾಪ್ತಿಯನ್ನು ರಾಜ್ಯಕ್ಕೆ ವಿಸ್ತರಿಸಲಾಗುತ್ತಿದೆ. ಭವಿಷ್ಯದಲ್ಲಿ ಸಂಸ್ಥೆಯ ಕಾರ್ಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸುವ ಸದುದ್ದೇಶದಿಂದ ಈಗ ಇರುವ ಸಂಸ್ಥೆಯ ಟೈಟಲ್ ನಲ್ಲಿ ಬಿಜಾಪುರ ಬದಲು ಭಾರತೀಯ ಮತ್ತು ಡಿಸ್ಟ್ರಿಕ್ಟ್ ಬದಲು ಡೆವಲೆಪಮೆಂಟ್ ಶಬ್ದಗಳನ್ನು ಸೇರಿಸಿ ಬದಲಾವಣೆ ಮಾಡಲಾಗುತ್ತಿದೆ. ಇನ್ನು ಮುಂದೆ ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್ ಎಜುಕೇಶನ್ ಅಸೋಸಿಯೇನ್ ಹೆಸರು ಭಾರತೀಯ ಲಿಂಗಾಯತ ಡೆವಲೆಪಮೆಂಟ್ ಎಜುಕೇಶನ್ ಅಸೋಸಿಯೇಷನ್ ಎಂದು ಬದಲಾಗಲಿದೆ. ಈ ಮೂಲಕ ಸಂಸ್ಥೆಯ ಸೇವಾವ್ಯಾಪ್ತಿ ದೇಶಾದ್ಯಂತ ವಿಸ್ತರಣೆಯಾಗಲಿದೆ ಎಂದು ಹೇಳಿದರು.
ಸಂಸ್ಥೆಯ ಹೆಸರು ಬದಲಾವಣೆಯಾದರೂ ಅದರ ಮೂಲ ಸಂಕ್ಷಿಪ್ತ ಹೆಸರು ಬಿ.ಎಲ್.ಡಿ.ಇ. ಅಸೋಸಿಯೇಷನ್ ಯಥಾರೀತಿ ಉಳಿಯಲಿದೆ. ಈ ಮೂಲಕ ಸಂಸ್ಥೆಯ ಪ್ರಾತಃಸ್ಮರಣೀಯರಾದ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ, ಬಂಥನಾಳ ಶ್ರೀಗಳು, ಶ್ರೀ ಬಿ. ಎಂ. ಪಾಟೀಲ ಹಾಗೂ ಬಂಗಾರಮ್ಮ ಸಜ್ಜನ ಅವರ ದೂರದೃಷ್ಠಿಯ ಸಮಾಜ ಸೇವೆಯ ಚಿಂತನೆಯನ್ನು ದೇಶಾದ್ಯಂತ ವಿಸ್ತರಿಸಲಾಗುತ್ತಿದೆ. ಇದರಿಂದ ಭವಿಷ್ಯ ಜನಾಂಗಕ್ಕೂ ಸಾಕಷ್ಟು ಅನುಕೂಲವಾಗಲಿದೆ ಎಂದು ಎಂ. ಬಿ. ಪಾಟೀಲ ಅವರು ಹೇಳಿದರು.
ಈ ಸಭೆಯಲ್ಲಿ ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಜಿ. ಕೆ. ಪಾಟೀಲ, ನಿರ್ದೇಶಕರಾದ ಸುನೀಲಗೌಡ ಪಾಟೀಲ, ಬಸನಗೌಡ ಎಂ. ಪಾಟೀಲ, ಅಶೋಕ ವಾರದ, ಸಂಗು ಸಜ್ಜನ, ವಿ. ಎಸ್. ಪಾಟೀಲ ಬಬಲೇಶ್ವರ, ಕುಮಾರ ದೇಸಾಯಿ, ಕೆ. ಕೆ. ಪಾಟೀಲ ತೊರವಿ, ಡಾ. ಎ. ಬಿ. ಪಾಟೀಲ ಲಿಂಗದಳ್ಳಿ, ಆಜೀವ, ಪೋಷಕ ಮತ್ತು ಸರ್ವ ಸದಸ್ಯರು, ಬಿ.ಎಲ್.ಡಿ.ಇ ಸಂಸ್ಥೆಯ ನಾನಾ ಆಡಳಿತಾಧಿಕಾರಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶ್ರದ್ಧಾಂಜಲಿ

ಸಭೆಯ ಪ್ರಾರಂಭದಲ್ಲಿ ಸಂಸ್ಥೆಯ ಮೃತ ಸದಸ್ಯರಾದ ಪ್ರಭು ಬಸವಂತಪ್ಪ ಕುಪ್ಪಿ, ಬಾಲಚಂದ್ರ ಅಪ್ಪಾಸಾಹೇಬ ಪಾಟೀಲ, ಪ್ರಕಾಶ ಶ್ರೀನಿವಾಸ ಶೆಟ್ಟಿ, ಹಣಮಂತ ರಾಮಪ್ಪ ಬಿರಾದಾರ, ಸಿದ್ದಪ್ಪ ನಿಂಗಪ್ಪ ಜನವಾಡ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.