ವಿಜಯಪುರ: ವಿಧಾನಸಭೆ ಚುನಾವಣೆ ಹಿನ್ನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯಪುರ ನಗರಕ್ಕೆ ಏ.29 ರಂದು ಆಗಮಿಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ. (ಕೂಚಬಾಳ) ಹೇಳಿದರು.
ಸೋಮವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೊಷ್ಠಿಯಲ್ಲಿ ಅವರು ಮಾಹಿತಿ ವಿವರಿಸಿದರು.
ಸೈನಿಕ ಶಾಲೆ ಆವರಣದಲ್ಲಿ ಮೋದಿ ಅವರ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಕಲ ಸಿದ್ದತೆ ನಡೆಸಲಾಗುತ್ತಿದೆ. ಜಿಲ್ಲೆಯ ಎಂಟು ವಿಧಾನ ಸಭಾ ಚುನಾವಣೆಗೆ ಸಂಬಧಿಸಿದಂತೆ ಪ್ರಧಾನಿ ಮೋದಿ ಮತ್ತಿತರ ಗಣ್ಯರು ಪ್ರಚಾರ ಕೈಗೊಳ್ಳಲಿದ್ದಾರೆ ಎಂದರು.
ಏ.25 ರಂದು ಕೇಂದ್ರ ಗೃಹ ಖಾತೆ ಸಚಿವ ಅಮೀತ ಶಹಾ ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿರುವರು. ಹಾಗೆಯೇ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೂ ಸಹ ಏ.25ರಂದು ಇಂಡಿ ಮತಕ್ಷೇತ್ರದಲ್ಲಿ ಪ್ರಚಾರ ನಡೆಸುವರು. ಅಂದು ವಿಜಯಪುರದಲ್ಲಿ ವಾಸ್ತವ್ಯ ಹೂಡಿ ಮರುದಿನ ಬಬಲೇಶ್ವರ ಮತಕ್ಷೇತ್ರದ ಕನಮಡಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿರುವರು. ಏ.೨೭ ರಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಜಿಲ್ಲೆಯ ಬಸವನ ಬಾಗೇವಾಡಿ ಮತ್ತು ಇಂಡಿ ಕ್ಷೇತ್ರಗಳಲ್ಲಿ ಪ್ರಚಾರ ಕೈಕೊಳ್ಳಲಿದ್ದಾರೆ ಎಂದು ಪಾಟೀಲ ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ದಿ ನೋಡಿ ಈ ಬಾರಿ ಬಿಜಿಪಿ. ಪ್ರಚಂಡ ಬಹುಮತ ಗಳಿಸಲಿದೆ ಎಂದ ಅವರು, ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಆಡಳಿತದ ಸುಮಾರು ಅರವತ್ತು ವರ್ಷದಲ್ಲಿ ಬ್ರಹ್ಮಾಂಡ ಬ್ರಷ್ಠಾಚಾರ ಮಾಡಿ ಹಗರಣಗಳಿಂದಲೇ ಖ್ಯಾತಿಯಾಗಿತ್ತು. ಹೀಗಿದ್ದಾಗ ರಾಹುಲ ಗಾಂಧಿ ನಮ್ಮ ಪಕ್ಷವನ್ನು ಕಳ್ಳರ ಪಕ್ಷವೆಂದು ಜರಿದದ್ದು ಭೂತದ ಬಾಯಲ್ಲಿ ಭಗವದ್ಗಿತೆ ಕೇಳಿದಂತೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಿ ರಾಜಕಾರಣಿ. ಅಂಥವರು ಲಿಂಗಾಯತರೆಲ್ಲ ಭ್ರಷ್ಠರು ಎನ್ನುವ ಮಾತನ್ನು ರಾಜ್ಯದ ಜನ ಎಂದಿಗೂ ಕ್ಷಮಿಸರು ಎಂದರು.
ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ನಾಗಠಾಣ ಮತಕ್ಷೇತ್ರದ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ. ಓರ್ವ ಬಡ ಅಭ್ಯರ್ಥಿಯನ್ನು ಪಕ್ಷ ಗುರ್ತಿಸಿ ಟಿಕೇಟ ಕೊಟ್ಟಿದೆ. ಅವರನ್ನು ಗೆಲ್ಲಿಸುವ ಹೊಣೆ ನಮ್ಮೆಲ್ಲರ ಮೇಲೆ ಇದೆ. ಅದನ್ನು ಸಮರ್ಥವಾಗಿ ನಿಭಾಯಿಸಿ ಗೆಲ್ಲಿಸಿಕೊಂಡು ಬರುತ್ತೇವೆ ಅಂದರು.
ಪತ್ರಿಕಾಗೊಷ್ಟಿಯಲ್ಲಿ ಬಿಜೆಪಿ ಮುಖಂಡರಾದ ಸುರೇಶ ಬಿರಾದಾರ, ಸಂಜಯ ಪಟೀಲ, ಮಲ್ಲಿಕಾರ್ಜುನ ಜೋಗೂರ, ವಿಜಯ ಜೋಶಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

