ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ತೊಂದರೆಗೊಳಗಾದ ರೈತರ ಅಹವಾಲು ಕೇಳಲು ರಾಜ್ಯ ಬಿಜೆಪಿ ವತಿಯಿಂದ ತಂಡ ರಚಿಸಲಾಗಿದೆ.
ಸಂಸದ ಗೋವಿಂದ ಕಾರಜೋಳ, ಶಾಸಕ ಹರೀಶ್ ಪೂಂಜಾ, ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಎಂಎಲ್ಸಿ ಅರುಣ ಶಹಾಪುರ, ಬಿಜೆಪಿ ರೈತಮೋರ್ಚಾ ರಾಜ್ಯ ಪ್ರ.ಕಾರ್ಯದರ್ಶಿ ಕಲ್ಮರುಡಪ್ಪ ತಂಡವು ಅ.೨೯ ರಂದು ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
