ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದ ನಾವಿನ್ಯತೆಯೊಂದಿಗೆ ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಎಂಬ ಘೋಷವಾಕ್ಯದೊಂದಿಗೆ ಅ.೨೯ರಂದು ನಗರದ ಆರ್.ಕೆ.ಎಂ. ಆಯುರ್ವೇದ ಮೆಡಿಕಲ್ ಕಾಲೇಜ್‌ನಲ್ಲಿ ೯ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ನವದೆಹಲಿ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
