Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಾದಿ ಶರಣರ ವಿಚಾರಗಳೆ ಬದುಕಿಗೆ ಆದರ್ಶ :ಶಂಕರ ಬಿದರಿ
(ರಾಜ್ಯ ) ಜಿಲ್ಲೆ

ಬಸವಾದಿ ಶರಣರ ವಿಚಾರಗಳೆ ಬದುಕಿಗೆ ಆದರ್ಶ :ಶಂಕರ ಬಿದರಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ೨೦೨೩-೨೪ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಸವಾದಿ ಶರಣರು ಸತ್ಯ ತತ್ವಗಳನ್ನು ಸಾಮರಸ್ಯಗೊಳಿಸಿದವರು. ಶರಣರ ವಿಚಾರಗಳು ನಮಗೆ ಆದರ್ಶ, ನಿತ್ಯ ಸ್ಪೂರ್ತಿ. ಸಮಾಜದಲ್ಲಿರುವ ಬಡಜನರ ಶೈಕ್ಷಣಿಕ, ಧಾರ್ಮಿಕ ಮತ್ತು ಸಾಮಾಜಿಕವಾಗಿ ಎಲ್ಲರನ್ನು ಒಗ್ಗೂಡಿಸಿದ ಕೀರ್ತಿ ಪೂಜ್ಯ ಹಾನಗಲ್ ಕುಮಾರಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ಹೇಳಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ೨೦೨೩-೨೪ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ನಮ್ಮ ಸಮಾಜದಲ್ಲಿ ವೀರಶೈವ, ಲಿಂಗಾಯತ ಸ್ವಲ್ಪ ಅಂತರವಿದೆ. ತಲತಲಾಂತರದಿAದ ಬಂದ ವೀರಶೈವ ಸಮಾಜ ಧರ್ಮ ಉಳಿಯಬೇಕಾಗಿದೆ. ಎಲ್ಲ ವರ್ಗಗಳ ಸಹಕಾರ ಇಂದು ಅವಶ್ಯಕತೆ ಇದೆ. ನೆರೆಯ ಮಹಾರಾಷ್ಟç, ತೆಲಂಗಾಣ ರಾಜ್ಯಗಳಲ್ಲಿ ವೀರಶೈವ ಲಿಂಗಾಯತ ಸಮಾಜ ಇದೆ. ಎಲ್ಲರನ್ನು ಜೊತೆಗೂಡಿ ಒಗ್ಗಟ್ಟಾಗಿ ಹೋಗಬೇಕಾಗಿದೆ. ವೀರಶೈವ ಪದ ಹಿಂದುಳಿದ ಓಬಿಸಿ ಪಟ್ಟಿಯಲ್ಲಿ ಸೇರಿಸಬೇಕಾಗಿದೆ. ನಮ್ಮ ಸಮಾಜ, ಧರ್ಮ ಉಳಿಯಬೇಕಾಗಿದೆ. ಸಂಸ್ಕಾರದಿಂದ ದೂರ ಉಳಿಯಬಾರದು ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು ಬದುಕು ಸುಂದರವಾಗಿಸಿಕೊಳ್ಳಬೇಕು ಎಂದರು.
ಷಣ್ಮುಖಾರೂಢ ಮಠದ ಪೂಜ್ಯ ಸದ್ಗುರು ಅಭಿನವ ಸಿದ್ಧಾರೂಢ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ೧೯೦೪ರಲ್ಲಿ ಪೂಜ್ಯ ಹಾನಗಲ್ ಕುಮಾರಸ್ವಾಮಿಗಳು ಸ್ಥಾಪಿಸಿದ ಸಂಸ್ಥೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಂದಿನ ಶಿರಸಂಗಿ ಲಿಂಗರಾಜ ಮಹಾರಾಜರು, ಸೊನ್ನದ, ಆಲಮೇಲ ದೇಸಾಯಿ, ವಾರದ ಮಲ್ಲಪ್ಪ, ಹಾಗೂ ಹಿರಿಯರು ಸಂಸ್ಥೆಯ ಏಳ್ಗೆಗಾಗಿ ಸಾಮಾನ್ಯ ಜನರಿಗೆ ಶೈಕ್ಷಣಿಕ ಸೌಲಭ್ಯ, ಉಚಿತ ಪ್ರಸಾದ ನಿಲಯಗಳನ್ನು ತೆರೆದು ಸಮಾಜದ ಒಳತಿಗಾಗಿ ಶ್ರಮಿಸಿದವರು. ಪೂಜ್ಯರ ಸ್ಮರಣೆ ವೀರಶೈವ ಲಿಂಗಾಯತ ಸಮುದಾಯಕ್ಕೆ ನ್ಯಾಯವನ್ನು ಒದಗಿಸಿದ ಮಹಾಪುರುಷುರು ನಮ್ಮ ಇಂದಿನ ಬದುಕು ಸುಂದರವಾಗಬೇಕಾದರೆ ಸಂಸ್ಕಾರ, ಸಂಸ್ಕೃತಿ, ಧರ್ಮ ಬಹಳ ಮುಖ್ಯ ಇದರಲ್ಲಿ ದಾನಿಗಳ ಪಾತ್ರ ತುಂಬಾ ಮಹತ್ವ ಪಡೆಯುತ್ತದೆ. ಇಂದು ನಾವೆಲ್ಲ ಸೇರಿ ವೀರಶೈವ ಲಿಂಗಾಯತ ಧರ್ಮ ಉಳಿಸಲು ಕೈಜೋಡಿಸಬೇಕಾಗಿದೆ ಎಂದು ಕರೆ ನೀಡಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಜಿಲ್ಲಾಧ್ಯಕ್ಷ ವಿ.ಸಿ. ನಾಗಠಾಣ, ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿದ್ರಾಮಪ್ಪ ಉಪ್ಪಿನ, ಸಹದೇವ ನಾಡಗೌಡರ, ಎಂ.ಜಿ. ಯಾದವಾಡ, ಬಿ.ಟಿ. ಈಶ್ವರಗೊಂಡ, ಎಸ್.ಎ. ಪಾಟೀಲ, ವಿದ್ಯಾವತಿ ಅಂಕಲಗಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಸಾಹಿತಿಗಳಾದ ಸಂಗಮೇಶ ಬದಾಮಿ, ದೊಡ್ಡಣ್ಣ ಭಜಂತ್ರಿ ಕಾರ್ಯಕ್ರಮ ನಿರ್ವಹಿಸಿದರು. ಡಾ. ವಿ.ಡಿ. ಐಹೊಳ್ಳಿ, ಶಾರದಾ ಕೊಪ್ಪ, ಜ್ಯೋತಿ ಬಾಗಲಕೋಟ, ಉಷಾ ಹಿರೇಮಠ, ತಾಲೂಕಾ ಅಧ್ಯಕ್ಷ ಬಸವರಾಜ ಇಟ್ಟಂಗಿ, ರವೀಂದ್ರ ಬ್ಯಾಕೋಡ, ಮಹಾದೇವ ಹಾಲಳ್ಳಿ, ಬಸವರಾಜ ಒಂಟಗೋಡಿ, ಪರಶುರಾಮ ಪೋಳ, ವಿಠ್ಠಲ ತೇಲಿ, ವಿ.ಬಿ. ಸಾಲಕ್ಕಿ, ಯುವರಾಜ ಜೋಳಕೆ ಉಪಸ್ಥಿತರಿದ್ದರು.
ನಂತರ ಜಿಲ್ಲಾ ಘಟಕ ಮತ್ತು ತಾಲೂಕಾ ಘಟಕಗಳಿಂದ ರಾಜ್ಯಾಧ್ಯಕ್ಷರಾದ ಶಂಕರ ಬಿದರಿ ಅವರನ್ನು ಸತ್ಕರಿಸಲಾಯಿತು.

public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.