ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಎಂದು ನಮೂದಿಸಿರುವುದನ್ನು ಖಂಡಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಕರಾಳ ದೀಪಾವಳಿ ಹೋರಾಟಕ್ಕೆ ಬೆಂಬಲ ಸೂಚಿಸುವುದಾಗಿ ಬಬಲೇಶ್ವರ ಮಂಡಲ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಅಧ್ಯಕ್ಷ ಸಚಿನ ಗದ್ಯಾಳ ತಿಳಿಸಿದ್ದಾರೆ.
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ರೈತರ ಪಹಣಿಯಲ್ಲಿ ಕರ್ನಾಟಕ ವಕ್ಪ್ ಬೊರ್ಡ್ ಅಂತ ನಮೂದಿಸಿ ಕಾಂಗ್ರೇಸ್ ಸರ್ಕಾರ ರಾಜ್ಯದಲ್ಲಿ ಗೊಂದಲ ಸೃಷ್ಟಿಸಿದೆ. ರಾಜ್ಯದಲ್ಲಿಯೇ ವಿಜಯಪುರ ಜಿಲ್ಲೆಯನ್ನೆ ಟಾರ್ಗೇಟ್ ಮಾಡಿದೆ. ತಲೆತಲಾಂತರಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ರೈತರು ಸಂಕಷ್ಟಕ್ಕೆ ಸಿಲುಕಿ ಭೂಮಿ ಕಳೆದು ಹೋಗುತ್ತದೆ ಎಂಬ ಆತಂಕದಲ್ಲಿದ್ದಾರೆ.
ಆತಂಕದಲ್ಲಿರುವ ರೈತರ ಸಂಕಷ್ಟಕ್ಕೆ ನೆರವಾಗಿ ಅವರ ಒಂದಿಚು ಭೂಮಿ ಕಳೆದು ಹೋಗದಂತೆ ಹೋರಾಟ ಮಾಡುತ್ತೇವೆ. ವಿವಿಧ ರೈತ ಸಂಘಟನೆಗಳು ನಡೆಸುವ ಕರಾಳ ದೀಪಾವಳಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸುವುದಾಗಿ ಅವರು ತಿಳಿಸಿದ್ದಾರೆ.

