ದೇವರಹಿಪ್ಪರಗಿ: ಏ.25 ಮಂಗಳವಾರದAದು ಮಧ್ಯಾನ್ಹ ದೇವರಹಿಪ್ಪರಗಿ ಪಟ್ಟಣಕ್ಕೆ ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಕ್ಯ ಅಮಿತ್ ಶಾ ಆಗಮಿಸಿ ಬಿಜೆಪಿ ಪರ ಬಹಿರಂಗ ಸಭೆಯ ಮೂಲಕ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ತಿಳಿಸಿದ್ದಾರೆ.
ಮಂಗಳವಾರ ಮಧ್ಯಾನ್ಹ 1 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿ ಉರ್ದು ಪ್ರೌಡಶಾಲೆಯ ಆವರಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ ಮೂಲಕ ಬಿಎಲ್‌ಡಿಇ ಹಳೇ ಪ್ರೌಡಶಾಲಾ ಆವರಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೇಂದ್ರ ಗೃಹ ಸಚಿವರು ಇದೇ ಪ್ರಥಮ ಬಾರಿಗೆ ದೇವರಹಿಪ್ಪರಗಿಗೆ ಆಗಮಿಸುತ್ತಿದ್ದು, ಸುಮಾರು 20 ಸಾವಿರ ಜನ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಸೇರುವ ನಿರೀಕ್ಷೆಯಿದೆ. ಇವರ ಜೊತೆ ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು, ಪದಾಧಿಕಾರಿಗಳು, ಆಗಮಿಸಲಿದ್ದಾರೆ. ಮಧ್ಯಾನ್ಹ 2:30 ಗಂಟೆಯವರೆಗೆ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮದ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಕ್ಷೇತ್ರದ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ನಾಯಕರಿಗೆ ಹೆಚ್ಚಿನ ಭದ್ರತೆ ಇರುವುದರಿಂದ ಕಾರ್ಯಕರ್ತರು, ಸಾರ್ವಜನಿಕರು ಬೇಗನೆ ಬಂದು ಆಸೀನರಾಗಬೇಕು. ಮತಕ್ಷೇತ್ರದ ಎಲ್ಲ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಬಿಜೆಪಿ ಮಂಡಲ ಅಧ್ಯಕ್ಷ ಭೀಮನಗೌಡ ಸಿದರೆಡ್ಡಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕೇಂದ್ರಸಚಿವ ಅಮಿತ್ ಶಾ ಸಭೆಗೆ 20 ಸಾವಿರ ಜನ ಸೇರುವ ನಿರೀಕ್ಷೆ :ಶಾಸಕ ಸೋಮನಗೌಡ
Related Posts
Add A Comment