Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉದ್ದೇಶಿತ ಯೋಜನಾ ಸ್ಥಳಗಳಿಗೆ ಕೆಎಂಬಿ ಸಿಇಒ ಭೇಟಿ
(ರಾಜ್ಯ ) ಜಿಲ್ಲೆ

ಉದ್ದೇಶಿತ ಯೋಜನಾ ಸ್ಥಳಗಳಿಗೆ ಕೆಎಂಬಿ ಸಿಇಒ ಭೇಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಾಗರಮಾಲ ಯೋಜನೆಯಡಿ ಪ್ರವಾಸೋದ್ಯಮ ಪೂರಕವಾಗಿ ಮತ್ತು ಸ್ಥಳೀಯ ಜನರಿಗೆ ಅನುಕೂಲವಾಗುವ ಆಲಮಟ್ಟಿ, ಹೆರಕಲ್‌ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್‌ ರಾಯ್‌ ಪುರ ಅವರು ತಿಳಿಸಿದರು.
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಮತ್ತು ಹೆರಕಲ್‌ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳ ಕಾರ್ಯಸಾಧ್ಯತೆ, ಯೋಜನೆಯ ಭೂಸ್ವಾಧೀನ ಮತ್ತು ಜಲಸಾರಿಗೆ ಉಪಯುಕ್ತತೆ ಬಗ್ಗೆ ಪರಿಶೀಲನೆ ಹಾಗೂ ಆಲಮಟ್ಟಿ ಆಣೆಕಟ್ಟಿನ ಕೆಳಭಾಗದಲ್ಲಿರುವ 25 ಎಕರೆ ಜಮೀನಿನಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೀನು ಸಾಕಾಣಿಕೆ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿರುವ ಜಲಮಾರ್ಗದ ಮುಖಾಂತರ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಿದಲ್ಲಿ ಸ್ಥಳೀಯ ಜನರಿಗೆ ವಿವಿಧ ಆರ್ಥಿಕವಾಗಿ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ನದಿ ತೀರದಲ್ಲಿ ಜಲಮಾರ್ಗದ ಮುಖಾಂತರ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸಿದ್ದಲ್ಲಿ ಹೆಚ್ಚಿನ ಸಂಖ್ಯೆ ಪ್ರವಾಸಿಗರ ಗಮನ ಹೆಚ್ಚು ಸೆಳೆಯಬಹುದು. ಜೊತೆಗೆ ಈ ಯೋಜನೆಯಿಂದ ಸ್ಥಳೀಯ ಜನರು ವಿವಿಧ ಆರ್ಥಿಕ ಪ್ರಯೋಜನಗಳು ಪಡೆದುಕೊಳ್ಳಬಹುದು ಎಂದರು.
ಈ ಯೋಜನೆಯನ್ನು ಅಭಿವೃದ್ಧಿಪಡಿಸಿದಲ್ಲಿ ಪ್ರವಾಸಿಗರು ಮತ್ತು ಸುತ್ತಮುತ್ತ ಪ್ರದೇಶದ ನಿವಾಸಿಗಳಿಗೆ ನೀರು ಆಧಾರಿತ ಕ್ರೀಡೆಗಳನ್ನು ಅನುಭವಿಸುವ ಅವಕಾಶಗಳನ್ನು ಒದಗಿಸಿ ಪ್ರವಾಸೋದ್ಯಮ ಚಟುವಟಿಕೆಗಳು ಅಭಿವೃದ್ಧಿಯಾಗಲಿದೆ ಜಯರಾಮ್‌ ರಾಯ್‌ ಪುರ ಅವರು ತಿಳಿಸಿದರು.
ಈ ಪ್ರದೇಶದಲ್ಲಿ ದೋಣಿ/ನೌಕೆ ನಿರ್ಮಾಣ, ಬೋಟ್‌ ಯಾರ್ಡ್‌ಗಳು ಹಾಗೂ ಸಂಬಂಧಿತ ಉಪಕರಣಗಳ ತಯಾರಿಕೆ ಮುಂತಾದ ಇತರ ಬೆಂಬಲದೊಂದಿಗೆ ಉದ್ಯಮ ತೆರೆಯುವ ಸಾಮರ್ಥ್ಯವನ್ನು ಅಭಿವೃದ್ಧಿ ಪಡಿಸುವಿಕೆಯಲ್ಲಿ ನೆರವಾಗಲಿದೆ ಎಂದು ತಿಳಿಸಿದರು.
ಸುತ್ತ ಮುತ್ತಲಿನ ಜಿಲ್ಲೆಯಲ್ಲಿರುವ ಪ್ರವಾಸ ತಾಣಗಳು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿದ್ದು, ಜಲಮಾರ್ಗದ ಅಭಿವೃದ್ಧಿಗೆ ಮೂಲಸೌಕರ್ಯ ಒದಗಿಸಿದ್ದಲ್ಲಿ ಪ್ರತಿದಿನ ಹೆಚ್ಚಿನ ಸಂಖ್ಯೆ ಪ್ರವಾಸಿಗರನ್ನು ಆಕರ್ಷಿಸಿ ಸರ್ಕಾರಕ್ಕೆ ಆದಾಯವನ್ನು ಗಳಿಸಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತ ಅಧೀಕ್ಷಕ ಇಂಜಿನೀಯರ್‌ ಹಿರೇಗೌಡರ, ಕಾರ್ಯಪಾಲಕ ಇಂಜಿನಿಯರ್‌ ದೊಡ್ಡಮನಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಚಲವಾದಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್‌ ಪಾಂಡುರಂಗ, ಕುಲಕರ್ಣಿ ಸೇರಿದಂತೆ ಮತ್ತಿತ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.