Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನರೇಗದಲ್ಲಿ ಅರ್ಜಿ ಸಲ್ಲಿಸಿ ಕಾಮಗಾರಿ ಪಡೆದುಕೊಳ್ಳಿ :ಮಸಳಿ
(ರಾಜ್ಯ ) ಜಿಲ್ಲೆ

ನರೇಗದಲ್ಲಿ ಅರ್ಜಿ ಸಲ್ಲಿಸಿ ಕಾಮಗಾರಿ ಪಡೆದುಕೊಳ್ಳಿ :ಮಸಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೊನ್ನುಟಿಗಿ ಗ್ರಾಮದಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಾಲೂಕಿನ ಹೊನ್ನುಟಿಗಿ ಗ್ರಾಮದಲ್ಲಿ ಮನರೇಗಾ ಯೋಜನೆಯ ಮಾಹಿತಿ, ಶಿಕ್ಷಣ & ಸಂವಹನ (ಐಇಸಿ) ಕಾರ್ಯಕ್ರಮದಡಿ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನದ ಅಂಗವಾಗಿ ಮನೆ-ಮನೆಗೆ ಭೇಟಿ ಕಾರ್ಯಕ್ರಮಕ್ಕೆ ಸಹಾಯಕ ನಿರ್ದೇಶಕ ಕಾಸಿಮಸಾಬ ಮಸಳಿ ಚಾಲನೆ ನೀಡಿ ಮಾತನಾಡಿದರು.
ಸರಕಾರದ ನಿರ್ದೇಶನದಂತೆ ೨೦೨೪-೨೫ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ನಿಟ್ಟಿನಲ್ಲಿ ಅಕ್ಟೋಬರ್ ೦೨ ರಿಂದ ಒಂದು ತಿಂಗಳುಗಳ ಕಾಲ ನಮ್ಮ ವಿಜಯಪುರ ತಾಲೂಕು ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಈ ಅಭಿಯಾನದ ಭಾಗವಾಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿ ಮನೆ-ಮನೆಗೆ ಭೇಟಿ ನೀಡಿ ಕರಪತ್ರಗಳನ್ನು ನೀಡುವದರ ಜೊತೆಗೆ ಯೋಜನೆಯ ಕುರಿತು ಮಾಹಿತಿ ನೀಡಲಾಗುತ್ತಿದೆ. ಅಭಿಯಾನದ ಭಾಗವಾಗಿ ಗ್ರಾಮದ ರೈತ್ತರು & ಗ್ರಾಮಸ್ಥರು ತಮಗೆ ಬೇಕಾದ ಕಾಮಗಾರಿಗಳ ಬೇಡಿಕೆಯನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಬೇಕು ಅದನ್ನು ಮುಂದಿನ ವರ್ಷದ ಕ್ರೀಯಾಯೋಜನೆಯಲ್ಲಿ ಅನುಮೋದನೆ ಪಡೆದುಕೊಂಡು ತಮಗೆ ಕಾಮಗಾರಿ ಆದೇಶ ಪತ್ರವನ್ನು ನೀಡುತ್ತಾರೆ ಎಂದರು. ಜೊತೆಗೆ ಈ ಯೋಜನೆಯಡಿ ಮಹಿಳೆಯರಿಗೆ, ದುರ್ಬಲ ವರ್ಗದವರಿಗೆ, ವಿಶೇಷಚೇತನರಿಗೆ ಪ್ರಥಮಾಧ್ಯತೆ ನೀಡುವ ಜೊತೆಗೆ ಮಕ್ಕಳ ದೈಹಿಕ & ಮಾನಸಿಕ ಬೆಳವಣಿಗೆಗೆ ಅವಶ್ಯಕ ಶಾಲಾಭಿವೃದ್ಧಿ ಕಾಮಗಾರಿಗಳನ್ನು ಈ ಕ್ರಿಯಾಯೋಜನೆಯಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ. ಅದರ ಜೊತೆಗೆ ರೈತಾಪಿ ವರ್ಗಕ್ಕೆ ವೈಯಕ್ತಿಕ ಕಾಮಗಾರಿಗಳನ್ನು ನೀಡಲಾಗುತ್ತಿದೆ. ಈ ತಾಂತ್ರಿಕ ಯುಗದಲ್ಲಿ ಎಲ್ಲರೂ ಪತ್ರರಹಿತ ಕೆಲಸ ಮಾಡಲು ಹೆಚ್ಚು ಒಲವು ತೋರುತ್ತಾರೆ. ಅದರಂತೆ ನಮ್ಮ ಮನರೇಗಾ ಯೋಜನೆಯ ಕುರಿತಾಗಿ ಒಂದು ಕ್ಯೂ.ಆರ್ ಕೋಡ್ ಅಭಿವೃದ್ಧಿಪಡಿಸಿದ್ದು, ಅದನ್ನು ಸ್ಕಾö್ಯನ ಮಾಡುವ ಮೂಲಕ ಗ್ರಾಮಸ್ಥರು ನೇರವಾಗಿ ಕಾಮಗಾರಿ ಬೇಡಿಕೆಯನ್ನು ಸಲ್ಲಿಸಬಹುದು. ಈ ಯೋಜನೆಯಡಿ ರೂತ್ತರು & ಗ್ರಾಮಸ್ಥರು ಕೃಷಿಹೊಂಡ, ಬದು ನಿರ್ಮಾಣ, ಬಚ್ಚಲು ನೀರು ಇಂಗು ಗುಂಡಿ, ದನಗಳ ಶೆಡ್ಡ್, ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ಪೇರು, ಗುಲಾಬಿ ಹೂ, ರೇಷ್ಮೆ ಬೆಳೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು ಎಂದರು.
ಈ ವೇಳೆ ಎಲ್ಲರೂ ಸೇರಿ ಗ್ರಾಮದ ವಿವಿಧ ಓಣಿಗಳಲ್ಲಿ ಸಂಚರಿಸಿ ಮನೆ-ಮನೆಗೆ ಕರಪತ್ರಗಳನ್ನು ವಿತರಣೆ ಮಾಡಿ ಮಾಹಿತಿ ನೀಡಲಾಯಿತು. ಜೊತೆಗೆ ಸ್ವಚ್ಛ ವಾಹಿನಿ ಮೂಲಕ ಮನರೇಗಾ ಯೋಜನೆಯ ಮಾಹಿತಿ ಪ್ರಚುರಪಡಿಸಲಾಯಿತು. ಜೊತೆಗೆ ಕಾಮಗಾರಿ ಬೇಡಿಕೆ ಪಟ್ಟಿ ಸ್ಥಾಪಿಸಿ, ಜನರಿಂದ ಬೇಡಿಕೆ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯಿತಿಯ ಯೋಜನಾಧಿಕಾರಿ ಎಸ್ ಎಸ್ ಅಳ್ಳಗಿ ಗ್ರಾಮ ಪಂಚಾಯತಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ್ ಮೂಲಿಮನಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಶಿವಪ್ಪ ಕೂಳುರಿಗಿ ಮತ್ತು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ತಾಲೂಕು ಐಇಸಿ ಸಂಯೋಜಕ ರಾಘವೇಂದ್ರ ಬಜಂತ್ರಿ, ತಾಂತ್ರಿಕ ಸಹಾಯಕರ ಪರಶುರಾಮ ಶಹಪುರ ಮತ್ತು Sಆಂ , ಶ್ರೀದೇವಿ ಕೊರವ, ತಾಂತ್ರಿಕ ಸಹಾಯಕರಾದ ಚನ್ನಬಸಪ್ಪ ಚೆನ್ನಗೊಂಡ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.