Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಕ್ರಿಯಾಯೋಜನೆ ರೂಪಿಸಿ
(ರಾಜ್ಯ ) ಜಿಲ್ಲೆ

ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಕ್ರಿಯಾಯೋಜನೆ ರೂಪಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭವಿಷ್ಯದಲ್ಲಿ ಮಕ್ಕಳ ದಾಖಲೆಗಳಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಪ್ರಾಥಮಿಕ ಹಂತದಲ್ಲಿಯೇ ಶಿಕ್ಷಣ ಇಲಾಖೆ ಹೊಂದಿರುವ ತಂತ್ರಾಂಶದಡಿ ಹೆಸರು ದಾಖಲಿಸುವ ಸಂದರ್ಭದಲ್ಲಿ ದಾಖಲಾಗುತ್ತಿರುವ ಮಕ್ಕಳ ಹೆಸರು-ಆಧಾರನೊಂದಿಗೆ ತಾಳೆಯಾಗಲು ಕ್ರಮ ವಹಿಸುವಂತೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಿಕ್ಷಣ ಇಲಾಖೆ ತಂತ್ರಾಂಶದಡಿ ಈಗಾಗಲೇ ದಾಖಲಾಗಿರುವ ಮಕ್ಕಳ ಹೆಸರುಗಳು ಆಧಾರದೊಂದಿಗೆ ಸರಿಪಡಿಸಲು ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳುವ ಮೂಲಕ ದಾಖಲೆಗಳನ್ನು ಸರಿಪಡಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಮಕ್ಕಳ ಶಿಕ್ಷಣದಲ್ಲಿ ಸುಧಾರಣೆಗೆ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ತಾಲೂಕಿನ ಬಿಇಓಗಳೊಂದಿಗೆ ಹಾಗೂ ಶಾಲೆ ಮುಖ್ಯೋಪಾಧ್ಯಾಯರೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಸೂಕ್ತ ಕ್ರೀಯಾಯೋಜನೆ ರೂಪಿಸಿಕೊಂಡು ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕ್ರಮ ವಹಿಸಬೇಕು. ಜಿಲ್ಲೆಯ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಸಮರ್ಪಕ- ವ್ಯವಸ್ಥಿತ ನಿರ್ವಹಣೆಗಾಗಿ ಸಿಬ್ಬಂದಿ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಸತಿ ನಿಲಯಗಳಿಗೆ ಕಟ್ಟಡಗಳ ಕೊರತೆಯಾದಲ್ಲಿ ಅವಶ್ಯಕತೆ ಇರುವ ವಸತಿ ನಿಲಯ ಕಟ್ಟಡಗಳ ಕುರಿತು ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಅರಣ್ಯ ಇಲಾಖೆಯಿಂದ ಜಿಲ್ಲೆಯಲ್ಲಿ ಹಸರಿಕರಣಕ್ಕೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯ ಕೈಗೊಂಡ ಕ್ರಮಗಳ ಕುರಿತು ಸೂಕ್ತ ಕಾರ್ಯಯೋಜನೆಯನ್ನು ಸಿದ್ಧಪಡಿಸಿಕೊಂಡು ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶ್ರೀಮತಿ ರೂಪಾ ಎಲ್., ತೋಟಗಾರಿಕೆ ಇಲಾಕೆ ಉಪನಿರ್ದೇಶಕ ರಾಹುಲ ಭಾವಿದೊಡ್ಡಿ, ಸಂಪತ್ಕುಮಾರ ಗುಣಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಪ್ರವಾಸೋದ್ಯಮ ಮಲ್ಲಿಕಾರ್ಜುನ ಭಜಂತ್ರಿ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರವಾಹ ನಿಯಂತ್ರಣ ಯೋಜನೆ ರೂಪಿಸುವ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲೆಯ ಹರನಾಳ, ದಾಶ್ಯಾಳ ಸಾರವಾಡ, ಎನ್.ಎಚ್.೨೧೮ ಹೊನಗನಹಳ್ಳಿ, ಉಕುಮನಾಳ, ಹಿಟ್ನಳ್ಳಿ ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಜ್‌ಗಳ ಪ್ರದೇಶಕ್ಕೆ ಭೇಟಿ ನೀಡಿ ತಾತ್ಕಾಲಿಕವಾಗಿ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಸೂಕ್ತ ಪರಿಶೀಲನೆ ನಡೆಸಲಾಗಿದೆ.

– ರಿಷಿ ಆನಂದ
ವಿಜಯಪುರ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಪ್ರಗತಿ ಪರಿಶೀಲನೆ

ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕ್ರೀಡಾ ಇಲಾಖೆ, ಆರೋಗ್ಯ ಇಲಾಖೆ, ರೇಷ್ಮೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು

ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು

ಸೆ.೭ರಂದು ಫೋನ್-ಇನ್ ಕಾರ್ಯಕ್ರಮ

೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
  • ಕೃಷ್ಣನ ವೇಷದಲ್ಲಿ ಕಂಗೊಳಿಸಿದ ಚಿಣ್ಣರು
    In (ರಾಜ್ಯ ) ಜಿಲ್ಲೆ
  • ಸೆ.೭ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೪ ಸಾವಿರಕ್ಕೂ ಅಧಿಕ ಶಿಕ್ಷಕರು ಹಳೆ ಪಿಂಚಣಿ ವ್ಯಾಪ್ತಿಗೆ :ನುಗ್ಗಲಿ
    In (ರಾಜ್ಯ ) ಜಿಲ್ಲೆ
  • ಗಜಾನನ ಮಹಾಮಂಡಳಿಗಳ ಪೂರ್ವಭಾವಿ ಸಭೆ ನಾಳೆ
    In (ರಾಜ್ಯ ) ಜಿಲ್ಲೆ
  • ಸೆ.೨೧ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಜನರ ಮನೆ ಬಾಗಿಲಲ್ಲೇ ಸಿಗಲಿದೆ ಪ್ರಜಾಸೇವೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಋಣ ತೀರಿಸಲು ಸಾಧ್ಯವಿಲ್ಲ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ’ಪ್ರಜಾಸೇವೆ’ ಆಂದೋಲನ ಯಶಸ್ವಿಗೆ ಸಹಕರಿಸಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಗೌರವಿಸುವುದು ಶ್ರೇಷ್ಠ ಕಾರ್ಯ :ಡಾ.ಸಮೀರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.