Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೇನು ಕೃಷಿ ರೈತರ ಆದಾಯ ವೃದ್ದಿಗೆ ಸಹಕಾರಿ :ಡಾ.ಪ್ರಸನ್ನ
(ರಾಜ್ಯ ) ಜಿಲ್ಲೆ

ಜೇನು ಕೃಷಿ ರೈತರ ಆದಾಯ ವೃದ್ದಿಗೆ ಸಹಕಾರಿ :ಡಾ.ಪ್ರಸನ್ನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜೇನು ಕೃಷಿ ತರಬೇತಿ, ಮೌಲ್ಯವರ್ಧನೆ ಹಾಗೂ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರೈತರು ಕೃಷಿ ಕ್ಷೇತ್ರದಲ್ಲಿ ವಿಷಮುಕ್ತ ಉತ್ಪಾದನೆ ಹಾಗೂ ಸಾವಯವ ಕೃಷಿಯಲ್ಲಿ ತೊಡಗಿದರೆ ಜೇನುಹುಳುಗಳ ಪರಾಗದಿಂದ ಇಳುವರಿಯಲ್ಲಿ ಹೆಚ್ಚಳವಾಗಿ, ರೈತರಿಗೆ ಹೆಚ್ಚುವರಿ ಆದಾಯ ತರುವಲ್ಲಿ ಸಹಕಾರಿಯಾಗಲಿ ಎಂದು ಹಿಟ್ನಳ್ಳಿ ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞ ಡಾ.ಪ್ರಸನ್ನ ಹೇಳಿದರು.
ಧಾರವಾಡದ ಹಿಟ್ನಳ್ಳಿ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರ ವಿಭಾಗದಿಂದ ರೈತರಿಗೆ ಆಯೋಜಿಸಿದ್ದ ಜೇನು ಕೃಷಿ ತರಬೇತಿ, ಮೌಲ್ಯವರ್ಧನೆ ಹಾಗೂ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಮಗ್ರ ಕೃಷಿಯಲ್ಲಿ ಜೀವವೈವಿಧ್ಯತೆ ಸಂರಕ್ಷಿಸುವಲ್ಲಿ ಹಾಗೂ ರೈತರ ಆದಾಯ ಹೆಚ್ಚಿಸುವಲ್ಲಿ ಜೇನು ಕೃಷಿ ಮಹತ್ವದ ಪಾತ್ರ ವಹಿಸುತ್ತದೆ. ಜೇನುಕೃಷಿಯಿಂದ ಜೇನು ಸಂಗ್ರಹ ಮಾತ್ರವಲ್ಲದೆ ರಾಜಶಾಹಿ ರಸ, ಪರಾಗ, ಜೇನುಹುಳುವಿಷ, ಮೇಣ, ಅಂಟು, ಗೂಡು ಪಾಲು ಮಾಡುವಿಕೆ, ಜೇನುಹುಳು ಹಾಗೂ ಪೆಟ್ಟಿಗೆ ಮಾರಾಟದ ಮೂಲಕ ಆರ್ಥಿಕ, ವಾಣಿಜ್ಯಿಕವಾಗಿ ಉದ್ಯಮದಲ್ಲಿ ತೊಡಗಲು ಸಹಕಾರಿ ಆಗಲಿದೆ ಎಂದರು.
ಆಲಮಟ್ಟಿ ಕೃಷ್ಣಾ ಭಾಗ್ಯ ಜಲ ನಿಗಮದ ಅರಣ್ಯ ವಿಭಾಗದ ಡಿ ಆರ್ ಎಫ್ಒ ಸತೀಶ ಗಲಗಲಿ ಮಾತನಾಡಿ, ನಿಗಮದ ಮೇಲಾಧಿಕಾರಿಗಳ ನಿರ್ದೇಶನದಂತೆ ಆಲಮಟ್ಟಿ ಜಲಾಶಯ ಪರಿಸರದಲ್ಲಿ ಸಸಿಗಳನ್ನು ನೆಟ್ಟು, ಮರಗಳಾಗಿ ರೂಪಿಸಿ ಅರಣ್ಯ ಸೃಷ್ಟಿಸಿದ್ದೇವೆ, ಸಸ್ಯ ಪಾಲನೆ ಘಟಕದಲ್ಲಿ ಸಸಿಗಳನ್ನು ಬೆಳೆಸಿ ರೈತರಿಗೆ ವಿತರಿಸಲಾಗುತ್ತದೆ. ಆಲಮಟ್ಟಿ ಉದ್ಯಾನ ವನಗಳಲ್ಲಿ ೩೫೦ಕ್ಕೂ ಹೆಚ್ಚು ಸಸ್ಯಸಂಕುಲ ಸಂರಕ್ಷಿಸಿ, ಜೇನುಹುಳು ಪಾಲನೆ ಮಾಡಲಾಗುತ್ತಿದೆ. ಇದಕ್ಕಾಗಿ ಜೇನುಹುಳು ಸಂರಕ್ಷಕರನ್ನು ನೇಮಿಸಿಕೊಂಡು ಜೇನುಹುಳು ಸಂರಕ್ಷಣೆಯಲ್ಲಿ ತೊಡಗುವ ಮೂಲಕ ಜೇನು ಕೃಷಿಗೆ ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎಸ್.ಎಂ.ವಸ್ತ್ರದ, ಜಿ.ಎಸ್.ಕಮತರ ಮಾತನಾಡಿದರು.
ಜೇನುಕೃಷಿಯಲ್ಲಿ ಮೌಲ್ಯವರ್ಧನೆ ಕುರಿತು ಗೃಹ ವಿಜ್ಞಾನ ವಿಭಾಗದ ವಿಷಯ ತಜ್ಞೆ ಡಾ.ಶ್ವೇತಾ ಮಣ್ಣಿಕೇರಿ ಮಾರ್ಗದರ್ಶನ ನೀಡಿದರು. ಆಲಮಟ್ಟಿ ಕೆಬಿಜೆಎನ್‌ಎಲ್ ಅರಣ್ಯ ವಿಭಾಗದ ಬೀಟ್ ಫಾರೆಸ್ಟರ್ ಪ್ರವೀಣ ಹಚ್ಚಾಳ, ಶಿವರಾಜ ಕಾಂಬಳೆ, ನಾಗಪ್ಪ, ವೇದಿಕೆ ಮೇಲಿದ್ದರು.
ಶಿಬಿರಾರ್ಥಿಗಳಾದ ಪ್ರಭಾಕರ ಹಿರೇಮಠ, ಮಲ್ಲಿಕಾರ್ಜುನ ಕೆಂಗನಾಳ ಸೇರಿದಂತೆ ಇತರರು ಶಿಬಿರದ ಅನುಭವ ಹಂಚಿಕೊಂಡರು.
ಡಾ.ವಿಜಯಲಕ್ಷ್ಮಿ ಮುಂದಿನಮನಿ ಸ್ವಾಗತಿಸಿ, ನಿರೂಪಿಸಿದರು.

ಹಿರೇಮಠಗೆ ಸನ್ಮಾನ

ಕಾರ್ಯಕ್ರಮದಲ್ಲಿ ಆಲಮಟ್ಟಿಯಲ್ಲಿ ಜೇನು ಕೃಷಿ ಪ್ರಾತ್ಯಕ್ಷಿಕೆ ನೀಡಿದ ಕೆಬಿಜೆಎನ್‌ಎಲ್ ಅರಣ್ಯ ವಿಭಾಗದ ಜೇನುಕೃಷಿ ತಜ್ಞ ಶಿವಯೋಗಿ ಹಿರೇಮಠ ಅವರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.