Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡವ ಉಳಿಸಿ ಬೆಳೆಸುವ ಕಾರ್ಯ ನಾವೆಲ್ಲ ಮಾಡಬೇಕಿದೆ
(ರಾಜ್ಯ ) ಜಿಲ್ಲೆ

ಕನ್ನಡವ ಉಳಿಸಿ ಬೆಳೆಸುವ ಕಾರ್ಯ ನಾವೆಲ್ಲ ಮಾಡಬೇಕಿದೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕನ್ನಡ ಸಾಹಿತ್ಯಕ್ಕೆ ೨ಸಾವಿರ ವರ್ಷಗಳ ಇತಿಹಾಸವಿದೆ. ಈ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯ ನಾವು ಮಾಡಬೇಕಾಗಿದೆ. ಕಾವೇರಿ ನದಿಯಿಂದ ಗೋದಾವರಿಯವರೆಗೆ ಕನ್ನಡದ ಕಂಪು ಮೊಳಗಿದೆ. ಕನ್ನಡದ ಮೊದಲ ಕಹಳೆಯನ್ನು ಮೊಳಗಿಸಿದ್ದು ಆಲೂರ ವೆಂಕಟರಮಣರು ಎಂದು ಸಿಂದಗಿ ಸರಕಾರಿ ಹೆಣ್ಣು ಮಕ್ಕಳ ಶಾಲೆಯ ಮುಖ್ಯಗುರು ಶರಣಬಸವ ಲಂಗೋಟಿ ಹೇಳಿದರು.
ಶುಕ್ರವಾರ ನಗರದ ಬಸವ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಹಮ್ಮಿಕೊಂಡ ೨೦೨೪ರ ಕರ್ನಾಟಕ ರಾಜ್ಯೋತ್ಸವದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ನಾವೆಲ್ಲರೂ ನವೆಂಬರ್ ಕನ್ನಡಿಗರಾಗದೇ ನಂ:೦೧ ಕನ್ನಡಿಗರಾಗೋಣ. ನಂ:೦೧ ಕನ್ನಡಿಗರಾದರೇ ಸಾವಿರ ಸಾವಿರ ವರ್ಷಗಳ ಸುದೀರ್ಘ ಇತಿಹಾಸವನ್ನು ನಾವೆಲ್ಲ ಕಾಣುತ್ತೇವೆ. ಕನ್ನಡ ನಾಡನ್ನು ಕನ್ನಡ ನಾಡು, ಶ್ರೀಗಂಧದ ನಾಡು, ಕರುನಾಡ ನಾಡು, ಸಾಧು-ಸಂತರು, ದಾಸರು, ಶಿವಶರಣರು ಹಾಗೂ ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ. ಕನ್ನಡ ಅನ್ನದ ಭಾಷೆ, ಜೀವದ ಭಾಷೆ, ಪವಿತ್ರ ಭಾಷೆ, ಹೃದಯ ಭಾಷೆಯಾಗಿ ನಾವು ಕಾಣಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ವಹಿಸಿದ್ದರು. ರೇಷ್ಮೆ ಇಲಾಖೆಯ ನಿರೀಕ್ಷಿಕ ವಿಜಯ ಯಂಕಂಚಿ ಮಾತನಾಡಿದರು.
ಸಿಂದಗಿ ನಗರದಲ್ಲಿ ಶುಕ್ರವಾರದಂದು ಕನ್ನಡ ರಾಜ್ಯೋತ್ಸವದ ಸಡಗರ ಮುಗಿಲು ಮುಟ್ಟಿತ್ತು. ತಾಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಕಾರ್ಯನಿರತ ಪತ್ರಕರ್ತರ ಸಂಘ, ಕನ್ನಡ ಮನಸುಗಳ ಸಹಯೋಗದೊಂದಿಗೆ ಎಂಟು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳ ಜೊತೆಗೆ ಅವರ ಅವರ ಕೃತಿಗಳ ಮೆರವಣಿಗೆ ಮಾಡಲಾಯಿತು.
ಈ ಮೊದಲು ತಾಲೂಕು ಆಡಳಿತ ಆವರಣದಲ್ಲಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ದ್ವಜಾರೋಹಣ ನಡೆಸಿದರು. ಶಾಸಕ ಅಶೋಕ ಮನಗೂಳಿ ಕನ್ನಡ ಧ್ವಜಾರೋಹಣ ನಡೆಸಿದರು.
ಕನ್ನಡ ವಿಷಯದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ಜೊತೆಗ ಕನ್ನಡ ವಿಷಯ ಬೋಧಿಸಿದ ಶಿಕ್ಷಕರಿಗೆ ಕಲಾವಿದರಿಗೆ ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯ ಮೇಲೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮು ಅಗ್ನಿ, ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭವಾನಿ ಪಾಟೀಲ, ರೇಷ್ಮೆ ಇಲಾಖೆಯ ನಿರೀಕ್ಷಕ ವಿಜಯ ಯಂಕಂಚಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ, ಪುರಸಭೆ ಮುಖ್ಯಾಧಿಕಾರಿ ಎಸ್.ರಾಜಶೇಖರ, ಅಶೋಕ ತೆಲ್ಲೂರ, ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ ಪಿಎಸ್‌ಐ ಆರೀಫ್ ಮುಷಾಪುರಿ ಇದ್ದರು.
ಇದೇ ಸಂದರ್ಭದಲ್ಲಿ ಪುರಸಭೆ ಸದಸ್ಯ ಸಂದೀಪ ಚೌರ, ಹಾಸಿಂ ಆಳಂದ, ಬಸವರಾಜ ಯರನಾಳ, ಕಾಂದಾಯ ನಿರೀಕ್ಷಕ ಆಯ್.ಎ.ಮಕಾಂದಾರ, ಚಂದ್ರಶೇಖರ ದೇವರೆಡ್ಡಿ, ಮಲಕಣ್ಣ ಗೊಟಗುಣಕಿ, ಶ್ರೀಶೈಲ ಯಳಮೇಲಿ, ಸಂತೋಷ ಮಣಗೀರಿ, ಮಲ್ಲನಗೌಡ ಪಾಟೀಲ ಇಬ್ರಾಹಿಂಪುರ, ಅಂಬಿಕಾ ಪಾಟೀಲ, ಅಶೋಕ ಅಲ್ಲಾಪೂರ, ಸದ್ದಾಂ ಆಲಗೂರ, ಸುನಂದಾ ಯಂಪುರೆ, ನಿಖಿಲಅಹ್ಮದ್ ಖಾನಾಪುರ, ಎಂ.ಎ.ಗೊಟಗುಣಕಿ, ಕಸಾಪ ನಿಕಟಪೂರ್ವ ಅಧ್ಯಕ್ಷ ರಾಜಶೇಖರ ಕೂಚಬಾಳ, ಬಸವರಾಜ ಐರೋಡಗಿ, ಎಂ.ಎA.ಹAಗರಗಿ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಚಂದ್ರಶೇಖರ ನಾಗರಬೆಟ್ಟ, ಎಸ್.ಎನ್.ಕೋರವಾರ, ಶ್ರೀಶೈಲ ಯಳಮೇಲಿ, ವೈ.ಸಿ.ಮಯೂರ ಸೇರಿದಂತೆ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ರಾಗರಂಜಿನಿ ಸಂಗೀತ ಸಂಸ್ಥೆಯ ಮುಖ್ಯಸ್ಥ ಡಾ.ಪ್ರಕಾಶ ಮೂಡಲಗಿ ಪ್ರಾರ್ಥಿಸಿದರು. ದೈಹಿಕ ನಿರ್ದೇಶಕ ರವಿ ಗೋಲಾ ನಿರೂಪಿಸಿದರು. ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ರಾಮು ಅಗ್ನಿ ಸ್ವಾಗತಿಸಿದರು.

ಮೆರವಣಿಗೆ

ತಾಲೂಕು ಆಡಳಿತದಿಂದ ಆರಂಭವಾದ ಮೆರವಣಿಗೆ ಕನ್ನಡಾಂಬೆಯ ವೃತ್ತ, ಬಸವೇಶ್ವರ ವೃತ್ತ, ಸ್ವಾಮಿ ವಿವೇಕಾನಂದ ವೃತ್ತ, ತೋಂಟದ ಸಿದ್ದಲಿಂಗ ಶ್ರೀಗಳ ವೃತ್ತದ ಮಾರ್ಗವಾಗಿ, ಟಿಪ್ಪು ಸುಲ್ತಾನ್ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಹಾಗೂ ಅಂಬಿಗೇರ ಚೌಡಯ್ಯನವರ ವೃತ್ತದ ಮಾರ್ಗವಾಗಿ ಬಸವ ಮಂಟಪಕ್ಕೆ ರೂಪಕಗಳ ಜೊತೆಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.