ಕನ್ನಡ ನಾಡು-ನುಡಿ, ಭಾಷೆ-ಸಾಹಿತ್ಯ ವಿಶ್ವಕ್ಕೆ ಮಾದರಿ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕನ್ನಡ ನಾಡು ಸಂಪದ್ಭರಿತವಾದ ನಾಡು. ಇಲ್ಲಿನ ನೆಲ, ಜಲ, ನಾಡು-ನುಡಿ, ಭಾಷೆ, ಸಾಹಿತ್ಯ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಆದ್ದರಿಂದ ನಾಡಿನ ಸಂಪತ್ತು ಮತ್ತು ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುವದು ನಮ್ಮೆಲ್ಲರ ಜವಾಬ್ದಾರಿ ಎಂದು ಪ್ರಾಚಾರ್ಯ ಆರ್.ಬಿ.ಗೋಡಕರ ಹೇಳಿದರು.
ಇದೇ ಸಂದರ್ಭದಲ್ಲಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಸ್.ಕಡಣಿ ಹಿರಿಯ ಉಪನ್ಯಾಸಕ ಪಿ.ಎಂ. ಮಡಿವಾಳರ, ಉಪನ್ಯಾಸಕ ಮಾಂತೇಶ ದಂಡವತ, ಸಿ.ಜೆ.ರಾಠೋಡ, ಅಶ್ವಿನಿ ಚನಾಳ, ವಸುಧಾ ಭಟ್, ಅಮೀರ ಮೋಪಗಾರ, ಅಶೋಕ ತಳವಾರ ಹಾಗೂ ಮಲ್ಲು ಹೊಸಮನಿ ಉಪಸ್ಥಿತರಿದ್ದರು.
ಪ್ರೇರಣಾ ಶಾಲೆ ಸಿಂದಗಿ
ಪಟ್ಟಣದ ಹೊರವಲಯದ ಪ್ರೇರಣಾ ಶಾಲೆಯಲ್ಲಿ ಕನ್ನಡ ರಾಜ್ಯೊತ್ಸವವನ್ನು ಆಚರಣೆ ಮಾಡಲಾಯಿತು.
ಈ ವೇಳೆ ಶ್ರೀ ಸಮರ್ಥ ವಿದ್ಯಾ ವಿಕಾಸ ಸಂಸ್ಥೆಯ ಅಧ್ಯಕ್ಷ ಆರ್.ಡಿ ಕುಲಕರ್ಣಿ, ನಿರ್ದೇಶಕ ಪಿ.ಡಿ. ಕುಲಕರ್ಣಿ, ಮುಖ್ಯ ಗುರಮಾತೆ ಎಸ್.ಐ ಅಸ್ಕಿ ಸೇರಿದಂತೆ ಸಂಸ್ಥೆಯ ನಿರ್ದೇಶಕ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.
ಶ್ರೀ ಪದ್ಮರಾಜ ಮಹಿಳಾ ಕಾಲೇಜು
ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಇದೇ ವೇಳೆ ಪದವಿ ಪ್ರಾಚಾರ್ಯ ಎಮ್.ಎಸ್.ಹೈಯ್ಯಾಳಕರ, ಎಸ್.ಎಂ.ಪೂಜಾರಿ, ಉಪನ್ಯಾಸಕರಾದ ಜಿ.ಎ.ನಂದಿಮಠ, ಜಿ.ಎಸ್.ಕುಲಕರ್ಣಿ, ಎಸ್.ಸಿ.ದುದ್ದಗಿ, ಹೇಮಾ ಕಾಸರ, ಸತೀಶ ಕಕ್ಕಸಗೇರಿ, ಶಂಕರ ಕುಂಬಾರ, ವಿಜಯಲಕ್ಷ್ಮಿ ಭಜಂತ್ರಿ ಸೇರಿದಂತೆ ಅನೇಕರಿದ್ದರು.
ತಾಲೂಕು ಸಾರ್ವಜನಿಕ ಆಸ್ಪತ್ರೆ
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಬಣೆಯಿಂದ ಆಚರಣೆ ಮಾಡಲಾಯಿತು.
ಈ ವೇಳೆ ಡಾ.ಮಹಾಂತೇಶ ಹಿರೇಮಠ, ರಾಜಶೇಖರ ನರಗೋದಿ, ಎಂ.ಪಿ ಸಾಗರ, ಡಾ. ಮೋಹನ ಬಡಿಗೇರ, ರಾಜಶ್ರೀ ದೊಡ್ಡಮನಿ, ಗೀತಾ ಹಡಪದ, ಹಾಗೂ ಡಾ.ರಮೇಶ ರಾಠೋಡ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
ಎಚ್.ಜಿ.ಪಪೂ ಕಾಲೇಜು
ನಗರದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪಪೂ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ವೇಳೆ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ, ಉಪನ್ಯಾಸಕರಾದ ಎಸ್.ಎ.ಪಾಟೀಲ್, ಆರ್.ಬಿ ಹೊಸಮನಿ, ಆರ್.ಸಿ.ಕಕ್ಕಳಮೇಲಿ, ಬಿ.ಎಸ್.ಬಿರಾದಾರ, ಮುಕ್ತಾಯಕ್ಕ ಕತ್ತಿ, ಸತೀಶ ಬಸರಕೋಡ, ಎ.ಬಿ ಪಾಟೀಲ್, ಸಿದ್ದಲಿಂಗ ಕಿಣಗಿ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಆರ್.ಡಿ ಪಾಟೀಲ ಮಹಾವಿದ್ಯಾಲಯ
ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ೬೯ನೆಯ ಕನ್ನಡ ರಾಜ್ಯೋತ್ಸವದ ಆಚರಣೆ ಮಾಡಲಾಯಿತು.
ಈ ವೇಳೆ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪನ್ಯಾಸಕರಾದ ಪಿ.ವ್ಹಿ.ಮಹಲಿನಮಠ, ಬಿ.ಬಿ.ಜಮಾದಾರ, ಎನ್.ಬಿ.ಪೂಜಾರಿ, ವ್ಹಿ.ಪಿ.ನಂದಿಕೋಲ, ಶಿವಶರಣ ಬೂದಿಹಾಳ, ಶಿವರಾಜ ಕುಂದಗೋಳ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ಡಾ.ಶರಣು ಜೋಗೂರ, ಶರಣು ಹೂಗಾರ, ಗವಿಸಿದ್ದಪ್ಪ ಆನೆಗುಂದಿ, ಎಸ್.ಜಿ.ಮಾರ್ಸನಳ್ಳಿ, ಪ್ರಸನ್ನಕುಮಾರ ಜೋಗೂರ ಸೇರಿದಂತೆ ಇನ್ನಿತರರು ಇದ್ದರು.
ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರ
ಪಟ್ಟಣದ ಬಂದಾಳ ರಸ್ತೆಯಲ್ಲಿರುವ ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರದಲ್ಲಿ ಕನ್ನಡ ರಾಜ್ಯೊತ್ಸವವನ್ನು ಆಚರಣೆ ಮಾಡಲಾಯಿತು.
ಈ ವೇಳೆ ರಶ್ಮಿ ನೂಲಾನವರ, ವಿದ್ಯಾ ದೇಸಾಯಿ ಇದ್ದರು.
ವಿದ್ಯಾಚೇತನ ಶಾಲೆ:
ಪಟ್ಟಣದ ಹೂಗಾರ ಲೇಔಟ್‌ನಲ್ಲಿರುವ ವಿದ್ಯಾಚೇತನ ಶಾಲೆಯಲ್ಲಿ ಕನ್ನಡ ರಾಜ್ಯೊತ್ಸವವನ್ನು ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ತೆಯ ಅಧ್ಯಕ್ಷೆ ಕುಸುಮಾ ಯಾಳಗಿ, ಸಕ್ಕುಬಾಯಿ ಡಾಂಗಿ, ವಿಕಾಸ ಚೌರ, ಅಕ್ಷಯ ದೀಕ್ಷಾ, ಸುಮಾ ಬಿರಾದಾರ, ರೂಪಾ, ಪ್ರಗತಿ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.
ಕಾವ್ಯಾ ಶಿಕ್ಷಣ ಸಂಸ್ಥೆ
ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಶ್ರೀ ಸಂಗಮೇಶ್ವರ ಪಾರ್ಮಸಿ ಹಾಗೂ ಕಾವ್ಯಾ ಶಾಲೆಯಲ್ಲಿ ಕನ್ನಡ ರಾಜೋತ್ಸವ ಆಚರಣೆ ಮಾಡಲಾಯಿತು.
ಕಾನಿಪ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಸಂದೀಪ, ಎಂ.ಎಂ. ಹಂಗರಗಿ, ಸಂದೀಪ ಸೇರಿದಂತೆ ಶಾಲೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

