Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಳೆದೊಂದು ವರ್ಷದಲ್ಲಿ ಕೈಗಾರಿಕೋದ್ಯಮದಲ್ಲಿ ೨೪೬೪೫ ಉದ್ಯೋಗಾವಕಾಶ
(ರಾಜ್ಯ ) ಜಿಲ್ಲೆ

ಕಳೆದೊಂದು ವರ್ಷದಲ್ಲಿ ಕೈಗಾರಿಕೋದ್ಯಮದಲ್ಲಿ ೨೪೬೪೫ ಉದ್ಯೋಗಾವಕಾಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಸ್ಪಷ್ಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ೯,೩೦೦ ಲಕ್ಷ ರೂಪಾಯಿಗಳ ಬಂಡವಾಳ ಹೂಡಿಕೆಯೊಂದಿಗೆ ಸ್ಥಾಪಿತಗೊಂಡಿರುವ ೪,೫೩೭ ಕೈಗಾರಿಕೋದ್ಯಮಗಳಲ್ಲಿ ೨೪,೬೪೫ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಡಾ.ಎಂ.ಬಿ.ಪಾಟೀಲ ಹೇಳಿದರು.
ಜಿಲ್ಲಾಡಳಿತದ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕೆ.ಐ.ಎ.ಡಿ.ಬಿ ಅಲಿಯಾಬಾದ ಹಂತ-೩ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆಗಾಗಿ ೧೮೭೦ ಎಕರೆ ಜಮೀನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಕೈಗಾರಿಕೆ ಅಭಿವೃದ್ಧಿಗಾಗಿ ಒಟ್ಟು ೩೨೩೯ ಎಕರೆ ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ಕ್ರಮವಹಿಸಲಾಗಿದೆ. ಈಗಾಗಲೆ ೨೪೫ ಕೋಟಿ ರೂಪಾಯಿಗಳ ಬಂಡವಾಳ ಹೂಡಿ ಕೊಲ್ಹಾರ ತಾಲೂಕಿನಲ್ಲಿ ೬೧೪ ಎಕರೆ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಲಾಗಿದ್ದು, ಹೊಸ ಕೈಗಾರಿಕೆಗಳ ಸ್ಥಾಪನೆಗಾಗಿ ೪೧೧ ನಿವೇಶನಗಳು ಲಭ್ಯವಿವೆ ಎಂದು ಅವರು ಹೇಳಿದರು.
ಬಬಲೇಶ್ವರ ತಾಲೂಕಿನ ಐತಿಹಾಸಿಕ ಮಮದಾಪುರ ಕೆರೆಯನ್ನು ಕೈಗಾರಿಕೆ ಇಲಾಖೆಯ ಸಿ.ಎಸ್.ಆರ್ ೧ ಕೋಟಿ ರೂಪಾಯಿ ಅನುದಾನದಲ್ಲಿ ಸೌಂದರೀಕರಣ ಮಾಡಲಾಗುತ್ತಿದೆ. ಮತ್ತು ಆದಿಲ್ ಶಾಹಿಗಳ ಕಾಲದ ಬೇಸಿಗೆ ಅರಮನೆ ಪಕ್ಕದಲ್ಲಿರುವ ಕುಮಟಗಿ ಕೆರೆ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮತ್ತು ಪಕ್ಕದ ೧೭ ಎಕರೆ ಪ್ರದೇಶದಲ್ಲಿ ಥೀಮ್ ಪಾರ್ಕ್ ಕೈಗಾರಿಕೆ ಇಲಾಖೆಯ ಸಿ.ಎಸ್.ಆರ್.,ರೂಪಾಯಿ ೨ ಕೋಟಿ ಅನುದಾನದಲ್ಲಿ ಸೌಂದರೀಕರಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ವತಿಯಿಂದ ಸಿಎಸ್‌ಆರ್ ಅನುದಾನದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ತಾಲೂಕುಗಳನ್ನು ವಿಜಯಪುರ ಜಿಲ್ಲೆಯಲ್ಲಿ ಮಾಡೇಲ್ ತಾಲೂಕುಗಳು ಎಂದು ಆಯ್ಕೆ ಮಾಡಿಕೊಂಡು ಇಲ್ಲಿನ ಆಯ್ದ ೧೦೦೦ ಸರಕಾರಿ ಶಾಲೆಗಳ ಕಟ್ಟಡಗಳ ದುರಸ್ಥಿ, ನಿರ್ಮಾಣ ಹಾಗೂ ಅತ್ಯಾಧುನಿಕ ಸ್ಮಾರ್ಟ್ ಕ್ಲಾಸ್ ಅಳವಡಿಕೆ ಮಾಡುವ ಕಾರ್ಯವು ಭರದಿಂದ ಸಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಡಿಜಿಟಲ್ ಸೌಕರ್ಯಗಳನ್ನು ಪೂರೈಸಿ, ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮೇಯರ್ ಮಹೇಜಬಿನ್ ಹೊರ್ತಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಪ್, ಉಪ ಮೇಯರ್ ದಿನೇಶ ಹಳ್ಳಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಕನ್ನಡಪರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಹಲ್ಮಿಡಿ ಶಾಸನ ಪ್ರತಿಕೃತಿ ಅನಾವರಣ

ವಿಜಯಪುರ: ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕನ್ನಡದ ಮೊಟ್ಟ ಮೊದಲ ಶಾಸನ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಿದರು.
ಕರ್ನಾಟಕ ಸಂಭ್ರಮ-೫೦ “ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ” ಅಭಿಯಾನದಡಿ ನವ್ಹೆಂಬರ್-೨೦೨೩ ರಿಂದ ಇಲ್ಲಿಯವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಕನ್ನಡದ ಮೊದಲ ಶಾಸನವೆಂದು ಪರಿಗಣಿಸಲ್ಪಟ್ಟಿರುವ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಲಾಗಿದ್ದು, ಅದರಂತೆ ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕರ ವೀಕ್ಷಣೆಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅಳವಡಿಸಲಾಗಿದೆ ಎಂದು ಅವರು ಹೇಳಿದರು.
ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು, ಹಲ್ಮಿಡಿ ಶಾಸನದ ಸಾಲುಗಳನ್ನು ವಿವರಿಸಿದರು.
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.