ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಬರುವ ಜನರಿಗೆ ಉತ್ತಮ ಚಿಕಿತ್ಸೆ ಹಾಗೂ ಮೂಲಭುತ ಸೌಕರ್ಯಗಳು ದೊರೆಯಬೇಕು ಎಂಬ ದಿಸೆಯಲ್ಲಿ ಉನ್ನತೀಕರಣ ಕಾಮಗಾರಿ ಹಾಕಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರ ಘಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜನೀಯರಿಂಗ್ ಇಲಾಖೆ ಹಮ್ಮಿಕೊಂಡ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮೂಲಭೂತ ಸೌಕರ್ಯಗಳ ೧ಕೋಟಿ ೨೦ಲಕ್ಷ ರೂ. ಅನುದಾನದ ಉನ್ನತೀಕರಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಆಸ್ಪತ್ರೆಯ ಹಲವಾರು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಆಸ್ಪತ್ರೆಯ ಅಧಿಕಾರಿಗಳ ಜೊತೆಗೆ ಸಭೆ ಮಾಡಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ೧ಕೋಟಿ ೨೦ಲಕ್ಷ ರೂ. ವೆಚ್ಚದಲ್ಲಿ ನಾಲ್ಕೈದು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಸಿಂದಗಿ ಮತಕ್ಷೇತ್ರದಲ್ಲಿ ಬರುವ ಎಲ್ಲ ಆಸ್ಪತ್ರೆಗಳನ್ನು ಸುಸಜ್ಜಿತವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಸ್ಥಳೀಯ ಶಾಸಕರ ಅನುದಾನದಲ್ಲಿ ಆಲಮೇಲ, ಚಾಂದಕವಟೆ ಹಾಗೂ ಮಲಘಾಣ ಆಸ್ಪತ್ರೆಗಳಿಗೆ ಉನ್ನತೀಕರಣ ಮತ್ತು ಮೂಲಭೂತ ಸೌಕರ್ಯಕ್ಕಾಗಿ ವಿಶೇಷ ಅನುದಾನವನ್ನು ಮಂಜೂರು ಮಾಡುವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಗಮನ ಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಈ ವೇಳೆ ದಂತವೈದ್ಯ ಡಾ.ರಮೇಶ ರಾಠೋಡ ಮಾತನಾಡಿ, ನನ್ನ ೨೫ ವರ್ಷದ ಸೇವಾ ಅವಧಿಯಲ್ಲಿ ಆಸ್ಪತ್ರೆಗೆ ಇಷ್ಟು ದೊಡ್ಡ ಮಟ್ಟದ ಅನುದಾನ ಬಂದದ್ದು ಇದೆ ಮೊದಲು. ಇಷ್ಟು ದೊಡ್ಡ ಮೊತ್ತದ ಅನುದಾನವನ್ನು ತೆಗೆದುಕೊಂಡು ಬಂದು ಆಸ್ಪತ್ರೆಗಳನ್ನು ಉನ್ನತೀಕರಣ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುತ್ತಿರುವ ಶಾಸಕರಿಗೆ ನಮ್ಮ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ಪರಿವಾಗಿ ಅಭಿನದಂನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎ.ಎ.ಮಾಗಿ, ಡಾ.ಮಹಾಂತೇಶ ಹಿರೇಮಠ,

