Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ :ಸಂಜೀವ ಪಾಟೀಲ
(ರಾಜ್ಯ ) ಜಿಲ್ಲೆ

ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ :ಸಂಜೀವ ಪಾಟೀಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನ್ನಡ ಭಾಷೆಗೆ ಶ್ರೀಮಂತ ಇತಿಹಾಸವಿದ್ದು, ತನ್ನದೇ ಶ್ರೇಷ್ಠತೆಯ ಆಸ್ಮಿತೆಯನ್ನು ಹೊಂದಿದೆ. ಅನ್ಯ ಭಾಷೆಗಳ ಹಾವಳಿಗಳ ಮಧ್ಯೆಯೂ ಕನ್ನಡ ಭಾಷೆ ತನ್ನ ಗತ ವೈಭವದಿಂದ ಅಸ್ಮಿತೆ ಉಳಿಸಿಕೊಂಡು ಮಿನುಗಿದೆ. ಕನ್ನಡ ಸಂಸ್ಕೃತಿಯ ಬೆಡಗು, ಭಿನ್ನಾಣ ವೈವಿಧ್ಯಮಯವಾಗಿದೆ ಎಂದು ನಗರದ ಉದ್ಯಮಿ ಸಂಜೀವ ಪಾಟೀಲ (ಕನ್ನೂರ) ಹೇಳಿದರು.
ನಗರದ ಆಶ್ರಮ ರಸ್ತೆಯಲ್ಲಿರುವ ರಾಮಕೃಷ್ಣ ಬಡಾವಣೆಯಲ್ಲಿ ಗಜಾನನ ಮಿತ್ರ ಮಂಡಳಿ ಶುಕ್ರವಾರ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಡಾವಣೆಯ ಹಿರಿಯರಾದ ಶ್ರೀಶೈಲ ಮಹಾಜನಶೆಟ್ಟಿ ಅವರು ನಾಡ ಧ್ವಜಾರೋಹಣ ನೆರವೇರಿಸಿದರು.
ಶಿಕ್ಷಕ ಎಸ್.ಜಿ.ಹೆಬ್ಬಾಳ, ಯೋಗ ಶಿಕ್ಷಕಿ ಸಾವಿತ್ರಿ ಮಠ ಮತ್ತು ಬಡಾವಣೆಯ ಮಾಲಿಕ ಸಿದ್ರಾಮ ಅಂಜಿಖಾನೆ ಮಾತನಾಡಿ, ಕರ್ನಾಟಕ ಏಕೀಕರಣ ದಿನ ನಮಗೆಲ್ಲ ವಿಶೇಷ ದಿನವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಹಲವು ಪ್ರಾಂತ್ಯಗಳಲ್ಲಿ ಚದುರಿ ಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ 1956 ರ ನವೆಂಬರ್ 1 ರಂದು ಏಕೀಕರಣ ಮಾಡಲಾಯಿತು. ಅಂದಿನಿಂದ ಪ್ರತಿ ವರ್ಷ ನವೆಂಬರ್ 1 ರಂದು ನಾವು ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡ ಬಂದಿದ್ದೇವೆ. ರಾಜ್ಯೋತ್ಸವ ಸಂಭ್ರಮದ ಹಿಂದೆ ನಾಡಿನ ಏಕೀಕರಣಕ್ಕಾಗಿ ಹಗಲಿರುಳು ಶ್ರಮಿಸಿದ ಅನೇಕ ಮಹನೀಯರ ಹೋರಾಟದ ಬಲವಿದೆ. ಕನ್ವಡ ಮನಗಳು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಯನ್ನು ಮೆರೆದಿದ್ದಾರೆ.ಆ ಮಹಾನ ಚೇತನಗಳನ್ನೆಲ್ಲಾ ಇಂದು ಕೃತಜ್ಞತೆಯಿಂದ ಸ್ಮರಿಸಬೇಕು. ಏಕೆಂದರೆ ಆ ಮಹಾನುಭಾವರು ಕನ್ನಡ ಭಾಷಿಕರ ರಾಜ್ಯವನ್ನಾಗಿ ಕನಾ೯ಟಕ ರೂಪುಗೊಳ್ಳಲು ಶ್ರಮಿಸಿದ್ದಾರೆ ಎಂದರು.
ಈರಣ್ಣ ಧಾರವಾಡಕರ, ವಿಶ್ವನಾಥ್ ಕೋಟಿನ, ಮಂಜುನಾಥ ಹೂಗಾರ, ಜಂಗಮಶೆಟ್ಟಿ, ಕೆಇಬಿ ಅಬಿಯಂತರ ಗೊಳಸಂಗಿ, ರವಿ ಉಮರ್ಜಿ, ರಾಜು ಹುನ್ನೂರ, R. R. ರಜಪೂತ, M.ಕನಕರೆಡ್ಡಿ, J. K.ರಜಪೂತ, ಕಿಶೋರ್ ಮೇತ್ರೆ, ಸುಚಿತಾ ಮೇತ್ರೆ. ಸ್ವಾತಿ ಅಂಜಿಖಾನೆ, ಶೈಲಜಾ ಪಾಟೀಲ, ಗೀತಾ ಕೋಟಿನ, ರಾಜೇಶ್ವರಿ ಹೂಗಾರ, ರೂಪಾ ಹೊಸಮನಿ, ಸುನೀತಾ ರಜಪೂತ ಸೇರಿದಂತೆ ಅನೇಕರಿದ್ದರು ‌

“ಕನ್ನಡ ನಾಡಿನಲ್ಲಿ ಕನ್ನಡವೇ ಪ್ರಥಮ, ಪ್ರಧಾನ, ಸಾರ್ವಭೌಮ ಭಾಷೆ. ಶಿವಶರಣರು, ದಾಸರು, ಕವಿ-ಸಾಹಿತಿಗಳಿಂದ ಕಂಗೊಳಿಸುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ. ಕನ್ನಡ ಅನ್ನದ ಭಾಷೆ, ಜೀವದ ಭಾಷೆ, ಪವಿತ್ರ ಭಾಷೆ, ಹೃದಯದ ಭಾಷೆಯಾಗಿ ನಾವು ಕಾಣಬೇಕಿದೆ. ನಾವೆಲ್ಲ ಕೇವಲ ನವೆಂಬರ್ ಕನ್ನಡಿಗರಾಗದೆ ನಂ.೧ ಕನ್ನಡಿಗರಾಗೋಣ. ನಂ.೧ ಕನ್ನಡಿಗರಾದರೆ ಸಾವಿರ ಸಾವಿರ ವರ್ಷಗಳ ಸುದೀರ್ಘ ಇತಿಹಾಸವನ್ನು ನಾವು ಕಾಣಬಹುದಾಗಿದೆ.”

– ಸಂಜೀವ ಪಾಟೀಲ (ಕನ್ನೂರ)
ಉದ್ಯಮಿ, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.