Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗಠಾಣದಲ್ಲಿ ಜಾತ್ರೆ: ಭಂಡಾರದಲ್ಲಿ ಮಿಂದೆದ್ದ ಭಕ್ತಗಣ
(ರಾಜ್ಯ ) ಜಿಲ್ಲೆ

ನಾಗಠಾಣದಲ್ಲಿ ಜಾತ್ರೆ: ಭಂಡಾರದಲ್ಲಿ ಮಿಂದೆದ್ದ ಭಕ್ತಗಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಉತ್ತರ ಕರ್ನಾಟಕದ ಜಾತ್ರೆಗಳು ವಿಶೇಷತೆಯಿಂದ ಕೂಡಿರುತ್ತವೆ. ಅದರಲ್ಲಿ ದೀಪಾವಳಿ ಹಬ್ಬದ ನಿಮಿತ್ತ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಭೀರದೇವರ ಹಾಗೂ ಶ್ರೀ ಪರಮಾನಂದ ದೇವರ ಜಾತ್ರೆಗೆ ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸಿ ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು. ಇದು ಭಂಡಾರದೊಡೆಯನ ಜಾತ್ರೆ ಎಂದೇ ಪ್ರಸಿದ್ಧಿಯಾಗಿದೆ.
ದೀಪಾವಳಿ ಅಮವಾಸ್ಯೆ ದಿನ ಭೀರದೇವರ ಹಾಗೂ ಪಾಡ್ಯ ದಿನ ಪರಮಾನಂದ ದೇವರ ಶೃಂಗಾರ ಚೌಕಿಯೊಂದಿಗೆ ಸಾರವಾಡ ಗೊಂಬೆ ಕುಣಿತ,ಕರಡಿ ಮಜಲು, ಡೊಳ್ಳು ವಾದ್ಯದೊಂದಿಗೆ ಭಕ್ತರ ಮನೆಗೆ ದರ್ಶನ ಕೊಡುತ್ತಾ, ಗಂಗೆ ಸೀತಾಳದಲ್ಲಿ ಪೂಜೆ ಮುಗಿಸಿ, ಬಜಾರಕ್ಕೆ ಆಗಮನವಾಗಿ, ಅಲ್ಲಿ ಭಕ್ತರಿಗೆ ದರ್ಶನ ಕೊಟ್ಟು ನಂತರ ಗುಡಿಗೆ ಬರುವ ಸಂದರ್ಭದಲ್ಲಿ ಭಕ್ತರು ಚೌಕಿ ಮತ್ತು ಪಲ್ಲಕ್ಕಿಗಳ ಮೇಲೆ ರಾಶಿ ರಾಶಿಗಟ್ಟಲೆ ಭಂಡಾರ, ಖಾರಿಕ, ಕುರಿ ಉಣ್ಣೆಯನ್ನು ಹಾರಿಸುವುದು ವಾಡಿಕೆ ಎನ್ನುತ್ತಾರೆ ಜಾತ್ರಾ ಕಮೀಟಿಯ ಅಧ್ಯಕ್ಷ ಪ್ರಭುಲಿಂಗ ಹಂಡಿ.
ಈ ಜಾತ್ರೆಯಲ್ಲಿ ಡೊಳ್ಳಿನ ಹಾಡಿಕೆ, ಭಾರ ಎತ್ತುವದು, ಜಂಗಿ ಕುಸ್ತಿ, ಕಬಡ್ಡಿ, ಕ್ರಿಕೆಟ್, ಗುಡ್ಡಗಾಡು ಓಟ, ಸಾಮಾಜಿಕ ನಾಟಕದಂತಹ ಕಾರ್ಯಕ್ರಮಗಳು ಭಕ್ತರ ಮನ ಗೆದ್ದಿವೆ. ಭಕ್ತರು ದೇವರ ಬಳಿ ಬೇಡಿಕೊಂಡ ಹರಕೆಗಳನ್ನು ತೀರಿಸುವ ದೃಶ್ಯ ಸಾಮಾನ್ಯವಾಗಿತ್ತು. ಜಾತ್ರಾ ಕಮೀಟಿ ಹಾಗೂ ಪರಮಾನಂದ ದಾಸೋಹ ಸಮಿತಿ ವತಿಯಿಂದ ನಿರಂತರ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಯಾವುದೇ ಜಾತಿ, ಮತ, ಪಂಥ ಭೇದವಿಲ್ಲದೇ ಎಲ್ಲರೂ ಈ ಜಾತ್ರೆಯಲ್ಲಿ ಭಾಗಿಯಾಗುವುದು ವಿಶೇಷ. ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬ ಭಕ್ತರು ಭಂಡಾರವನ್ನು ದೇವಾಲಯ ಹಾಗೂ ದೇವರ ಮೇಲೆ ಎಸೆಯುವುದು ಇಲ್ಲಿನ ಸಂಪ್ರದಾಯ. ಭಂಡಾರದಲ್ಲಿ ಮಿಂದೆದ್ದ ಭಕ್ತರು ತಮ್ಮ ಜೀವನ ಪಾವನವಾಯಿತು ಎಂಬುದು ಭಕ್ತರ ನಂಬಿಕೆ.
ಬೀರಪ್ಪ ಮತ್ತು ಪರಮಾನಂದ ದೇವರು ಭಕ್ತರ ಪಾಲಿಗೆ ಕಲ್ಪವೃಕ್ಷ.ಜಾತ್ರೆಯಲ್ಲಿ ಕಮೀಟಿಯ ಸರ್ವ ಪದಾಧಿಕಾರಿಗಳು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.