ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಇಲ್ಲಿಯ ಜನಪದ ಗಾಯಕ ಬಸವರಾಜ ಸಂಗಪ್ಪ ಹಾರಿವಾಳ ಅವರಿಗೆ ಜನಪದ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಗುರುತಿಸಿ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಜರುಗಿದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ, ಗೃಹ ಮಂತ್ರಿ ಪರಮೇಶ್ವರ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ, ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ವಿವಿಧ ಗಣ್ಯರು, ಅಧಿಕಾರಿಗಳು ಉಪಸ್ಥಿತಿರಿದ್ದರು.

