Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ

ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ

ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಭಿವೃದ್ಧಿ ಯೋಜನೆಗಳನ್ನು ಬೇಗ ಪೂರ್ಣಗೊಳಿಸಿ :ಸಚಿವ ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಅಭಿವೃದ್ಧಿ ಯೋಜನೆಗಳನ್ನು ಬೇಗ ಪೂರ್ಣಗೊಳಿಸಿ :ಸಚಿವ ಎಂ.ಬಿ.ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭೂತ್ನಾಳ ಕೆರೆ ಮತ್ತು ಬೇಗಂ ತಾಲಾಬ್ ಬಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕೈಗೊಳ್ಳಲಾಗಿರುವ ಅಭಿವೃದ್ಧಿ ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಒದಗಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶನಿವಾರ ಬೆಳಿಗ್ಗೆ ಕರಾಡದೊಡ್ಡಿ ಮಾನವ ನಿರ್ಮಿತ ಅರಣ್ಯ ಪ್ರದೇಶ, ಭೂತನಾಳ ಕೆರೆ, ಐತಿಹಾಸಿಕ ಬೇಗಂ ಕೆರೆಗಳಿಗೆ ಅವರು ಭೇಟಿ ನೀಡಿದರು.
ಮೊದಲಿಗೆ ಭೂತ್ನಾಳ ಕೆರೆಯ ಹಿಂಭಾಗದಲ್ಲಿರುವ ಕರಾಡದೊಡ್ಡಿ ಮಾನವ ನಿರ್ಮಿತ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ ಅವರು ಅಲ್ಲಿ ನಿರ್ಮಿಸಲಾಗುತ್ತಿರುವ ಲಾನ್, ಉದ್ಯಾನ ಮತ್ತೀತರ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಅಲ್ಲದೇ, ಕೆರೆಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಗ್ರೀಲ್ ಮತ್ತು ತಂತಿಬೇಲಿ ಅಳವಡಿಸುವ ಮೂಲಕ ಸುರಕ್ಷತೆಗೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮೊಬೈಲ್ ಮೂಲಕ ದೂರವಾಣಿ ಕರೆ ಮಾಡಿ ಸೂಚನೆ ನೀಡಿದರು.
ನಂತರ ಇದೇ ಕೆರೆಯ ಬಳಿ ಕೆಬಿಜೆಎನ್ಎಲ್ ಆಲಮಟ್ಟಿ ಅರಣ್ಯ ವಿಭಾಗದ ನರ್ಸರಿಗೆ ಭೇಟಿ ನೀಡಿದ ಸಚಿವರು ಅಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.
ಬಳಿಕ ಭೂತ್ನಾಳ ಕೆರೆಯ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ನಿರ್ಮಿಸಲಾಗಿರುವ ಫುಡ್ ಕೋರ್ಟ್, ಉದ್ಯಾನ, ಮಕ್ಕಳ ಆಟಿಕೆಗಳು, ಕಾರಂಜಿಗಳು, ಬಯಲು ವ್ಯಾಯಾಮ ಶಾಲೆ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು.
ಈ ಅಭಿವೃದ್ಧಿ ಕಾಮಗಾರಿಗಳಿಂದಾಗಿ ವಿಜಯಪುರ ನಗರದ ಜೀವಸೆಲೆಗಳಲ್ಲಿ ಒಂದಾದ ಈ ಕೆರೆಗೆ ಹೊಸ ತೇಜಸ್ಸು ಬಂದಿದೆ. ಶೀಘ್ರದಲ್ಲೇ ಬಾಕಿ ಉಳಿದಿರುವ ಕೆಲಸಗಳನ್ನು ಪೂರ್ಣಗೊಳಿಸಿ, ನಗರದ ಜನತೆ ಈ ಕೆರೆಯ ಪ್ರಾಕೃತಿಕ ಸೌಂದರ್ಯವನ್ನು ಸವಿಯಲು ಅವಕಾಶ ಕಲ್ಪಿಸುವವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮೊಬೈಲ್ ಮೂಲಕ ಕರೆ ಮಾಡಿ ಸೂಚನೆ ನೀಡಿದರು.
ಅಲ್ಲಿಂದ ಐತಿಹಾಸಿಕ ಬೇಗಂ ತಲಾಬ್ ಕೆರೆಗೆ ಭೇಟಿ ನೀಡಿದ ಸಚಿವರು, ಈ ಹಿಂದೆ ತಾವು ಜಲಸಂಪನ್ಮೂಲ ಸಚಿವರಾಗಿದ್ದಾಗ R ಕೆರೆಯ ಆವರಣದಲ್ಲಿ ಅಭಿವೃದ್ಧಿಗೆ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಅಲ್ಲದೇ, ಈ ಅವಧಿಯಲ್ಲಿ ಬೇಗಂ ತಾಲಾಬ್ ಮತ್ತು ಭೂತ್ನಾಳ ಕೆರೆಗಳನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಕೈಗೊಂಡಿರುವ ಸೌಂದರ್ಯೀಕರಣದ ಕ್ರಮಗಳು ಮುಕ್ತಾಯದ ಹಂತ ತಲುಪಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿವೆ ಎಂದು ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ

ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ

ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ಕೆ.ಎಂ.ಕೃಷ್ಣನಾಯಕ ಶಾಸಕರಾಗುತ್ತಾರೆ :ನಿಖಿಲ್ ಭವಿಷ್ಯ
    In ವಿಶೇಷ ಲೇಖನ
  • ಯಲಗೂರೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ರಾಮನವಮಿ
    In (ರಾಜ್ಯ ) ಜಿಲ್ಲೆ
  • SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ
    In (ರಾಜ್ಯ ) ಜಿಲ್ಲೆ
  • ನೆಮ್ಮದಿ ಜೀವನಕ್ಕೆ ಸೈ ಎನಿಸಿಕೊಂಡ ಗ್ರಾಮೀಣ ಮಹಿಳೆ ಸಾವಿತ್ರಿ
    In ವಿಶೇಷ ಲೇಖನ
  • ಏಪ್ರಿಲ್ ನಿಂದ ಭಾರತ ಜನಗಣತಿ-೨೦೨೭ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.