ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾನಗರ ಪಾಲಿಕೆಯ ವಿವಿಧ ಕಾರಣಗಳಿಂದ ಖಾಲಿ ಇರುವ ವಾರ್ಡ ನಂ.೨೯ರ ಸ್ಥಾನಕ್ಕೆ ಉಪ ಚುನಾವಣೆಗೆ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ನಾಮಪತ್ರ ಸಲ್ಲಿಸಲು ನವೆಂಬರ್ ೧೧, ೨೦೨೪ ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನಾ ಕಾರ್ಯ ನವೆಂಬರ್ ೧೨,೨೦೨೪ ರಂದು ನಡೆಯಲಿದೆ. ನವೆಂಬರ್ ೧೪,೨೦೨೪ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅವಶ್ಯವಿದ್ದಲ್ಲಿ ನವೆಂಬರ್ ೨೩, ೨೦೨೪ ರಂದು ಬೆಳಿಗ್ಗೆ ೭ ರಿಂದ ಸಂಜೆ ೫ ಗಂಟೆವರೆಗೆ ಮತದಾನ ನಡೆಯಲಿದೆ. ನವೆಂಬರ್ ೨೬,೨೦೨೪ ರಂದು ಚುನಾವಣೆ ಕಾರ್ಯ ಮುಕ್ತಾಯಗೊಳ್ಳುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
