Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲೆಯಲ್ಲಿ ಮಾದರಿ ಅಂಗನವಾಡಿಗಳ ಅಭಿವೃದ್ಧಿಗೆ ಕ್ರಮ
(ರಾಜ್ಯ ) ಜಿಲ್ಲೆ

ಜಿಲ್ಲೆಯಲ್ಲಿ ಮಾದರಿ ಅಂಗನವಾಡಿಗಳ ಅಭಿವೃದ್ಧಿಗೆ ಕ್ರಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೩೪ ಅಂಗನವಾಡಿಗಳನ್ನು ಆಕರ್ಷಕ ಅಂಗನವಾಡಿ ಕೇಂದ್ರಗಳಾಗಿ ಅಭಿವೃದ್ಧಿ | ಜಿಪಂ ಸಿಇಓ ರಿಷಿ ಆನಂದ ಸ್ಪಷ್ಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಮಾದರಿ ಅಂಗನವಾಡಿಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ೩೪ ಅಂಗನವಾಡಿಗಳನ್ನು ಮಾದರಿ ಹಾಗೂ ಆಕರ್ಷಕ ಅಂಗನವಾಡಿ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಗ್ರಾಮೀಣ ಮಟ್ಟದ ಮಕ್ಕಳ ಶೈಕ್ಷಣಿಕ ಜೀವನದ ಅಡಿಪಾಯವು ಅತ್ಯಂತ ಸದೃಢವಾಗುವುದರ ಜೊತೆಗೆ ಮಕ್ಕಳ ಹಾಜರಾತಿಯ ನಿರಂತರತೆಯನ್ನು ಕಾಯ್ದುಕೊಂಡು ಮಕ್ಕಳ ಸ್ನೇಹಿ ಕೇಂದ್ರಗಳನ್ನಾಗಿಸುವುದಾಗಿದೆ. ಆಟೋಟಗಳಲ್ಲಿ ಪ್ರೋತ್ಸಾಹ ದೊರೆತು ದೈಹಿಕ ಹಾಗೂ ಮಾನಸಿಕ ಸದೃಢತೆ ಬೆಳೆಸುವುದಾಗಿದೆ. ಈಗಾಗಲೇ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಎಲ್ಲಾ ೩೪ ಅಂಗನವಾಡಿ ಕೇಂದ್ರಗಳಿಗೆ ಕಡ್ಡಾಯವಾಗಿ ಬಾಲ ಸ್ನೇಹಿ ಪೇಂಟಿಂಗ್, ಬಯೋಫೆನ್ಸಿಂಗ್, ಪೌಷ್ಟಿಕ ಕೈತೋಟ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ೨,೭೫೫ ಅಂಗನವಾಡಿ ಕೇಂದ್ರಗಳಿದ್ದು, ಅದರಲ್ಲಿ ೧,೪೨೫ ಸ್ವಂತ ಕಟ್ಟಡಗಳಲ್ಲಿ ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ೨೦೨೨-೨೩ನೇ ಸಾಲಿನಲ್ಲಿ ಒಟ್ಟು ೧೦೦ ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ ೬೬ ಅಂಗನವಾಡಿ ಕೇಂದ್ರಗಳು ಈಗಾಗಲೇ ಪೂರ್ಣಗೊಂಡಿದ್ದು, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣಕ್ಕಾಗಿ ಬಾಲಸ್ನೇಹಿ ಪೇಂಟಿಂಗ್‌ನಿಂದ ಕೂಡಿರುವ ಸುಂದರವಾದ ಕೊಠಡಿ, ಪ್ರತ್ಯೇಕವಾದ ಮತ್ತು ವ್ಯವಸ್ಥಿತವಾದ ಅಡುಗೆ ಕೊಠಡಿ ನಿರ್ಮಾಣ, ದಾಸ್ತಾನು ಕೊಠಡಿ ಹಾಗೂ ಶೌಚಾಲಯ, ಮಕ್ಕಳಿಗೆ ಪ್ರತ್ಯೇಕ ಕೈತೊಳೆಯುವ ಸ್ಥಳ, ಕೇಂದ್ರದ ಒಳ-ಹೊರಗೂ ಅತ್ಯಾಕರ್ಷಕ ಬಾಲಸ್ನೇಹಿ ಪೇಂಟಿಂಗ್, ಅಂಗನವಾಡಿ ಕೇಂದ್ರಗಳಿಗೆ ಅವಶ್ಯಕವಾದ ನೀರಿನ ಸೌಕರ್ಯ, ವಿದ್ಯುತ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕೇಂದ್ರದ ಆವರಣದಲ್ಲಿ ಕಿಚನ್ ಗಾರ್ಡನ್ ಹಾಗೂ ಜೈವಿಕ ಬೇಲಿ ನಿರ್ಮಾಣ ಮಾಡಲಾಗಿದೆ. ಹೆಚ್ಚಿನ ಸ್ಥಳಾವಕಾಶ ಇರುವ ಅಂಗನವಾಡಿ ಕೇಂದ್ರಗಳಿಗೆ ಕಂಪೌಂಡ ನಿರ್ಮಾಣವೂ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೆನಪುಗಳ ಮಳಿಗೆಯಲಿ ಇನ್ನಾರಿಲ್ಲ ನಿನ್ನ ಹೊರತು
    In ವಿಶೇಷ ಲೇಖನ
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.