Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಲಾಖೆ ಯೋಜನೆ-ಕಾರ್ಯಕ್ರಮಗಳ ಪೂರ್ಣ ಮಾಹಿತಿ ಸಲ್ಲಿಸಿ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಇಲಾಖೆ ಯೋಜನೆ-ಕಾರ್ಯಕ್ರಮಗಳ ಪೂರ್ಣ ಮಾಹಿತಿ ಸಲ್ಲಿಸಿ :ಡಿಸಿ ಟಿ.ಭೂಬಾಲನ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಧಾನಮಂಡಲದ ಎಸ್ಸಿ-ಎಸ್ಟಿ ಸಮಿತಿಯಿಂದ ಜಿಲ್ಲೆಯ ಪ್ರಗತಿ ಪರಿಶೀಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ನ.೧೫ರಂದು ಬಾಗಲಕೋಟೆ ಜಿಲ್ಲೆಗೆ ಆಗಮಿಸಿ, ಅಂದು ಬೆಳಿಗ್ಗೆ ವಿಜಯಪುರ ಜಿಲ್ಲೆಯಲ್ಲಿ ಎಸ್ಸಿ-ಎಸ್ಟಿ ಸಮುದಾಯದವರ ಅಭಿವೃದ್ದಿಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆ-ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮ-ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಮೂರು ದಿನಗಳೊಳಗಾಗಿ ಸಲ್ಲಿಸಬೇಕು. ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ವಿಧಾನಮಂಡಲ ಸಮಿತಿಯು ಬೆಳಗಾವಿ ವಿಭಾಗದಲ್ಲಿ ಅಧ್ಯಯನ ಪ್ರವಾಸ ಕೈಗೊಂಡು ಬಾಗಲಕೋಟೆಯಲ್ಲಿ ವಿಜಯಪುರ ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಲಿದೆ. ಈ ಸಭೆಯಲ್ಲಿ ಇಲಾಖೆಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಸಾಮಾನ್ಯ ಕಾರ್ಯಕ್ರಮಗಳು ಮತ್ತು ಎಸ್‌ಸಿಪಿ-ಟಿಎಸ್‌ಪಿ ಯೋಜನೆಗಳಡಿಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯವರ ಕಲ್ಯಾಣ ಕಾರ್ಯಕ್ರಮಗಳು ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿರುವುದರಿಂದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಯೋಜನೆ-ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಒದಗಿಸಬೇಕು. ಯಾವುದೇ ಕಾರಣಕ್ಕೂ ಲೋಪವಾಗದಂತೆ ಸಮಗ್ರ ಮಾಹಿತಿ ಒದಗಿಸಬೇಕು. ಒಂದು ವೇಳೆ ತಪ್ಪು ಮಾಹಿತಿ ಒದಗಿಸಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಂಖ್ಯೆ, ಈ ಪೈಕಿ ಮಹಿಳೆಯರು ಹಾಗೂ ಪುರುಷರ ಸಂಖ್ಯೆ. ಇಲಾಖೆಯಿಂದ ಕಳೆದ ೨೦೨೧-೨೦೨೪ನೇ ಸಾಲಿನವರೆಗೆ ಕಳೆದ ಮೂರು ವರ್ಷಗಳಲ್ಲಿ ಬಿಡುಗಡೆಯಾದ ಅನುದಾನ, ಎಸ್‌ಸಿಪಿ-ಟಿಎಸ್‌ಪಿ ಯೋಜನೆಗಗೆ ಹಂಚಿಕೆ-ಬಿಡುಗಡೆಯಾದ ಹಾಗೂ ಖರ್ಚಾದ ಅನುದಾನ, ವಿದ್ಯಾರ್ಥಿನಿಲಯ, ವಸತಿ ಶಾಲೆ, ನಿರ್ಮಾಣಕ್ಕೆ ಕಂದಾಯ-ಅರಣ್ಯ ಇಲಾಖೆ ಮತ್ತು ಇತರೆ ಇಲಾಖೆಗಳು ಹಸ್ತಾಂತರಿಸಬೇಕಾಗಿರುವ ತಾಲೂಕಾವಾರು ನಿವೇಶನಗಳ ಸಂಖ್ಯೆ, ವಿದ್ಯಾರ್ಥಿನಿಲಯ, ವಸತಿ ನಿಲಯ ಕಾಮಗಾರಿಗಳ ಪ್ರಗತಿ ವಿವರ, ಇಲಾಖೆಯಿಂದ ಸಮುದಾಯದ ಏಳಿಗೆಗಾಗಿ ಕಾರ್ಯಕ್ರಮಗಳ ಪ್ರಗತಿ ವಿವರ, ಎಸ್ಸಿ-ಎಸ್ಟಿ ಸಮಸ್ಯೆಗಳಿಗೆ ಕಳೆದ ಮೂರು ವರ್ಷಗಳಲ್ಲಿ ಕೈಗೊಂಡ ಕ್ರಮಗಳ ವಿವರ, ದೌರ್ಜನ್ಯ, ಕೋಮುಗಲಭೆ, ಅಂತರ್‌ಜಾತಿ ವಿವಾಹ ಹಾಗೂ ಇತರೆ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರಕ್ಕಾಗಿ ಕೈಗೊಂಡಿರುವ ಕ್ರಮಗಳ ಸಂಪೂರ್ಣ ವಿವರವನ್ನು ಸಲ್ಲಿಸುವಂತೆ ಸೂಚಿಸಲಾಯಿತು.
ವಿದ್ಯಾರ್ಥಿನಿಲಯಗಳಿಗೆ ಕಲ್ಪಿಸಲಾಗಿರುವ ಮೂಲಭೂತ ಸೌಕರ್ಯ, ವಿದ್ಯಾರ್ಥಿನಿಲಯಗಳ ಕಟ್ಟಡಗಳ ನಿರ್ಮಾಣ, ಸಮುದಾಯ ಭವನಗಳ ನಿರ್ಮಾಣದ ತಾಲೂಕಾವಾರು ಪ್ರಗತಿ ವಿವರ, ವಿವಿಧ ನಿಗಮಗಳಡಿಯಲ್ಲಿ ಸಾಧಿಸಿರುವ ಪ್ರಗತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಡಿ ವಸತಿ ಶಾಲೆಗಳ ವಿವರ ಸಲ್ಲಿಸುವಂತೆ ಸೂಚಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಎಸ್ಟಿ-ಎಸ್ಟಿ ಪಂಗಡಗಳಿಗೆ ತಾಲೂಕವಾರು ಒದಗಿಸಿರುವ ಸೌಲಭ್ಯಗಳ ವಿವರವನ್ನು ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಕಂದಾಯ ಇಲಾಖೆ, ಅರಣ್ಯ ಇಲಾಖೆ, ಒಳಾಡಳಿತ ಇಲಾಖೆ, ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಇಂಧನ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆ, ಅಬಕಾರಿ, ಜಲಸಂಪನ್ಮೂಲ ಇಲಾಖೆ, ನಗರಾಭಿವೃದ್ದಿ ಇಲಾಖೆ, ಸಹಕಾರ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳು-ಕಾರ್ಯಕ್ರಮಗಳು ಹಾಗೂ ಎಸ್ಸಿ-ಎಸ್ಟಿ ಸಮುದಾಯದ ಅಭಿವೃದ್ದಿಗಾಗಿ ಕೈಗೊಂಡಿರುವ ವಿವಿಧ ಯೋಜನೆ, ಕಾರ್ಯಕ್ರಮ, ಕಾಮಗಾರಿಗಳ ವಿವರವನ್ನು ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಡಿಎಸ್‌ಪಿ ಸುನೀಲ ಕಾಂಬಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್‌ಕುಮಾರ ಗುಣಾರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ

ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ

ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್

ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಕೆಯುಡಬ್ಲೂಜೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಐದಾರು ತಿಂಗಳಿಂದ ಸಾಮಾನ್ಯ ಸಭೆ ಮಾಡದ ನಾಲತವಾಡ ಪಪಂ
    In (ರಾಜ್ಯ ) ಜಿಲ್ಲೆ
  • ದೂರಾದ ದಂಪತಿಗಳನ್ನು ಬೆಸೆದ ಲೋಕ್ ಅದಾಲತ್
    In (ರಾಜ್ಯ ) ಜಿಲ್ಲೆ
  • ಆಷಾಢ ಏಕಾದಶಿ ದಿಂಡಿಯಾತ್ರೆ, ಪಂಢರಾಪುರಕ್ಕೆ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ತಾಲ್ಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರಕರಣ ಶೀಘ್ರ ಇತ್ಯರ್ಥಪಡಿಸುವಲ್ಲಿ ಲೋಕ್ ಅದಾಲತ್ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಮಹಿಳಾ ಘಟಕಗಳನ್ನು ಸ್ಥಾಪಿಸಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶ್ವ ಜನಸಂಖ್ಯಾ-ಡೆಂಗೀ ಮಾಸಾಚರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕೃಷ್ಣೆಗೆ ಇಳಿದು ರೈತರ ವಿನೂತನ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.