ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೇಂದ್ರದ ಓಐಒ-(National Level Institutional Monitor)ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಸೂಚನೆಯಂತೆ ಗಾಂಧಿ ಗ್ರಾಮ ರೂರಲ್ ಇನ್ಸ್ಟಿಟ್ಯೂಟ್ ತಮಿಳುನಾಡು ಅಧಿಕಾರಿಗಳಾದ ಡಾ ಎ.ಆರ್.ಮಣಿ ಹಾಗೂ ಇ.ಆರ್. ಕೆ ರೋಸಿವ್ ಇವರು ನ.೬ರಂದು ವಿಜಯಪುರ ಜಿಲ್ಲೆಗೆ ಭೇಟಿ ನೀಡಿ, ವಿಜಯಪುರ ಜಿಲ್ಲೆಯ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ವಿಜಯಪುರ ಜಿಲ್ಲೆಯ ೦೪ ತಾಲ್ಲೂಕುಗಳಾದ ಚಡಚಣ, ಬಸವನ ಬಾಗೇವಾಡಿ, ಇಂಡಿ ಹಾಗೂ ದೇವರ ಹಿಪ್ಪರಗಿ ತಾಲ್ಲೂಕುಗಳಲ್ಲಿ ಆಯ್ಕೆ ಮಾಡಲಾದ ೧೦ ವಿವಿಧ ಗ್ರಾಮ ಪಂಚಾಯತಿಗಳಿಗೆ ದಿನಾಂಕ: ೦೭-೧೧-೨೦೨೪ ರಿಂದ ೧೧-೧೧-೨೦೨೪ರ ವರೆಗೆ ಭೇಟಿ ನೀಡಲಿದ್ದು, ಕೇಂದ್ರ ಪ್ರಾಯೋಜಕತ್ವ ಯೋಜನೆಗಳ ಅನುಷ್ಠಾನ ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಓಖಐಒ), ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ (Pಒಂಙ-ಉ), ನ್ಯಾಷನಲ್ ಸೀಶಿಯಲ್ ಅಸಿಸ್ಟನ್ಸ್ ಪ್ರೊಗ್ರಾಮ್ ( NSAP), SAGY, PMKSY, DILRMP, DDU-GKY RSETI/RUDSET, SVAMITVAಯೋಜನೆಗಳು, ಕೃಷಿ ಇಲಾಖೆಯ ಅರ್ಹ ಫಲಾನುಭವಿಗಳ ಜೊತೆಗೆ ಚರ್ಚಿಸಿ, ಮಾಹಿತಿ ಸಂಗ್ರಹಿಸುವ ಕುರಿತು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಅನುಷ್ಠಾನಗೊಳಿಸಿದ ವಿವಿಧ ಕಾಮಗಾರಿಗಳ ಪರಿಶೀಲನೆ ಮಾಡಿ ವರದಿಯನ್ನು ಸಿದ್ದಪಡಿಸಿ ತದನಂತರ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮಾಹಿತಿ ಸಂಗ್ರಹ ವರದಿಯ ನಮೂನೆಯ ಪ್ರಕಾರ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಸಲ್ಲಿಸಲಿದ್ದು, ಈ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಮಾತನಾಡಿ, ಎನ್‌ಎಲ್‌ಎಂ ತಂಡದ ಅಧಿಕಾರಿಗಳು ಭೇಟಿ ನೀಡಲು ನಿರ್ಧರಿಸಿರುವ ಗ್ರಾಮ ಪಂಚಾಯತಿಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಸಮೀಕ್ಷೆಯ ನಿಗದಿತ ನಮೂನೆಗಳನ್ನು ಪಡೆದು ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅವರೊಂದಿಗೆ ಗ್ರಾಮ ಪಂಚಾಯತಿಗಳ ಕಾಮಗಾರಿಗಳ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಅಗತ್ಯ ಸಹಕಾರ ಒದಗಿಸಿ, ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎನ್‌ಎಲ್‌ಎಂ ತಂಡದ ಅಧಿಕಾರಿಗಳು ನಿಗದಿತ ಸಮಯದಲ್ಲಿ ಎಲ್ಲಾ ೦೪ ತಾಲ್ಲೂಕಿನ ಆಯ್ಕೆ ಮಾಡಲಾದ ೧೦ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಸಮೀಕ್ಷೆ ಕೈಗೊಂಡು ಸಿದ್ದಪಡಿಸುವ ಸಂಪೂರ್ಣ ವರದಿಯನ್ನು ಕೊನೆಯ ದಿನದಂದು ಸಿಇಓ ರವರಿಗೆ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವಾಲಯಕ್ಕೆ ಸಲ್ಲಿಸಲಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿಗಳಾದ ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕರು(ಡಿ.ಆರ್.ಡಿ.ಎ ಕೋಶ) ಬಿ. ಎಸ್. ರಾಠೋಡ, ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

