Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026

ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ

ಇಂದು ಕನ್ನೂರ ಸವಾಯಿ ವಸ್ತಿಯಲ್ಲಿ ಶಾಹನೂರವಲಿ ದಗಾ೯ ಜಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವಿಕೆ ಆರಂಭಕ್ಕೆ ಡಿಸಿ ಸೂಚನೆ
(ರಾಜ್ಯ ) ಜಿಲ್ಲೆ

ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವಿಕೆ ಆರಂಭಕ್ಕೆ ಡಿಸಿ ಸೂಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೈತರಿಗೆ ಹಣ ಪಾವತಿಯಲ್ಲಿ ವಿಳಂಬ ಮಾಡುವಂತಿಲ್ಲ | ಕಾರ್ಖಾನೆಗಳ ಮೇಲೆ ಕಠಿಣ ಕ್ರಮದ ಎಚ್ಚರಿಕೆ | ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿರುವ ಎಲ್ಲ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಹಂಗಾಮಿಗೆ ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸಬೇಕು. ಬಸವೇಶ್ವರ ಸಕ್ಕರೆ ಕಾರ್ಖಾನೆ ಕಬ್ಬು ಒದಗಿಸಿದ ರೈತರಿಗೆ ಬಿಲ್ಲು ಪಾವತಿಯಲ್ಲಿ ವಿಳಂಬ, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕಬ್ಬು ನುರಿಸುವುದು ಸೇರಿದಂತೆ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಬಸವೇಶ್ವರ ಸಕ್ಕರೆ ಕಾರ್ಖಾನೆಗೆ ಕಬ್ಬು ನುರಿಸುವುದು ತಡೆಹಿಡಿಯಲಾಗಿದೆ ಎಂದು ತಿಳಿಸಿದ ಅವರು, ಉಳಿದಂತೆ ಎಲ್ಲ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯ ಆರಂಭಿಸಿ, ಕಬ್ಬು ಒದಗಿಸಿದ ರೈತರಿಗೆ ಯಾವುದೇ ವಿಳಂಬ ಮಾಡದೇ ನಿಗದಿತ ೧೪ ದಿನಗಳೊಳಗಾಗಿ ಬಿಲ್‌ನ್ನು ಪಾವತಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಕಬ್ಬು ನುರಿಸುವ ಮೊದಲು ಎಲ್ಲ ಸಕ್ಕರೆ ಕಾರ್ಖಾನೆಗಳು ತೂಕದ ಯಂತ್ರಗಳು ಡಿಜಿಟಲೀಕರಣಗೊಂಡಿರುವ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು. ಡಿಜಿಟಲೀಕರಣಗೊಳ್ಳದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ನುರಿಸಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ ಅವರು, ಸ್ಟ್ಯಾಪಿಂಗ್ ಕಾರ್ಯ ಪೂರ್ಣಗೊಂಡಿರಬೇಕು. ಪಕ್ವವಾಗಿರುವ ಕಬ್ಬನ್ನು ಆದ್ಯತೆಯ ಮೇರೆಗೆ ಕಟಾವು ಮಾಡಿ ನುರಿಸಬೇಕು. ಕೆಎಸ್‌ಪಿಸಿಬಿಯಿಂದ ನಿರ್ಧರಿತ ಕಾರ್ಖಾನೆ ನುರಿಸುವ ಸಾಮರ್ಥ್ಯಕ್ಕನುಗುಣವಾಗಿ ಮಾತ್ರ ಕಬ್ಬು ನುರಿಸಬೇಕು. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕಬ್ಬು ನುರಿಸದಂತೆ ಅವರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು. ಈ ಖಾತೆಯಿಂದಲೇ ಸಕ್ಕರೆ, ಮಾರಾಟ ವ್ಯವಹಾರ ನಿರ್ವಹಣೆಯಾಗಬೇಕು. ಈ ಕುರಿತು ಆಹಾರ ಮತ್ತು ನಾಗರಿಕರ ಸಬರಾಜು ಇಲಾಖೆ ಉಪನಿರ್ದೇಶಕರು ದೃಢೀಕರಣ ಮಾಡುವಂತೆ ತಿಳಿಸಿದರು. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಉಪವಿಭಾಗಾಧಿಕಾರಿಗಳು, ಆಹಾರ ಮತ್ತು ನಾಗರಿಕರ ಸಬರಾಜು ಇಲಾಖೆ ಉಪನಿರ್ದೇಶಕರು ಕಾಲಕಾಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕಬ್ಬು ನುರಿಸುವ ಕಾರ್ಖಾನೆಗಳು ಎಲ್ಲ ನಿಯಮಗಳನು ಪಾಲಿಸುತ್ತಿರುವ ಕುರಿತು ಪರಿಶೀಲನೆ ನಡೆಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಆಹಾರ ಮತ್ತು ನಾಗರಿಕರ ಸಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಆಹಾರ ಇಲಾಖೆ ಶಿರಸ್ತೇದಾರ ಅಮರೇಶ ತಾಂಡೂರ ಸೇರಿದಂತೆ ವಿವಿಧ ಅಧಿಕಾರಿಗಳು, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದರು.

“ರೈತರಿಗೆ ಬಿಲ್ ಪಾವತಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ನಿಗದಿತ ಅವಧಿಯೊಳಗೆ ಬಿಲ್ ಪಾವತಿಗೆ ಕ್ರಮ ವಹಿಸಬೇಕು. ಸಕ್ಕರೆ ಕಾರ್ಖಾನೆಗಳು ಕಬ್ಬು ಸಾಗಾಣಿಕೆ ವಾಹನ ಚಾಲಕರಿಗೆ ಸೂಕ್ತ ತಿಳುವಳಿಕೆ ಮೂಡಿಸಬೇಕು. ಕಬ್ಬು ಸಾಗಾಣಿಕೆ ಮಾಡುವ ಪ್ರತಿಯೊಂದು ಟ್ರ‍್ಯಾಕ್ಟರ್-ವಾಹನಗಳಿಗೆ ಕಡ್ಡಾಯವಾಗಿ ರಿಫ್ಲೆಕ್ಟರ್‌ಗಳನ್ನು ಅಳವಡಿಸಬೇಕು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು.”

– ಪ್ರಸನ್ನ ದೇಸಾಯಿ
ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026

ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ

ಇಂದು ಕನ್ನೂರ ಸವಾಯಿ ವಸ್ತಿಯಲ್ಲಿ ಶಾಹನೂರವಲಿ ದಗಾ೯ ಜಾತ್ರೆ

ಚಕ್ಕೋಡನಹಳ್ಳಿ ಕಾಳಮ್ಮ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026
    In ದಿನಪತ್ರಿಕೆ
  • ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಇಂದು ಕನ್ನೂರ ಸವಾಯಿ ವಸ್ತಿಯಲ್ಲಿ ಶಾಹನೂರವಲಿ ದಗಾ೯ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಚಕ್ಕೋಡನಹಳ್ಳಿ ಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಜನಗಣತಿ ಮೇಲ್ವಿಚಾರಕರರಿಗೆ & ಗಣತಿದಾರರಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
  • ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್
    In (ರಾಜ್ಯ ) ಜಿಲ್ಲೆ
  • ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ
    In (ರಾಜ್ಯ ) ಜಿಲ್ಲೆ
  • ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ
    In (ರಾಜ್ಯ ) ಜಿಲ್ಲೆ
  • ಏ.11 ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ ಅನುಸಂಧಾನ-11
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.