ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾ ಭವನದಲ್ಲಿ ನ.೮ ರಂದು ಬೆಳಗ್ಗೆ ೧೦ ಗಂಟೆಗೆ ಮಹಾವಿದ್ಯಾಲಯದ ೨೦೨೪-೨೫ ನೇ ಶೈಕ್ಷಣಿಕ ವರ್ಷದ ಕ್ರೀಡಾ ಮತ್ತು ಸಾಂಸ್ಕ್ರತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಮ್ಮಿಕೊಂಡಿದೆ. ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ವಹಿಸುವರು. ವಿಜಯಪುರದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಆರಕ್ಷಕ ಟಿ.ಮಲ್ಲೇಶ್ ಸಮಾರಂಭ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಿಜಯಪುರದ ಎ.ಎಸ್.ಪಿ. ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎಸ್.ಬೆಳಗಲಿ, ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ವಹಿಸುವರು. ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬಸವರಾಜ ನಾಯಕೋಡಿ ಉಪಸ್ಥಿತಿ ಇರುವರು ಎಂದು ಮಹಾವಿದ್ಯಾಲಯದ ಸಾಂಸ್ಕ್ರತಿಕ ಚಟುವಟಿಕೆಗಳ ವಿಭಾಗದ ಕಾರ್ಯಾಧ್ಯಕ್ಷ ಡಾ.ಬಸವರಾಜ ಸಾಲವಾಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
