ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಅಮತೂರ ಸಕ್ಲಿಂಗ್ ಅಸೋಷಿಯಸನ್ ೧೫ ನೇ ಟೈಮ ರೋಡ್ ಚಾಂಪಿಯನ್ ಷಿಪ್ ಮತ್ತು ಮೈಸೂರು ಜಿಲ್ಲಾ ಅಮೆಚೂರ ಸೈಕ್ಲಿಂಗ್ ಅಸೋಷಿಯೇಶನ್ ಇವರ ಸಂಯುಕ್ತಾಶ್ರಯದಲ್ಲಿ ನಡೆದ ೧೪ ವಯೋಮಾನದೊಳಗಿನ ಬಾಲಕಿಯರ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕರೀಷ್ಮಾ ಮಲೀಕ್‌ಸಾಬ ತಟಗಾರ ೧೦ ಕಿ.ಮೀ ಟಿ.ಟಿ ಸ್ಟೇಟ್ ರೋಡ್ ಸೈಕ್ಲಿಂಗ್‌ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿಯ ಈ ಸಾಧನೆಗೆ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಲ್.ಚವ್ಹಾಣ್, ಕಾರ್ಯದರ್ಶಿ ರಾಜಶೇಖರ ಚವ್ಹಾಣ್, ಕಾರ್ಯಾಧ್ಯಕ್ಷ ಕೆ.ಜಿ.ರಾಠೋಡ, ಮುಖ್ಯ ಗುರುಗಳಾದ ಇ.ಡಿ.ಲಮಾಣಿ, ಎಂ.ಎಲ್.ಚವ್ಹಾಣ್ ಹಾಗೂ ಆಡಳಿತ ಮಂಡಳಿ, ಶಿಕ್ಷಕ ಸಿಬ್ಬಂದಿ ಹರ್ಷವ್ಯಕ್ತಪಡಿಸಿದ್ದಾರೆ.

