ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ೧ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ೨೦೨೪-೨೫ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್-೧೦ ರವರೆಗೆ ವಿಸ್ತರಿಸಲಾಗಿದೆ.
ಅರ್ಹರು ಅರ್ಜಿಯನ್ನು ಆನ್‌ಲೈನ್ www.ssp.postmatric.karnataka.gov.in ಮೂಲಕ ನವೆಂಬರ್,೧೦ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ
ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
