ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-೨೦೧೫ ರ ಸೆಕ್ಷನ್ ೮೦ ಮತ್ತು ೮೧ರನ್ವಯ ೦೫ ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ೦೧ ಲಕ್ಷ ರೂಗಳ ದಂಡ ವಿಧಿಸಬಹುದಾಗಿದೆ. ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾಗಿದ್ದರೆ ಶಿಕ್ಷೆಯ ಅವಧಿ ೩ ವರ್ಷಗಳಿಗೆ ಕಡಿಮೆ ಇಲ್ಲದಂತೆ ೭ ವರ್ಷಗಳವರೆಗೆ ವಿಸ್ತರಣೆ ಮಾಡಬಹುದಾಗಿದೆ.
೨೦೨೪ರ ನವೆಂಬರ್ ತಿಂಗಳನ್ನು ಅಂತರಾಷ್ಟ್ರೀಯ ದತ್ತು ಮಾಸಾಚರಣೆಯಾಗಿ ಆಚರಿಸಲಾಗುತ್ತಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಜಯಪುರ ಇವರ ವತಿಯಿಂದ ಮಕ್ಕಳ ಮಾರಾಟ ಅಪರಾಧದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಜಯಪುರ ದೂರವಾಣಿ ಸಂಖ್ಯೆ: ೦೮೩೫೨೨೯೫೨೬೧ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
