ಮತದಾರ ಪಟ್ಟಿ ಪರಿಷ್ಕರಣೆ: ನಾಲ್ಕು ದಿನಗಳ ಕಾಲ ವಿಶೇಷ ಅಭಿಯಾನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಹೆಸರು ತೆಗೆದು ಹಾಕುವ ಕುರಿತು ನವೆಂಬರ್ ೯,೧೦ ಹಾಗೂ ೨೩ ಮತ್ತು ೨೪ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫-೩೦ಗಂಟೆಯವರೆಗೆ ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ವಿಶೇಷ ಅಭಿಯಾನ ದಿನಗಳಂದು ಎಲ್ಲ ಬಿಎಲ್‌ಓಗಳು ತಮ್ಮ ಮತಗಟ್ಟೆಗಳಲ್ಲಿ ಉಪಸ್ಥಿತರಿದ್ದು ಸಾರ್ವಜನಿಕರಿಗೆ ಅಗತ್ಯ ನೆರವು ಒದಗಿಸಲಿದ್ದಾರೆ. ವಿಶೇಷ ಅಭಿಯಾನ ದಿನಗಳಂದು ಸಾರ್ವಜನಿಕರು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ, ವಗಾವಣೆ, ಹೆಸರು ತೆಗೆದು ಹಾಕುವುದು ಸೇರಿದಂತೆ ಈ ವಿಶೇಷ ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

